ಶಿವಮೊಗ್ಗ: ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಔಷಧ ಕೊರತೆ ಉಂಟಾಗಿದೆ ಎಂಬ ವಿಚಾರವನ್ನು ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಗಮನಕ್ಕೆ ತಂದಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 41 ಬ್ಲ್ಯಾಕ್ ಫಂಗಸ್ ಪ್ರಕರಣಗಳಿವೆ. ಪ್ರತಿಯೊಬ್ಬ ರೋಗಿಗೆ 4 ವಯಲ್ ಇಂಜೆಕ್ಷನ್ ಅಗತ್ಯವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇಂದು (ಜೂನ್ 5) ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳು ಹೀಗೆ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ವೇಳೆ ಅಧಿಕಾರಿಗಳು ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಬೇಕಾಗಿರುವ ಔಷಧ ಕೊರತೆ ಬಗ್ಗೆ ಹೇಳಿದ್ದಾರೆ. ಸದ್ಯ 1 ವಯಲ್ ಇಂಜೆಕ್ಷನ್ ಜೊತೆ ಮಾತ್ರೆ ನೀಡಲಾಗ್ತಿದೆ. 41 ಬ್ಲ್ಯಾಕ್ ಫಂಗಸ್ ರೋಗಿಗಳ ಪೈಕಿ 10 ಜನ ಡಿಸ್ಚಾರ್ಜ್ ಆಗಿದ್ದಾರೆ. ಬ್ಲ್ಯಾಕ್ ಫಂಗಸ್ ಸೋಂಕಿತ 26 ರೋಗಿಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. 26 ರೋಗಿಗಳ ಪೈಕಿ 11 ರೋಗಿಗಳಿಗೆ ಸರ್ಜರಿ ಮಾಡಲಾಗಿದೆ. ಬ್ಲ್ಯಾಕ್ ಫಂಗಸ್ನಿಂದ ಐವರು ರೋಗಿಗಳು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬ್ಲ್ಯಾಕ್ ಫಂಗಸ್‌ಗೆ ಔಷಧ ಕೊರತೆ ಇಲ್ಲ ಎಂದ ಆರೋಗ್ಯ ಸಚಿವ ಸುಧಾಕರ್
ಮತ್ತೊಂದೆಡೆ, ರಾಜ್ಯ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕರ್ನಾಟಕದಲ್ಲಿ ಬ್ಲ್ಯಾಕ್ ಫಂಗಸ್‌ಗೆ ಔಷಧ ಕೊರತೆ ಇಲ್ಲ ಎಂದು ಹೇಳಿಕೆ ನೀಡಿದ್ಧಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್‌ಗೆ ಔಷಧ ಕೊರತೆ ಇಲ್ಲ ಎಂದು ತಿಳಿಸಿದ್ದಾರೆ.
ರಾಜ್ಯಕ್ಕೆ 9 ಸಾವಿರ ವಯಲ್ ಇಂಜೆಕ್ಷನ್ ಹಂಚಿಕೆಯಾಗಿದೆ. ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಇಂಜೆಕ್ಷನ್ ಲಭ್ಯವಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದರ ನಿಗದಿ ಮಾಡುತ್ತೇವೆ. ಮುಂದಿನ ವಾರ ಚಿಕಿತ್ಸೆಗೆ ದರ ನಿಗದಿ ಮಾಡಲಾಗುವುದು ಎಂದು ಸುಧಾಕರ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: Black Fungus: ಕರ್ನಾಟಕಕ್ಕೆ 9750 ವಯಲ್ಸ್ ಬ್ಲ್ಯಾಕ್ ಫಂಗಸ್ ಔಷಧ ಹಂಚಿಕೆ: ಸದಾನಂದ ಗೌಡ
ಭಾರತದಲ್ಲಿಂದು 1.20 ಹೊಸ ಕೊರೊನಾ ಸೋಂಕಿನ ಕೇಸ್ಗಳು ದಾಖಲು; ಚೇತರಿಕೆಯ ಪ್ರಮಾಣ ಶೇ. 93.08ಕ್ಕೆ ಏರಿಕೆ
Published On - 4:27 pm, Sat, 5 June 21