AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Victory Parade: ಆರ್​ಸಿಬಿ ಆಟಗಾರರ ವಿಜಯೋತ್ಸವ ಮೆರವಣಿಗೆ ಇಲ್ಲ, ಗೃಹ ಸಚಿವರು ಕೊಟ್ಟ ಕಾರಣ ಇಲ್ಲಿದೆ

ಆರ್​ಸಿಬಿ ತಂಡದ ಗೆಲುವಿಗೆ ಕರ್ನಾಟಕ ಸರ್ಕಾರ ಅಭಿನಂದನೆ ಸಲ್ಲಿಸಲಿದೆ. ಆದರೆ, ಭದ್ರತಾ ಕಾರಣಗಳಿಂದ ತೆರೆದ ವಾಹನದಲ್ಲಿ ಮೆರವಣಿಗೆ ನಡೆಯುವುದಿಲ್ಲ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ. ಆರ್​ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ. ನಂತರ ಎಲ್ಲ ಆಟಗಾರರು ಬಸ್‌ನಲ್ಲಿ ಸ್ಟೇಡಿಯಂಗೆ ತೆರಳಲಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

RCB Victory Parade: ಆರ್​ಸಿಬಿ ಆಟಗಾರರ ವಿಜಯೋತ್ಸವ ಮೆರವಣಿಗೆ ಇಲ್ಲ, ಗೃಹ ಸಚಿವರು ಕೊಟ್ಟ ಕಾರಣ ಇಲ್ಲಿದೆ
Rcb
ಪ್ರಸನ್ನ ಗಾಂವ್ಕರ್​
| Edited By: |

Updated on:Jun 04, 2025 | 1:45 PM

Share

ಬೆಂಗಳೂರು, ಜೂನ್​ 04: ಆರ್‌ಸಿಬಿ (RCB) ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದಿದೆ. ಹೀಗಾಗಿ ಇಂದು ವಿಕ್ಟರಿ ಪರೇಡ್ ಇಂದು ನಡೆಸುವ ಸಾಧ್ಯತೆ ಇತ್ತು. ಆದರೆ ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲವೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G. Parameshwara) ಹೇಳಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರ ಆರ್‌ಸಿಬಿ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ. ಆರ್​ಸಿಬಿ ತಂಡ ನೇರವಾಗಿ ವಿಧಾನಸೌಧದಿಂದ ಬಸ್​ನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಲಿದ್ದು, ಸಂಜೆ 6 ಗಂಟೆಗೆ ಆಟಗಾರರಿಂದ  ಮೈದಾನದಲ್ಲಿ ಪರೇಡ್​ ನಡೆಯಲಿದೆ.

ಗೃಹ ಸಚಿವ ಡಾ.ಪರಮೇಶ್ವರ್ ಹೇಳಿದ್ದಿಷ್ಟು 

ಬೆಂಗಳೂರಿನಲ್ಲಿ ಆರ್​ಸಿಬಿ ತಂಡದಿಂದ ವಿಜಯಯಾತ್ರೆ ಹಿನ್ನೆಲೆ ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಪರಮೇಶ್ವರ್, ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗದಗ: ಆರ್​ಸಿಬಿ ಗೆದ್ದ ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿ ಹೃದಯಾಘಾತದಿಂದ ಸಾವು

ಇದನ್ನೂ ಓದಿ
Image
IPL ಟ್ರೋಫಿ ಗೆದ್ದ RCB: ಸಂಭ್ರಮಾಚರಣೆ ವೇಳೆ ಹೃದಯಾಘಾತದಿಂದ ಅಭಿಮಾನಿ ಸಾವು
Image
ಆರ್‌ಸಿಬಿ ಗೆದ್ದ ಖುಷಿಗೆ ಪಬ್ಲಿಕ್‌ನಲ್ಲಿ ಕಿಸ್ ಮಾಡಿದ ಪ್ರೇಮಿಗಳು
Image
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
Image
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್

ಆರ್​ಸಿಬಿ ತಂಡದ ಆಟಗಾರರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಅಭಿನಂದನೆ ಸಲ್ಲಿಸಲಾಗುವುದು. ಈ ವೇಳೆ ಆರ್​ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ. ನಂತರ ಎಲ್ಲಾ ಆಟಗಾರರು ಬಸ್​ನಲ್ಲೇ ವಿಧಾನಸೌಧದಿಂದ ಸ್ಟೇಡಿಯಂಗೆ ತೆರಳಲಿದ್ದಾರೆ ಎಂದು ತಿಳಿಸಿದರು.

ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಇನ್ನು ಸಂಭ್ರಮಾಚರಣೆ ವೇಳೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹೀಗಾಗಿ ಆಟಗಾರರು ಮತ್ತು ಅಭಿಮಾನಿಗಳಿಗೆ ಯಾವುದೇ ತೊಂದರೆ ಆಗಬಾರದು ಎಂದು ಡಿಜಿ&ಐಜಿಪಿ ಸಲೀಂ ಹಾಗೂ ಸಂಚಾರಿ ಜಂಟಿ ಆಯುಕ್ತ M.N.ಅನುಚೇತ್​​ಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಮೊದಲೇ ಸವಾರರಿಗೆ ಬೇರೆ ಬೇರೆ ಮಾರ್ಗದ ವ್ಯವಸ್ಥೆ ಮಾಡಿ. ವಿಧಾನಸೌಧ, ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಟ್ರಾಫಿಕ್ ನಿಭಾಯಿಸುವಂತೆ ತಿಳಿಸಿದ್ದಾರೆ.

ಅಭಿಮಾನಿಗಳೆಲ್ಲ ಚಿನ್ನಸ್ವಾಮಿ ಸ್ಟೇಡಿಯಂಗೆ ಬನ್ನಿ ಎಂದ ಡಿಕೆಶಿ

ರಾಮನಗರ ಜಿಲ್ಲೆಯ ಕನಕಪುರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, RCB ಆಟಗಾರರಿಗೆ ವಿಧಾನಸೌಧದ ಮುಂದೆ ಸನ್ಮಾನ ಮಾಡುತ್ತೇವೆ. ತೆರೆದ ವಾಹನದಲ್ಲಿ ಆಟಗಾರರು ತೆರಳಿದರೆ ತೊಂದರೆ ಆಗುತ್ತದೆ. ಹಾಗಾಗಿ ತೆರೆದ ವಾಹನದಲ್ಲಿ ತೆರಳುವುದು ಬೇಡ ಎಂದಿದ್ದೇವೆ. ಅಭಿಮಾನಿಗಳೆಲ್ಲ ಚಿನ್ನಸ್ವಾಮಿ ಸ್ಟೇಡಿಯಂಗೆ ಬನ್ನಿ. ಅಭಿಮಾನ ತಪ್ಪು ಎನ್ನಲ್ಲ, ಆದರೆ ಎಚ್ಚರಿಕೆಯಿಂದ ಇರಬೇಕು. ಅಭಿಮಾನಿಗಳು ಯಾರೂ ವಿಮಾನ ನಿಲ್ದಾಣದ ಬಳಿ ಬರಬೇಡಿ ಎಂದಿದ್ದಾರೆ.

ಮಧ್ಯಾಹ್ನದ ಬಳಿಕ ಶಾಲಾ-ಕಾಲೇಜಿಗೆ ರಜೆ ನೀಡಲು ಸೂಚನೆ

ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ ಹೇಳಿಕೆ ನೀಡಿದ್ದು, ವಿಧಾನಸೌಧದ ಮುಂದೆ RCB ಟೀಂಗೆ ಸರ್ಕಾರದಿಂದ ಸನ್ಮಾನ, ಪ್ರೋತ್ಸಾಹ ನೀಡಲಾಗುತ್ತದೆ. ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಕ್ರೀಡಾಂಗಣಕ್ಕೆ ತೆರಳುವ ಮಾರ್ಗದಲ್ಲಿ ಸಂಚಾರ ದಟ್ಟವಾಗುವ ಸಾಧ್ಯತೆ ಇದ್ದು, ಮಧ್ಯಾಹ್ನದ ಬಳಿಕ ಶಾಲಾ-ಕಾಲೇಜಿಗೆ ರಜೆ ನೀಡಲು ಸೂಚಿಸಲಾಗಿದೆ ಎಂದರು.

ಇದನ್ನೂ ಓದಿ: ಆರ್​ಸಿಬಿ ಐಪಿಎಲ್ ಚಾಂಪಿಯನ್: ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ

ಬೆಳಗ್ಗೆ 11 ಗಂಟೆಗೆ ಅಹಮದಾಬಾದ್​ನಿಂದ ಹೊರಟಿರುವ ಆರ್​ಸಿಬಿ ತಂಡ ಟ್ರೋಫಿ ಸಮೇತ ಮಧ್ಯಾಹ್ನ  ಬೆಂಗಳೂರಿಗೆ ಆಗಮಿಸಲಿದೆ. ವಿಶೇಷ ವಿಮಾನದಲ್ಲಿ HAL ಏರ್​ಪೋರ್ಟ್​ಗೆ ಆಗಮಿಸುವ ಆಟಗಾರರು ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ. ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ನಡೆಯಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:00 pm, Wed, 4 June 25