ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ; ಮತ್ತೆ ಆಗಸ್ಟ್ ಮೊದಲ ವಾರದಲ್ಲಿ ದೆಹಲಿಗೆ ಬರುತ್ತೇನೆ – ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ

ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ; ಮತ್ತೆ ಆಗಸ್ಟ್ ಮೊದಲ ವಾರದಲ್ಲಿ ದೆಹಲಿಗೆ ಬರುತ್ತೇನೆ - ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ

ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ; ಮತ್ತೆ ಆಗಸ್ಟ್ ಮೊದಲ ವಾರದಲ್ಲಿ ದೆಹಲಿಗೆ ಬರುತ್ತೇನೆ - ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ
ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ; ಮತ್ತೆ ಆಗಸ್ಟ್ ಮೊದಲ ವಾರದಲ್ಲಿ ದೆಹಲಿಗೆ ಬರುತ್ತೇನೆ - ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ

ದೆಹಲಿ: ದೆಹಲಿಯಿಂದಲೇ ವಿರೋಧಿ  ಪಾಳಯಕ್ಕೆ ಖಡಕ್ ಸಂದೇಶ ರವಾನಿಸಿರುವ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಶುದ್ಧ ಸುಳ್ಳು  ಎಂದು ಘಂಟಾಘೋಷವಾಗಿ ಹೇಳಿದ್ದಾರೆ. 

ಮತ್ತೆ ಆಗಸ್ಟ್ ಮೊದಲ ವಾರದಲ್ಲಿ ದೆಹಲಿಗೆ ಬರುತ್ತೇನೆ. ರಾಜೀನಾಮೆ ನೀಡುವ ವಿಚಾರ ಸುಳ್ಳು. ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಯಡಿಯೂರಪ್ಪ ದೆಹಲಿಯಲ್ಲಿ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದೆಹಲಿ ಮೋತಿಲಾಲ್​ ನೆಹರು ರಸ್ತೆಯಲ್ಲಿರುವ ನಿವಾಸದಲ್ಲಿ ಬಿಎಸ್​​ವೈ ಭೇಟಿಯಾದರು. ಸಿಎಂ ಯಡಿಯೂರಪ್ಪಗೆ ಪುತ್ರ ವಿಜಯೇಂದ್ರ ಸಾಥ್ ನೀಡಿದರು.  ರಾಜ್ಯ ರಾಜಕೀಯ ಬಗ್ಗೆ ಜೆ.ಪಿ. ನಡ್ಡಾ ಜತೆ ಚರ್ಚೆ ನಡೆಯಿತು. ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಡ್ಡಾ ಸೂಚನೆ ನೀಡಿದ್ದಾರೆ. ರಾಜೀನಾಮೆ ಕೇಳಿದ್ದರೆ/ ಕೊಟ್ಟಿದ್ದರೆ ಮುಚ್ಚಿಡುವಂತಹ ಪ್ರಶ್ನೆ ಇಲ್ಲ ಎಂದು ಯಡಿಯೂರಪ್ಪ ಈ ಸಂದರ್ಭದಲ್ಲಿ ಹೇಳಿದರು.

ಮೇಕೆದಾಟು ವಿಚಾರದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ:

ಮೇಕೆದಾಟು ಡ್ಯಾಂ ನಿರ್ಮಿಸಲು 100ಕ್ಕೆ 100ರಷ್ಟು ಅನುಮತಿ ದೊರೆತಿದೆ. ಪಕ್ಕದ ರಾಜ್ಯಕ್ಕೆ ಇದರಿಂದ ತೊಂದರೆ ಇಲ್ಲದ ಹಿನ್ನೆಲೆ ಅನುಮತಿಯಿದೆ. ಕರ್ನಾಟಕ-ತಮಿಳುನಾಡು ಅಣ್ಣ-ತಮ್ಮಂದಿರಂತಿರಲು ಇದು ಅವಕಾಶ ನೀಡಿದೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ B.S​. ಯಡಿಯೂರಪ್ಪ ಹೇಳಿದ್ದಾರೆ.

ಯಾವ ಶಾಸಕರ ಜೊತೆಯೂ ನಾಯಕತ್ವದ ಬಗ್ಗೆ ಚರ್ಚಿಸಿಲ್ಲ; ಕೊವಿಡ್ ನಿರ್ವಹಣೆ, ಪಕ್ಷ ಸಂಘಟನೆ ಬಗ್ಗೆ ತಿಳಿಸಲಾಗಿದೆ: ಅರುಣ್ ಸಿಂಗ್

(No question of resignation to chief minister post says karnataka cm bs yediyurappa)