ಕರ್ನಾಟಕಕ್ಕೆ ಕಲ್ಲಿದ್ದಲು ಕೊರತೆ ಆಗದು, ವಿದ್ಯುತ್ ಉತ್ಪಾದನೆಯಲ್ಲಿ ಸಮಸ್ಯೆಯಿಲ್ಲ: ಸುನಿಲ್ ಕುಮಾರ್

ವಿದ್ಯುತ್ ಅಭಾವದ ಬಗ್ಗೆ ಆತಂಕ ಅನಗತ್ಯವಾದುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಕರ್ನಾಟಕಕ್ಕೆ ಕಲ್ಲಿದ್ದಲು ಕೊರತೆ ಆಗದು, ವಿದ್ಯುತ್ ಉತ್ಪಾದನೆಯಲ್ಲಿ ಸಮಸ್ಯೆಯಿಲ್ಲ: ಸುನಿಲ್ ಕುಮಾರ್
ಸುನಿಲ್ ಕುಮಾರ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 11, 2021 | 6:38 PM

ಬೆಂಗಳೂರು: ಕರ್ನಾಟಕದಲ್ಲಿ ಕಲ್ಲಿದ್ದಲು ಕೊರತೆ ಆಗುವುದಿಲ್ಲ. ರಾಜ್ಯ ಸರ್ಕಾರವು ಈಗಾಗಲೇ ಎಲ್ಲ ರೀತಿಯ ಪೂರಕ ಕ್ರಮಗಳನ್ನು ಕೈಗೊಂಡಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಟಿವಿ9ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಆಗುವುದಿಲ್ಲ ಎಂದು ಹೇಳಿರುವ ಅವರು, ವಿದ್ಯುತ್ ಅಭಾವದ ಬಗ್ಗೆ ಆತಂಕ ಅನಗತ್ಯವಾದುದು ಎಂದಿದ್ದಾರೆ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಆಗಬಹುದು ಎಂದು ಈ ಹಿಂದೆ ವಿಶ್ಲೇಷಿಸಲಾಗಿತ್ತು. ಆದರೆ ಸಕಾಲಿಕವಾಗಿ ನಾವು ಕೈಗೊಂಡ ಕ್ರಮಗಳಿಂದ ಸಮಸ್ಯೆ ಆಗುವ ಅಪಾಯ ತಪ್ಪಿತು ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದೊಂದಿಗೆ ಕರ್ನಾಟಕ ಸರ್ಕಾರದ ಅಧಿಕಾರಿಗಳು ನಿಯಮಿತ ಸಂಪರ್ಕದಲ್ಲಿದ್ದಾರೆ. ಹೀಗಾಗಿ ಹೆಚ್ಚು ಸಮಸ್ಯೆ ಆಗಲಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಮಾತನಾಡಿದ್ದಾರೆ. ರಾಜ್ಯದ ಪಾಲಿನ ಜೊತೆಗೆ ಹೆಚ್ಚುವರಿಯಾಗಿಯೂ ಕಲ್ಲಿದ್ದಲು ನೀಡಲು ಕೇಂದ್ರ ಸರ್ಕಾರವು ಒಪ್ಪಿಕೊಂಡಿದೆ. ನಿನ್ನೆ (ಅ.10) ಒಡಿಶಾದಿಂದ ಒಂದು ರೇಕ್‌ ಕಲ್ಲಿದ್ದಲು ಬಂದಿದೆ. ಇಂದು ಮತ್ತೊಂದು ರೇಕ್‌ ಕಲ್ಲಿದ್ದಲು ಲೋಡ್‌ ಆಗುತ್ತಿದೆ. ನಾಡಿದ್ದು ಸಂಜೆಯೊಳಗೆ 2 ರೇಕ್ ರಾಜ್ಯಕ್ಕೆ ತಲುಪಲಿದೆ ಎಂದು ವಿವರಿಸಿದರು.

ಇಷ್ಟು ಪ್ರಮಾಣದ ಕಲ್ಲಿದ್ದಲು ರಾಜ್ಯದ ಉತ್ಪಾದನಾ ಘಟಕಗಳಿಗೆ ಸರಿಯಾದ ಸಮಯಕ್ಕೆ ಇದು ತಲುಪಿದರೆ ಬಳ್ಳಾರಿ ಮತ್ತು ರಾಯಚೂರು ಉತ್ಪಾದನಾ ಘಟಕಗಳಲ್ಲಿ ಸಮಸ್ಯೆ ಆಗುವುದಿಲ್ಲ. ಪ್ರಸ್ತುತ ರಾಜ್ಯದಲ್ಲಿ ಒಂದು ವಾರಕ್ಕೆ ಬೇಕಾಗುವಷ್ಟು ಕಲ್ಲಿದ್ದಲು ಸಂಗ್ರಹವಿದೆ. ವಿದ್ಯುತ್ ಉತ್ಪಾದನೆ ವಿಚಾರದಲ್ಲಿ ವಿಶೇಷ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಯಾವುದೇ ಊಹಾಪೋಹದ ಹೇಳಿಕೆಗಳನ್ನು ನಂಬಬೇಡಿ. ರಾಜ್ಯದಲ್ಲಿ ವಿದ್ಯುತ್ ಅಭಾವ ಸೃಷ್ಟಿಯಾಗಲು ಬಿಡುವುದಿಲ್ಲ ಎಂದು ಸಚಿವರು ಭರವಸೆ ನೀಡಿದರು.

