AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್​ಲೈನ್ ಅರ್ಜಿ ಸಲ್ಲಿಕೆ ಇಲ್ಲ! ಆಯ್ಕೆ ಪ್ರಕ್ರಿಯೆ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ

Karnataka Rajyotsava Award 2025: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್​ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನು ಕರ್ನಾಟಕ ಸರ್ಕಾರ ಈ ಬಾರಿ ಕೈಬಿಟ್ಟಿದೆ. ಅದರ ಬದಲಿಗೆ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಿದ್ದು, ಈ ಸಮಿತಿಯು ಅರ್ಹ 70 ಮಂದಿ ಸಾಧಕರನ್ನು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಅಧಿಕೃತ ಘೋಷಣೆ ಮಾಡಿದ್ದಾರೆ.

ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್​ಲೈನ್ ಅರ್ಜಿ ಸಲ್ಲಿಕೆ ಇಲ್ಲ! ಆಯ್ಕೆ ಪ್ರಕ್ರಿಯೆ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Oct 09, 2025 | 9:46 AM

Share

ಬೆಂಗಳೂರು, ಅಕ್ಟೋಬರ್ 9: ಇನ್ನೇನು ಕೆಲವೇ ದಿನಗಳಲ್ಲಿ ಕನ್ನಡ ರಾಜ್ಯೋತ್ಸವ (Kannada Rajyotsava) ಬರುತ್ತಿದೆ. ಈ ವರ್ಷ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲ್ಪಡುತ್ತಿದ್ದು 70 ಮಂದಿ ಅರ್ಹ ಸಾಧಕರನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Award) ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ ಅಚ್ಚರಿಯ ವಿಚಾರವೆಂದರೆ, ಇದೇ ಮೊದಲ ಬಾರಿಗೆ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಕೈಬಿಡಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ.

ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಅಲ್ಲಿಸುವ ಪ್ರಕ್ರಿಯೆ ಇರುವುದಿಲ್ಲ. ಬದಲಿಗೆ ಇಲಾಖೆಯಿಂದ ರಚಿಸಲಾಗುವ ಸಲಹಾ ಸಮಿತಿ ಮತ್ತು ಉನ್ನತ ಆಯ್ಕೆ ಸಮಿತಿಗಳು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಿವೆ ಎಂದು ಸಚಿವರು ತಿಳಿಸಿದ್ದಾರೆ.

70 ಮಂದಿ ಅರ್ಹ ಗಣ್ಯರಿಗೆ ಈ ವರ್ಷ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ. ಆಯ್ಕೆ ಸಮಿತಿಯು ಅರ್ಹರ ಪಟ್ಟಿ ಸಿದ್ಧಪಡಿಸಲಿದೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳ ಬಗ್ಗೆ ನಿರ್ಧಾರವನ್ನು ಆಯ್ಕೆ ಸಮಿತಿಯೇ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಸಭೆಯಲ್ಲಿ ಮಹತ್ವದ ನಿರ್ಣಯ: ಮಾನದಂಡ ಪಾಲಿಸದೆ ಮನೆ ಕಟ್ಟಿದವರಿಗೆ ಗುಡ್​ ನ್ಯೂಸ್​

ಕನ್ನಡ ರಾಜ್ಯೋತ್ಸವ ಪ್ರಶಸ್ತಿಯು 5 ಲಕ್ಷ ರೂ. ನಗದು ಬಹುಮಾನ, 25 ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣೆಗೆಗಳನ್ನು ಒಳಗೊಂಡಿರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು