ವಿದ್ಯುತ್ ದರ ಹೆಚ್ಚಳವಿಲ್ಲ, ವರ್ಷದಲ್ಲಿ ಒಮ್ಮೆ ಮಾತ್ರ ಪರಿಷ್ಕರಿಸುವುದು ವಾಡಿಕೆ: ಇಂಧನ ಇಲಾಖೆ ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ

ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ದರ ಹೆಚ್ಚಳವಿಲ್ಲ ಎಂದು ಇಂಧನ ಇಲಾಖೆ ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ವಿದ್ಯುತ್ ದರ ಹೆಚ್ಚಳವಿಲ್ಲ, ವರ್ಷದಲ್ಲಿ ಒಮ್ಮೆ ಮಾತ್ರ ಪರಿಷ್ಕರಿಸುವುದು ವಾಡಿಕೆ: ಇಂಧನ ಇಲಾಖೆ ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ
ಸಚಿವ ಸುನೀಲ್ ಕುಮಾರ್
TV9kannada Web Team

| Edited By: sadhu srinath

Jun 28, 2022 | 6:10 PM

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳವಿಲ್ಲ. ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಯಾವುದೇ ಸೂಚನೆ ನೀಡಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕಲ್ಲಿದ್ದಲು ಹಾಗೂ‌‌ ಪೆಟ್ರೋಲಿಯಂ‌ ಉತ್ಪನ್ನಗಳ ಮಾರುಕಟ್ಟೆ ದರ ಆಧರಿತ ಹೊಂದಾಣಿಕೆ ವೆಚ್ಚದಲ್ಲಿ‌ ಮಾತ್ರ ವ್ಯತ್ಯಾಸವಾಗಿದೆ. ವಿದ್ಯುತ್ ದರ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂಬ ಬಗ್ಗೆ ಕೆಲವೆಡೆ ತಪ್ಪು ಸಂದೇಶ ರವಾನೆಯಾಗಿದೆ. ಆದರೆ ರಾಜ್ಯ ಸರಕಾರದ ಮುಂದೆ ಅಂಥ ಯಾವುದೇ ಪ್ರಸ್ತಾಪವಿಲ್ಲ. ವಿದ್ಯುತ್ ದರವನ್ನು ವರ್ಷದಲ್ಲಿ ಒಮ್ಮೆ ಮಾತ್ರ ಪರಿಷ್ಕರಿಸುವುದು ವಾಡಿಕೆಯಾಗಿದೆ. ಹೀಗಾಗಿ ದರ ಹೆಚ್ಚಳದ ವದಂತಿ ಬಗ್ಗೆ ಸಾರ್ವಜನಿಕರು ಆತಂಕಗೊಳ್ಳಬೇಕಾದ ಅಗತ್ಯವಿಲ್ಲ ಎಂದು ಸಚಿವ ಸುನೀಲ್ ಕುಮಾರ್ ವಿವರೆಣೆ ನೀಡಿದ್ದಾರೆ.

ರಾಜ್ಯದಲ್ಲಿ 13 ಉಷ್ಣ ವಿದ್ಯುತ್ ಸ್ಥಾವರಗಳಿವೆ. ಇವುಗಳ ಕಾರ್ಯ ನಿರ್ವಹಣೆಗೆ ಅಗತ್ಯವಾದ ಕಲ್ಲದ್ದಲು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಅಗತ್ಯವಿರುತ್ತದೆ. ಇವುಗಳ ಮಾರುಕಟ್ಟೆ ದರದ ಏರಿಳಿತ ಆಧರಿಸಿ ಎಲ್ಲ ವಿದ್ಯುತ್ ಸರಬರಾಜು‌‌ ಕಂಪಗಳ ವ್ಯಾಪ್ತಿಯಲ್ಲಿ‌ ಪ್ರತಿ ಮೂರು ತಿಂಗಳಿಗೊಮ್ಮೆ ಹೊಂದಾಣಿಕೆ ವೆಚ್ಚ ಪರಿಷ್ಕರಣೆ ನಡೆಸುವುದು ನಿರಂತರ ಪ್ರಕ್ರಿಯೆ ಆಗಿರುತ್ತದೆ. ಈ ಸಂಬಂಧ ಎಸ್ಕಾಂಗಳು ಸಲ್ಲಿಸಿದ ಹೊಂದಾಣಿಕೆ ವೆಚ್ಚ ಪ್ರಸ್ತಾಪ ಹಿನ್ನೆಲೆಯಲ್ಲಿ‌ ಕೆಇಆರ್ ಸಿ ಈ ಹಿಂದೆ ದರ ಪರಿಷ್ಕರಿಸಿದೆ. ಹೊಂದಾಣಿಕೆ ವೆಚ್ಚ ಪರಿಷ್ಕರಣೆ ಕೆಇಆರ್ ಸಿ ವಿವೇಚನಾಧಿಕಾರವಾಗಿದೆ. ಕಲ್ಲಿದ್ದಲು ದರ ಆಧರಿಸಿ ಈ ಹೊಂದಾಣಿಕೆ ವೆಚ್ಚ ಹೆಚ್ಚೂ ಆಗಬಹುದು, ಕಡಿಮೆಯೂ ಆಗಬಹುದು. ಹೀಗಾಗಿ ಈ ಪ್ರಕ್ರಿಯೆಯನ್ನು ವಾರ್ಷಿಕ ದರ ಪರಿಷ್ಕರಣೆ ಜತೆ ಥಳುಕು ಹಾಕುವ ಅಗತ್ಯವಿಲ್ಲ ಎಂದು ಮಾಧ್ಯಮ ಪ್ರಕಟಣೆ ಮೂಲಕ ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ:

ಮಹಾರಾಷ್ಟ್ರ ರಾಜಕೀಯದಲ್ಲಿ ಬಾಹುಬಲಿ ಪೋಸ್ಟರ್ ಪ್ರತ್ಯಕ್ಷ, ಗದ್ದಾರ್​ ಎಂದು ಜರಿದರು! ಆದರೆ ಇಲ್ಲಿ ಕಟ್ಟಪ್ಪ ಯಾರು?

ಇದನ್ನೂ ಓದಿ:

ಚಾಣಕ್ಯ ನೀತಿ: ಈ ಐದು ವಿಷಯಗಳಲ್ಲಿ ಬಹಳ ಜಾಗರೂಕರಾಗಿರಿ, ಇಲ್ಲದಿದ್ದರೆ ನೀವು ಎಲ್ಲವನ್ನೂ ಕಳೆದುಕೊಳ್ಳುತ್ತೀರಿ!

 

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada