ಪಕ್ಷಕ್ಕಿಂತ ದೊಡ್ಡವರಿಲ್ಲ: ಪುತ್ತಿಲಗೆ ಪಕ್ಷ ನಿಷ್ಠೆಯ ಪಾಠ ಮಾಡಿದ ಸಂಸದ ಪ್ರತಾಪ್ ಸಿಂಹ

ಪುತ್ತೂರಿನಲ್ಲಿ ಬಿಜೆಪಿ ವತಿಯಿಂದ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಅರುಣ್ ಕುಮಾರ್ ಪುತ್ತಿಲರವರೇ, ನೀವು ಪುತ್ತೂರಲ್ಲಿ ಮಾಡಿದ ಶಕ್ತಿ ಪ್ರದರ್ಶನವನ್ನು ಮೈಸೂರಲ್ಲಿ ಮಾಡುವಷ್ಟು ಶಕ್ತಿ ನನಗೂ ಇದೆ. ಆದರೆ ನಾವು ನಮ್ಮ ಶಕ್ತಿ ಪ್ರದರ್ಶನ ಮಾಡಲಿಲ್ಲ. ಏಕೆಂದರೆ ನಮಗೆ ಪಕ್ಷ ನಿಷ್ಠೆ ಮುಖ್ಯ ಎಂದು ಹೇಳಿದ್ದಾರೆ. 

ಪಕ್ಷಕ್ಕಿಂತ ದೊಡ್ಡವರಿಲ್ಲ: ಪುತ್ತಿಲಗೆ ಪಕ್ಷ ನಿಷ್ಠೆಯ ಪಾಠ ಮಾಡಿದ ಸಂಸದ ಪ್ರತಾಪ್ ಸಿಂಹ
ಪ್ರತಾಪ್ ಸಿಂಹ, ಪುತ್ತಿಲ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Apr 02, 2024 | 10:15 PM

ಮಂಗಳೂರು, ಮಾರ್ಚ್​ 02: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಟಿಕೆಟ್​ ನೀಡುವಂತೆ ಹಿಂದೂ ಮುಖಂಡ ಅರುಣ್​ ಕುಮಾರ್​ ಪುತ್ತಿಲ (Arun Kumar Puthila) ಒತ್ತಾಯಿಸಿದ್ದರು. ಆದರೆ ಬಿಜೆಪಿ ಮಾತ್ರ ಟಿಕೆಟ್​ ನೀಡಿರಲಿಲ್ಲ. ಇದರಿಂದ ಕೋಪಗೊಂಡು ಪುತ್ತಿಲ ಪರಿವಾರ ಎಂಬ ಸಂಘಟನೆ ಕಟ್ಟಿಕೊಂಡು ಪಕ್ಷೇತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡರು. ಹಾಗಾಗಿ ಬಿಜೆಪಿ ಮತ್ತು ಪುತ್ತಿಲ ಮಧ್ಯೆ ಆಗಾಗ ಶೀತಲ ಸಮರ ನಡೆಯುತ್ತಿತ್ತು. ಇವರ ಜಗಳದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಜಯಗಳಿಸಿದ್ದರು. ಲೋಕಸಭೆ ಚುನಾವಣೆ ಹಿನ್ನೆಲೆ ಪುತ್ತಿಲ ಪರಿವಾರವನ್ನು ಸಂಧಾನದ ಮೂಲಕ ಮತ್ತೆ ಬಿಜೆಪಿಗೆ ಕರೆತರಲಾಗಿದೆ. ಇದೀಗ ಸಂಸದ ಪ್ರತಾಪ್ ಸಿಂಹ ಪುತ್ತಿಲಗೆ ಪಕ್ಷ ನಿಷ್ಠೆಯ ಪಾಠ ಮಾಡಿದ್ದಾರೆ.

