ರೈತರ ಸಾಲವನ್ನ ಸಂಪೂರ್ಣವಾಗಿ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ: ಬಿಎಸ್ವೈ

ಬೆಳಗಾವಿ: ಸಿಎಂ ಬಿಎಸ್ ಯಡಿಯೂರಪ್ಪಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ ಅಂತಾ ರಾಜ್ಯದ ಮುಖ್ಯಮಂತ್ರಿ ಉತ್ತರಿಸಿದ್ದಾರೆ. ಬೆಳಗಾವಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ’ ಇವತ್ತಿನ ಹಣಕಾಸಿನ ಪರಿಸ್ಥಿತಿ, ನೆರೆ ಪ್ರವಾಹದಿಂದ ದೊಡ್ಡ ಅನಾಹುತ ಆಗಿದೆ. ಎಲ್ಲಾ ಕಾರ್ಯಕ್ರಮ ರದ್ದು ಮಾಡಿ ನೆರೆ […]

ರೈತರ ಸಾಲವನ್ನ ಸಂಪೂರ್ಣವಾಗಿ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ: ಬಿಎಸ್ವೈ
ಸಾಧು ಶ್ರೀನಾಥ್​

Updated on: Oct 16, 2019 | 12:48 PM

ಬೆಳಗಾವಿ: ಸಿಎಂ ಬಿಎಸ್ ಯಡಿಯೂರಪ್ಪಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ ಅಂತಾ ರಾಜ್ಯದ ಮುಖ್ಯಮಂತ್ರಿ ಉತ್ತರಿಸಿದ್ದಾರೆ.

ಬೆಳಗಾವಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ’ ಇವತ್ತಿನ ಹಣಕಾಸಿನ ಪರಿಸ್ಥಿತಿ, ನೆರೆ ಪ್ರವಾಹದಿಂದ ದೊಡ್ಡ ಅನಾಹುತ ಆಗಿದೆ. ಎಲ್ಲಾ ಕಾರ್ಯಕ್ರಮ ರದ್ದು ಮಾಡಿ ನೆರೆ ಪರಿಹಾರಕ್ಕೆ ಡೈವರ್ಟ್ ಮಾಡುವ ಪರಿಸ್ಥಿತಿ ಇದೆ. ಬೇರೆ ಯಾವುದನ್ನು ಮಾಡುವ ಪರಿಸ್ಥಿತಿ ಈಗ ಇಲ್ಲ ಅನ್ನೋ ಮಾತುಗಳನ್ನಾಡಿದ್ದಾರೆ.

ಅಲ್ಲದೆ ಪ್ರವಾಹದಿಂದ ರಾಜ್ಯದಲ್ಲಿ ದೊಡ್ಡ ಅನಾಹುತ ಆಗಿದೆ. ಹೀಗಾಗಿ ನಾವು ಪ್ರಮಾಣ ಮಾಡಿದಂತೆ ಬೆಳೆಗೆ ಹೆಚ್ಚು ಪರಿಹಾರ ಮತ್ತು ಮನೆ ಕಟ್ಟಿಕೊಳ್ಳಲು ಹೆಚ್ಚು ಪರಿಹಾರ ನೀಡುತ್ತಿದ್ದೇವೆ. ನಮ್ಮ ದೇಶದ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಟ್ಟ ಉದಾಹರಣೆ ಇಲ್ಲ. ಬೇರೆ ಯಾವುದನ್ನು ಮಾಡುವ ಸ್ಥಿತಿಯಲ್ಲಿ ನಾವು ಇಲ್ಲ. ಮನೆಯನ್ನು ಕಟ್ಟಲು 95 ಸಾವಿರ ಕೊಡುವ ಕಡೆ 5 ಲಕ್ಷ ರೂಪಾಯಿ ಜೊತೆಗೆ ಎಲ್ಲಾ ನಿರಾಶ್ರಿತರಿಗೆ 10 ಸಾವಿರ ಕೊಡುತ್ತಿದ್ದೇವೆ ಎಂದಿದ್ದಾರೆ.

ರಾಜ್ಯದ ರೈತರು ಈಗಾಗಲೇ ಪ್ರವಾಹದ ಅಟ್ಟಹಾಸಕ್ಕೆ ಸಿಲುಕಿ ಮನೆ ಮಠ ಕಳೆದುಕೊಂಡು ಒದ್ದಾಡುತ್ತಿದ್ದಾರೆ. ಸರ್ಕಾರದಿಂದ ಪ್ರವಾಹ ಪರಿಹಾರ ಸರಿಯಾಗಿ ರೈತರಿಗೆ ಸಿಗುತ್ತಿಲ್ಲ. ಇತ್ತ ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಎಂ ಹೇಳಿಕೆ ದೊಡ್ಡ ಶಾಕ್ ನೀಡಿದೆ.

Published On - 12:41 pm, Wed, 16 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us