ಮಾರುಕಟ್ಟೆ, ಜನನಿಬಿಡ ಪ್ರದೇಶದಲ್ಲಿ ಪಟಾಕಿ ಮಾರಾಟ ನಿಷೇಧಿಸಿದ ಪೊಲೀಸ್​ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್

ಪಟಾಕಿಯಿಂದ ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತೆ. ಪರಿಸರಕ್ಕೂ ಪಟಾಕಿ ಅಪಾಯಕಾರಿಯಾಗಿದೆ ಎಂದು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

ಮಾರುಕಟ್ಟೆ, ಜನನಿಬಿಡ ಪ್ರದೇಶದಲ್ಲಿ ಪಟಾಕಿ ಮಾರಾಟ ನಿಷೇಧಿಸಿದ ಪೊಲೀಸ್​ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್
ಕರ್ನಾಟಕ್​ ಹೈಕೋರ್ಟ್​
Edited By:

Updated on: Aug 04, 2022 | 8:56 PM

ಬೆಂಗಳೂರು: ಈ ಬಾರಿ ದೀಪಾವಳಿ ಹಬ್ಬ ಅಕ್ಟೋಬರ್ ಕೊನೆಯ ವಾರದಲ್ಲಿದೆ. ಅದಕ್ಕೂ ಮುನ್ನ ರಾಜ್ಯ ಹೈಕೋರ್ಟ್ ಖಡಕ್ ಸಂದೇಶ ರವಾನಿಸಿದೆ. ಮಾರುಕಟ್ಟೆ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಪಟಾಕಿ ಮಾರಾಟ ಮಾಡುವುದನ್ನು ನಿಷೇಧಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಈ ಹಿಂದೆ ಹೊರಡಿಸಿರುವ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಪಟಾಕಿಯಿಂದ ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತೆ. ಪರಿಸರಕ್ಕೂ ಪಟಾಕಿ ಅಪಾಯಕಾರಿಯಾಗಿದೆ ಎಂದು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

ಬೆಂಗಳೂರಿನ ಮಾರ್ಕೆಟ್,‌ ಜನನಿಬಿಡ ಪ್ರದೇಶದಲ್ಲಿ ಪಟಾಕಿ ಮಾರಾಟ ನಿರ್ಬಂಧಿಸಲಾಗಿತ್ತು. ಪಟಾಕಿ ಮಾರಾಟಕ್ಕೆ ನೀಡಿದ್ದ ನಿರಾಕ್ಷೇಪಣಾ ಪತ್ರ ಹಿಂಪಡೆದು ನಗರ ಪೊಲೀಸ್ ಆಯುಕ್ತರು 2012 ರ ಏಪ್ರಿಲ್ 12ಕ್ಕೆ ಆದೇಶ ಹೊರಡಿಸಿದ್ದರು.

ಈ ಆದೇಶ ಪ್ರಶ್ನಿಸಿ ಪಟಾಕಿ ಮರಾಟಗಾರ ಕಂಪನಿಗಳಿಂದ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಡಿಜಿಪಿ ಸಹ ನಗರ ಪೊಲೀಸ್ ಆಯುಕ್ತರ ಕ್ರಮವನ್ನು ಎತ್ತಿಡಿದಿದ್ದರು. ಆದಾಗ್ಯೂ, ಪೊಲೀಸ್ ಆಯುಕ್ತ, ಡಿಜಿಪಿ ಆದೇಶ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು.‌

ಪಟಾಕಿಗಳಿಂದ ಎಷ್ಟೋ ಮಕ್ಕಳು, ಯುವಕರು ಕಣ್ಣು ಕಳೆದುಕೊಂಡಿದ್ದಾರೆ. ಇದರಿಂದ ಅವರ ಜೀವಿಸುವ ಹಕ್ಕು ಉಲ್ಲಂಘನೆಯಾಗುತ್ತಿದೆ. ಪ್ರತಿ ಬಾರಿ ಪಟಾಕಿಯಿಂದ ಹೆಚ್ಚು ಗಾಯಗೊಂಡಿರುವುದು ಮಕ್ಕಳೇ ಆಗಿದ್ದಾರೆ. ಪಟಾಕಿಯಿಂದ ಕಣ್ಣು ಕಳೆದುಕೊಂಡವರ ಉಳಿದ ಜೀವನ ಅಂಧಕಾರದಲ್ಲಿರುತ್ತದೆ ಎಂದು ನ್ಯಾ. ಕೃಷ್ಣ ಎಸ್ ದೀಕ್ಷಿತ್ ರವರಿದ್ದ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

Published On - 8:51 pm, Thu, 4 August 22