ಕೃತಕ ಅಭಾವ ಸೃಷ್ಟಿ ಸಲ್ಲದು: ಸಿದ್ದರಾಮಯ್ಯ ಕರ್ನಾಟಕದಲ್ಲಿ ಕಲ್ಲಿದ್ದಲು ಕೊರತೆ ಕೃತಕವೋ ಅಥವಾ ಸ್ವಾಭಾವಿಕವೋ ಎಂಬ ಬಗ್ಗೆ ಮೊದಲು ಗೊತ್ತಾಗಬೇಕು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ. ಕರ್ನಾಟಕದಲ್ಲಿ ಈವರೆಗೆ ವಿದ್ಯುತ್ ಅಭಾವ ಇರಲಿಲ್ಲ. ಯಾವಾಗಲೂ ವಿದ್ಯುತ್ ಉತ್ಪಾದನೆಯು ಅಗತ್ಯ ಪ್ರಮಾಣಕ್ಕಿಂತ ಹೆಚ್ಚಾಗಿಯೇ ಆಗುತ್ತಿತ್ತು. ಇದೀಗ ನಮ್ಮಲ್ಲಿ ಉಷ್ಣ ವಿದ್ಯುತ್ ಸ್ಥಾವರಗಳು ಸ್ಥಗಿತವಾಗಿರುವುದರಿಂದ ರಾಜ್ಯಕ್ಕೆ ಕಲ್ಲಿದ್ದಲಿನ ಅಗತ್ಯವೂ ಹೆಚ್ಚೇನೂ ಇಲ್ಲ. ಆದರೆ ವಿದ್ಯುತ್ ಉತ್ಪಾದಕಾ ಘಟಕಗಳನ್ನು ಖಾಸಗಿಯವರಿಗೆ ನೀಡುವ ಉದ್ದೇಶದಿಂದ ಸರ್ಕಾರ ಕೃತಕ ಅಭಾವ ಸೃಷ್ಟಿ ಮಾಡಬಾರದು. ಹಾಗೇನಾದರೂ ಸರ್ಕಾರ ಮಾಡಿದರೆ ನಾನು ಅದನ್ನು ಖಂಡಿಸುತ್ತೇನೆ ಎಂದು ಹೇಳಿದರು.

ವಿದ್ಯುತ್ ಘಟಕಗಳನ್ನು ಖಾಸಗೀಕರಣ ಮಾಡಬಾರದು. ಇದರಿಂದ ರೈತರಿಗೆ ಅನ್ಯಾಯವಾಗಲಿದೆ. ಒಮ್ಮೆ ಖಾಸಗೀಕರಣಗೊಂಡರೆ ರೈತರಿಗೆ ಪೂರೈಕೆಯಾಗುತ್ತಿರುವ ಉಚಿತ ವಿದ್ಯುತ್ ಸ್ಥಗಿತಗೊಳ್ಳುವ ಅಪಾಯವಿದೆ ಎಂದರು.

ಎನ್​ಟಿಪಿಸಿ ಅಧಿಕಾರಿಗಳೊಂದಿಗೆ ಅಮಿತ್ ಶಾ ಸಬೆ ದೇಶದಲ್ಲಿ ಕಲ್ಲಿದ್ದಲು ಕೊರತೆ ಕಾಣಿಸಿಕೊಂಡಿದೆ ಎಂಬ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿವಿಧ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದರು. ಸಭೆಯಲ್ಲಿ ಎನ್​​ಟಿಪಿಸಿ ಅಧಿಕಾರಿಗಳು ‌ಸಹ ಪಾಲ್ಗೊಂಡಿದ್ದರು. ದೇಶದಲ್ಲಿ ಪ್ರಸ್ತುತ 72 ಲಕ್ಷ ಟನ್ ಕಲ್ಲಿದ್ದಲು ಸಂಗ್ರಹವಿದೆ. ಇದು ಮುಂದಿನ ನಾಲ್ಕು ದಿನಗಳ ಬಳಕೆಗೆ ಸಾಕಾಗುತ್ತದೆ. ಶೇ 70ರಷ್ಟು ವಿದ್ಯುತ್ ಶಾಖೋತ್ಪನ್ನ ಘಟಕಗಳಿಂದಲೇ ಉತ್ಪಾದನೆಯಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

No Shortfall of coal for Electricity in Karnataka says Sunil kumar

ಇದನ್ನೂ ಓದಿ: Coal Crisis ದೇಶದಲ್ಲಿ ಕಲ್ಲಿದ್ದಲು ಬಿಕ್ಕಟ್ಟು ಇಲ್ಲ ಎಂದ ಕೇಂದ್ರ, ಇದೆ ಎನ್ನುತ್ತಿವೆ ರಾಜ್ಯಗಳು; ಹೇಗಿದೆ ಪರಿಸ್ಥಿತಿ? ಇದನ್ನೂ ಓದಿ: ಕಲ್ಲಿದ್ದಲು ಕೊರತೆಯಿಂದ ಆರ್‌ಟಿಪಿಎಸ್‌ನ ಮತ್ತೊಂದು ಘಟಕ ಬಂದ್; 8 ನೇ ಘಟಕದಿಂದ ವಿದ್ಯುತ್ ಉತ್ಪಾದನೆ ಸ್ಥಗಿತ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್