AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಪ್ರಾರ್ಥನೆಗೆ ವಸತಿ ಗೃಹ ಬಳಕೆಗೆ ಯಾವುದೇ ನಿರ್ಬಂಧವಿಲ್ಲ: ಹೈಕೋರ್ಟ್

ಧಾರ್ಮಿಕ ಪ್ರಾರ್ಥನೆಗೆ ವಸತಿ ಗೃಹಗಳನ್ನು ಬಳಸಲು ಯಾವುದೇ ನಿರ್ಬಂಧವಿಲ್ಲ ಎಂದು ಕರ್ನಾಟಕ ಹೈಕೋರ್ಟ್​ ಶನಿವಾರ ಮಹತ್ವದ ತೀರ್ಪು ನೀಡಿದೆ. ಆ ಮೂಲಕ ತಮ್ಮ ತಮ್ಮ ಮನೆಗಳಲ್ಲಿ ಧಾರ್ಮಿಕ ನಂಬಿಕೆಗಳನ್ನು ಆಚರಿಸುವ ನಾಗರಿಕರ ಹಕ್ಕನ್ನು ಎತ್ತಿ ಹಿಡಿದಿದೆ.

ಧಾರ್ಮಿಕ ಪ್ರಾರ್ಥನೆಗೆ ವಸತಿ ಗೃಹ ಬಳಕೆಗೆ ಯಾವುದೇ ನಿರ್ಬಂಧವಿಲ್ಲ: ಹೈಕೋರ್ಟ್
ಕರ್ನಾಟಕ ಹೈಕೋರ್ಟ್
ಗಂಗಾಧರ​ ಬ. ಸಾಬೋಜಿ
|

Updated on: Aug 26, 2023 | 9:00 PM

Share

ಬೆಂಗಳೂರು, ಆಗಸ್ಟ್ 26: ಧಾರ್ಮಿಕ ಪ್ರಾರ್ಥನೆಗೆ ವಸತಿ ಗೃಹಗಳನ್ನು ಬಳಸಲು ಯಾವುದೇ ನಿರ್ಬಂಧವಿಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court)​ ಶನಿವಾರ ಮಹತ್ವದ ತೀರ್ಪು ನೀಡಿದೆ. ಆ ಮೂಲಕ ನಗರದ ಎಚ್​ಬಿಆರ್ ಲೇಔಟ್​​ನ ವಸತಿ ಮನೆಯನ್ನು ಪ್ರಾರ್ಥನೆಗೆ ಬಳಸಲಾಗುತ್ತಿದೆ ಎಂದು ಆರೋಪಿಸಿ ಕೆಲವು ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ವಜಾಗೊಳಿಸಿದೆ. ತೀರ್ಪಿನ ಪ್ರತಿಯನ್ನು ನ್ಯಾಯಾಲಯ ಇನ್ನು ಬಿಡುಗಡೆ ಮಾಡಿಲ್ಲ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಲೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ವಿಭಾಗೀಯ ಪೀಠವು ಇತ್ತೀಚೆಗೆ ಪಿಐಎಲ್ ಅನ್ನು ವಜಾಗೊಳಿಸಿತ್ತು. ಪೀಠವು ಅರ್ಜಿಯನ್ನು ವಜಾಗೊಳಿಸಿ ಪ್ರಾರ್ಥನೆಗೆ ಹಾಜರಾಗುವವವರಿಂದ ಉಂಟಾಗಬಹುದೆನ್ನಲ್ಲಾದ ಅಡ್ಡಿಗಳ ಬಗ್ಗೆ ಸಾಕಷ್ಟು ಪುರಾವೆಗಳ ಕೊರತೆಯಿದೆ ಎಂದು ಅಭಿಪ್ರಾಯಪಟ್ಟಿದೆ.

ಸ್ಯಾಮ್ ಪಿ ಫಿಲಿಪ್, ಕೃಷ್ಣ ಎಸ್‌ಕೆ, ಜಗಯೀಸನ್ ಟಿಪಿ ಮತ್ತು ಇತರ ಐವರು ಎಚ್‌ಬಿಆರ್ ಲೇಔಟ್ ನಿವಾಸಿಗಳಾಗಿದ್ದು, ಈ ವಿಚಾರವಾಗಿ ವಸತಿ ಮತ್ತು ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ ಮತ್ತು ಮಸೀದಿ ಇ-ಅಶ್ರಫಿತ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಜಯನಗರ ಸೇರಿದಂತೆ ಈ ನಗರಗಳಲ್ಲಿ ವಿದ್ಯುತ್ ಕಡಿತ: ವಾರಾಂತ್ಯದಲ್ಲಿ ಬೆಂಗಳೂರಿಗರಿಗೆ ತಟ್ಟಲಿದೆ ಪವರ್ ಕಟ್ ಬಿಸಿ

