ಬೆಂಗಳೂರಿನಲ್ಲಿ ನರೇಂದ್ರ ಮೋದಿಯವರ ಯಾವುದೇ ರೋಡ್ ಶೋ ಪ್ಲ್ಯಾನ್ ಇಲ್ಲ: ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ

ಇಸ್ರೋದ (ISRO) ಐತಿಹಾಸಿಕ ಚಂದ್ರಯಾನ-3 (Chandrayaan 3) ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ ಶನಿವಾರ(ಆಗಸ್ಟ್ 26) ಬೆಂಗಳೂರಿಗೆ ಆಗಮಿಸಲಿದ್ದಾರೆ. ಸದ್ಯ ದಕ್ಷಿಣ ಆಫ್ರಿಕಾದ ಜೋಹಾನ್ಸ್​​​ಬರ್ಗ್​​ನಲ್ಲಿ ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗಿಯಾಗಿರುವ ಪ್ರಧಾನಿ ಮೋದಿ ಅಲ್ಲಿಂದ ನೇರವಾಗಿ ಶನಿವಾರ ಬೆಳಗ್ಗೆ ಬೆಂಗಳೂರಿನ ಎಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಈ ವೇಳೆ ಮೋದಿ ರೋಡ್​ ಶೋ ಮಾಡಲಿದ್ದಾರೆ ಎನ್ನುವ ಸುದ್ದಿ ಇದ್ದು, ಈ ಬಗ್ಗೆ ಶೋಭಾ ಕರಂದ್ಲಾಜೆ ಸತ್ಯಾಸತ್ಯತೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನರೇಂದ್ರ ಮೋದಿಯವರ ಯಾವುದೇ ರೋಡ್ ಶೋ ಪ್ಲ್ಯಾನ್ ಇಲ್ಲ: ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ
ಶೋಭಾ ಕರಂದ್ಲಾಜೆ-ನರೇಂದ್ರ ಮೋದಿ
Follow us
ಕಿರಣ್​ ಹನಿಯಡ್ಕ
| Updated By: ರಮೇಶ್ ಬಿ. ಜವಳಗೇರಾ

Updated on: Aug 25, 2023 | 3:02 PM

ಬೆಂಗಳೂರು, (ಆಗಸ್ಟ್ 25): ಚಂದ್ರಯಾನ-3 (Chandrayaan 3) ಯಶಸ್ವಿ ಸಂಭ್ರಮಾಚರಣೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ನಾಳೆ(ಆಗಸ್ಟ್ 26) ಬೆಂಗಳೂರಿಗೆ(Bengaluru) ಆಗಮಿಸಲಿದ್ದು, ಇಸ್ರೋ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ತಿಳಿಸಲಿದ್ದಾರೆ. ಅಲ್ಲದೇ ಅದ್ಧೂರಿಯಾಗಿ ರೋಡ್ ಶೋ ಸಹ ನಡೆಸಲಿದ್ದಾರೆ ಎನ್ನಲಾಗಿತ್ತು. ಆದ್ರೆ, ರೋಡ್​ ಶೋ ಆಯೋಜನೆ ಆಗಿಲ್ಲ ಎಂದು ಕೇಂದ್ರ ಸಚಿವೆ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು (ಆಗಸ್ಟ್ 25) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ ಎಚ್‍ಎಎಲ್ ಏರ್​ಪೋರ್ಟ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತ ಕೋರಲಾಗುವುದು. ಬಳಿಕ ಇಸ್ರೋ ಸೆಂಟರ್ ಗೆ ಪ್ರಧಾನಿಯವರು ತೆರಳಲಿದ್ದಾರೆ. ಅಲ್ಲಿ ಇಸ್ರೋ ವಿಜ್ಞಾನಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಉಳಿದಂತೆ ಯಾವುದೇ ಕಾರ್ಯಕ್ರಮಗಳಿರುವುದಿಲ್ಲ ಎಂದು ಮಾಹಿತಿ ನೀಡಿದರು.

ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗುವ ಸಮಯ ಹತ್ತಿರವಾಗುತ್ತಿದೆ, ಭಾರತ ಮಾತ್ರವಲ್ಲ ವಿಶ್ವಕ್ಕೇ ಇವರ ನಾಯಕತ್ವ ಬೇಕು. ಹೀಗಾಗಿ ಬಿಜೆಪಿ(BJP)ಯಿಂದ ನಡೆಯುತ್ತಿರುವ ಮತದಾರರ ಚೇತನ ಮಾಹಾಚೇತನ ಅಭಿಯಾನದ ಆಯೋಜಿಸಲಾಗಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಯ ಸೇರ್ಪಡೆಯ ಬಗ್ಗೆ ಮಾಹಿತಿ ಇರುವುದಿಲ್ಲ. ಆದ್ದರಿಂದ ಯುವ ಜನತೆಗೆ ಇದರ ಬಗ್ಗೆ ಜಾಗೃತಿ, ಹೊಸ ಮತದಾರರ ಸೇರ್ಪಡೆ, ವಿಳಾಸ ಬದಲಾವಣೆ, ನಿಧನರಾದವರ ಹೆಸರಿನ ಕಡಿತ, ನಕಲಿ ಮತದಾರರನ್ನು ಗುರುತಿಸುವಿಕೆ ಹೀಗೆ ಅನೇಕ ಕಾರ್ಯಗಳನ್ನು ಬಿಜೆಪಿ ಕೈಗೆತ್ತುಕೊಳ್ಳಲಿವೆ ಎಂದು ಮತದಾರರ ಚೇತನ ಮಾಹಾಚೇತನ ಅಭಿಯಾನದ ಕುರಿತು ತಿಳಿಸಿದರು.

ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ: ಆ.26ರಂದು ಬೆಂಗಳೂರಿಗೆ ನರೇಂದ್ರ ಮೋದಿ, ರಸ್ತೆ ಸಂಚಾರದಲ್ಲಿ ಭಾರೀ ಬದಲಾವಣೆ, ಎಲ್ಲೆಲ್ಲಿ ನೋಡಿ..

ಈ ಹಿಂದೆ ಗಡಿ ಭಾಗದ ರಾಜ್ಯಗಳಲ್ಲಿ ನಕಲಿ ಮತದಾರರು ಪತ್ತೆಯಾಗಿದ್ದರು. ಮತದಾರರ ಹೆಸರು, ಜಾತಿ ನೋಡಿ ಮತದಾರರ ಪಟ್ಟಿಯಿಂದ ಅವರನ್ನು ಕೈಬಿಡಲಾಗಿತ್ತು. ಈ ಹಿನ್ನಲೆಯಲ್ಲಿ ಸರಿಯಾದ ಮತದಾರರ ಪಟ್ಟಿ ತಯಾರಿಕೆಗೆ ಚುನಾವಣಾ ಆಯೋಗ ಕೆಲಸ ಮಾಡುತ್ತಿದೆ. ಅದಕ್ಕೆ ಪೂರಕವಾಗುವಂತೆ ಬಿಜೆಪಿ ಕೆಲಸ ಮಾಡಲು ಸಿದ್ಧವಾಗಿದೆ ಎಂದರು.

2024ರ ಚುನಾವಣೆಯಲ್ಲಿ ಯಾವುದೇ ಗೊಂದಲಕ್ಕೊಳಗಾಗಬಾರದು ಎಂಬ ಗುರಿಯನ್ನಿಟ್ಟುಕೊಂಡು ಬಿಎಲ್ಎ 2ಗಳ ನೇಮಕವನ್ನು ಸದ್ಯದಲ್ಲಿಯೇ ಮಾಡುತ್ತೇವೆ. ಪಕ್ಷದ ವತಿಯಿಂದ ಪ್ರತಿ ಗ್ರಾಮದಲ್ಲಿಯೂ ಬಿಎಲ್ಎಗಳ ನೇಮಕಗೊಳ್ಳುತ್ತಾರೆ. ಕರ್ನಾಟಕದಲ್ಲಿ ತೇಜಸ್ವಿ ಸೂರ್ಯರವರ ನಾಯಕತ್ವದಲ್ಲಿ ಸೆಪ್ಟೆಂಬರ್ 1 – 10 ರವರೆಗೆ ಈ ಅಭಿಯಾನ ನಡೆಯಲಿದೆ. ಸೆ.17ರಂದು ಮನೆಮನೆಗೆ ತೆರಳಿ ಮತದಾನ ಪಟ್ಟಿ ಪರಿಶೀಲಿಸಿಕೊಳ್ಳುವಂತೆ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?