ನಾವು ಯಾರೂ ಪಕ್ಷಕ್ಕಿಂತ ದೊಡ್ಡವರಲ್ಲ, ಪಕ್ಷವೇ ದೊಡ್ಡದು: ಪ್ರತಾಪ್ ಸಿಂಹ

ಪುತ್ತೂರಿನಲ್ಲಿ ಬಿಜೆಪಿ ವತಿಯಿಂದ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಅರುಣ್ ಕುಮಾರ್ ಪುತ್ತಿಲರವರೇ, ನೀವು ಪುತ್ತೂರಲ್ಲಿ ಮಾಡಿದ ಶಕ್ತಿ ಪ್ರದರ್ಶನವನ್ನು ಮೈಸೂರಲ್ಲಿ ಮಾಡುವಷ್ಟು ಶಕ್ತಿ ನನಗೂ ಇದೆ. ಆದರೆ ನಾವು ನಮ್ಮ ಶಕ್ತಿ ಪ್ರದರ್ಶನ ಮಾಡಲಿಲ್ಲ. ಏಕೆಂದರೆ ನಮಗೆ ಪಕ್ಷ ನಿಷ್ಠೆ ಮುಖ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟಿಕೆಟ್​ ಕೈತಪ್ಪಿದ ಬೆನ್ನಲ್ಲೇ ನಳಿನ್ ಕುಮಾರ್ ಕಟೀಲ್​ಗೆ ಮಹತ್ವದ ಜವಾಬ್ದಾರಿ ನೀಡಿದ ಹೈಕಮಾಂಡ್

ನಾವು ಯಾರೂ ಪಕ್ಷಕ್ಕಿಂತ ದೊಡ್ಡವರಲ್ಲ, ಪಕ್ಷವೇ ದೊಡ್ಡದು. ನಾವು ವೈಯುಕ್ತಿಕವಾಗಿ ನಮ್ಮ ಶಕ್ತಿ ಪ್ರದರ್ಶನ ಮಾಡಬೇಕು ಅಂತ ಹೊರಟಿದ್ದರೆ ಮೈಸೂರಲ್ಲಿ ನಾನೂ ಶಕ್ತಿ ಪ್ರದರ್ಶನ ಮಾಡುತ್ತಿದೆ. ಸಂಘಟನೆಯೇ ಸೆಟೆದು ನಿಂತು ಒಬ್ಬ ವ್ಯಕ್ತಿಯ ಪರವಾಗಿ ನಿಂತ ಕ್ಷೇತ್ರ ಇದರೆ ಅದು ಪುತ್ತೂರು. ಅಷ್ಟು ಪ್ರೀತಿ ವಿಶ್ವಾಸವನ್ನ ನೀವು ಕಾರ್ಯಕರ್ತರ ಜೊತೆ ಬೆಳೆಸಿಕೊಂಡಿದ್ದೀರಿ ಎಂದಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್​ರನ್ನು ಹಾಡಿ ಹೊಗಳಿದ ಪ್ರತಾಪ್ ಸಿಂಹ

ನಾವು ಪಾರ್ಟಿ-ಗೀರ್ಟಿಯಾದರೂ ಮಾಡುತ್ತಿದ್ದೇವು. ಆದರೆ ನಳಿನಣ್ಣ ಡೆಲ್ಲಿಗೆ ಬಂದ್ರೂ ಗಂಜಿ ಊಟ, ಬೆಂಗಳೂರಿಗೆ ಬಂದ್ರೂ ಗಂಜಿ ಊಟ. ನಿಮ್ಮ ಜೀವನದಲ್ಲಿ ಒಳ್ಳೆ ಬಟ್ಟೆ ಹಾಕಲಿಲ್ಲ, ಓಡಾಡಲಿಲ್ಲ. ಯಾವಾಗಲೂ ಯಕ್ಷಗಾನ, ನಾಗಮಂಡಲ ಕಾರ್ಯಕ್ರಮಗಳು ಅಂತ ಓಡಾಡುತ್ತಿದ್ದರು. ಒಬ್ಬ ಶಾಸಕ ಸಂಸದನಾಗೋದು ಸುಲಭ ಇಲ್ಲ, ಅವರ ಹೆಂಡತಿ ಮಕ್ಕಳತ್ರ ಅವರ ಕಷ್ಟ ಕೇಳಬೇಕು. 2013ರಲ್ಲಿ ಎಲ್ಲಾ ಕಡೆ ಬಿಜೆಪಿ ಖಾಲಿಯಾಗ್ತಾ ಹೋಯ್ತು, ಶಾಸಕರೇ ಇಲ್ಲದ ಹಾಗೆ ಆಗಿ ಹೋಯ್ತು. ಆ ಸಂದರ್ಭದ್ಲಲೂ ನಳಿನ್ ಕುಮಾರ್ ಕಟೀಲ್ ಒಬ್ಬರೇ ನಿಂತು ಓಡಾಡಿದ್ದಾರೆ. ಒಬ್ಬ ಮನುಷ್ಯ ಎಷ್ಟು ಓಡಾಟ ನಡೆಸಬಹುದು ನೀವೇ ಯೋಚನೆ ಮಾಡಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್​ರನ್ನು ಪ್ರತಾಪ್ ಸಿಂಹ ಹಾಡಿ ಹೊಗಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್