ವಸತಿ ಪ್ರದೇಶವನ್ನು ಪ್ರಾರ್ಥನಾ ಮಂದಿರವಾಗಿ ಬಳಸಲಾಗುತ್ತಿದ್ದು, ಇದರಿಂದ ನೆರೆಹೊರೆಯವರಿಗೆ ತೊಂದರೆಯಾಗುತ್ತಿದೆ ಎಂದು ವಾದಿಸಿದ್ದರು. ಈ ಹಿಂದೆ ಬಿಬಿಎಂಪಿ ಅನುಮತಿಯಿಲ್ಲದೆ ಮಸೀದಿ ಟ್ರಸ್ಟ್ ಕಟ್ಟಡ ನಿರ್ಮಿಸಿದಾಗ ಈ ವಿಷಯ ನ್ಯಾಯಾಲಯದ ಮೆಟ್ಟಿಲೇರಿದ್ದು, ಬಿಬಿಎಂಪಿಯಿಂದ ಅಗತ್ಯ ಮಂಜೂರಾತಿ ಪಡೆದ ನಂತರವಷ್ಟೇ ಮದರಸಾ ಕಟ್ಟಡ ನಿರ್ಮಿಸಬಹುದು ಎಂದು ಕೋರ್ಟ್ ಸೂಚಿಸಿತ್ತು. ನಂತರ ಕಟ್ಟಡವನ್ನು ನಿರ್ಮಿಸಿ ಬಡ ಮಕ್ಕಳ ಮದರಸಾವಾಗಿ ಬಳಕೆ ಮಾಡಲಾಗುತಿತ್ತು. ಬಳಿಕ ಹೊಸ ಕಟ್ಟಡ ನಿರ್ಮಾಣವಾದ ನಂತರ ಪಿಐಎಲ್ ಸಲ್ಲಿಸಲಾಗಿತ್ತು.

ಪಿಐಎಲ್ ಅನ್ನು ವಜಾಗೊಳಿಸುವಾಗ, ನ್ಯಾಯಾಲಯವು ಅರ್ಜಿದಾರ ಪರ ವಕೀಲರು ಅಂತಹ ಯಾವುದೇ ನಿರ್ದಿಷ್ಟ ಪುರಾವೆಗಳನ್ನು ನೀಡುವಲ್ಲಿ ವಿಫಲವಾಗಿದ್ದು, ಮತ್ತು ಪ್ರಾರ್ಥನೆ ಸಲ್ಲಿಸಲು ವಸತಿ ಪ್ರದೇಶವನ್ನು ಮಸೀದಿಯಾಗಿ ಬಳಸುವುದು ನಿಯಮಗಳ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಸಿಬಿಡಿ ಪ್ರದೇಶದ ಪಬ್​ಗಳ ಮೇಲೆ​ ಬೆಂಗಳೂರು ಪೊಲೀಸ್​​ ದಾಳಿ: ಓರ್ವ ವಿದೇಶಿ ಮಹಿಳೆ ರಕ್ಷಣೆ

ಪ್ರಾರ್ಥನೆಗೆ ಹೆಚ್ಚು ಹೆಚ್ಚು ಜನರು ಸೇರುವುದರಿಂದ ಇದು ಸಾಮಾನ್ಯವಾಗಿ ಅರ್ಜಿದಾರರಲ್ಲಿ ಮತ್ತು ಇತರೆ ನಿವಾಸಿಗಳು ಭಯದಲ್ಲಿದ್ದಾರೆ ಎಂದು ಹೇಳಲಾಗುತ್ತಿದ್ದರು, ಈ ಕಾರಣಗಳು ತರ್ಕ ಅಥವಾ ಕಾನೂನಿನ ಚೌಕಟನ್ನು ಹೊಂದಿಲ್ಲ ಎಂದು ವಾದಿಸಲಾಗಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಪ್ರಾರ್ಥನೆಗಳನ್ನು ನಡೆಸುವುದರಿಂದ ಅಪಾಯವಿದೆ ಎಂದ ಅರ್ಜಿದಾರರ ಪರ ವಕೀಲರು ಮಂಡಿಸಿದ ವಾದವನ್ನು ನ್ಯಾಯಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇಂತಹ ಹೇಳಿಕೆಗಳಿಗೆ ನಾವು ಅವಕಾಶ ನೀಡುವುದಿಲ್ಲ. ಇಂತಹ ಹೇಳಿಕೆಗಳನ್ನು ನೀಡಲು ನಿಮಗೆ ಯಾವುದೇ ಹಕ್ಕಿಲ್ಲ. ನಿಯಮಗಳ ಉಲ್ಲಂಘನೆಯಾಗಿದೆ ಎಂದು  ಅಧಿಕಾರಿಗಳು ಮಾತ್ರ ಹೇಳಬಹುದು. ಯಾರಾದರೂ ಪ್ರಾರ್ಥನೆ ಸಲ್ಲಿಸುವುದು ಬೆದರಿಕೆಯ ಚಟುವಟಿಕೆ ಎಂದು ನೀವು ಹೇಗೆ ಹೇಳುತ್ತೀರಿ ಎಂದು ನ್ಯಾಯಾಲಯ ಪ್ರಶ್ನಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