AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಶಿಷ್ಟ ಜಾತಿ ಮಕ್ಕಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಲ್ಲ: ಕೋಟ ಶ್ರೀನಿವಾಸ ಪೂಜಾರಿ

1 ರಿಂದ 8ನೇ ತರಗತಿಯ ಪರಿಶಿಷ್ಟ ಜಾತಿ ಮಕ್ಕಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ಪರಿಶಿಷ್ಟ ಜಾತಿ ಮಕ್ಕಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಲ್ಲ: ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ್​ ಪೂಜಾರಿ
TV9 Web
| Edited By: |

Updated on: Dec 06, 2022 | 5:57 PM

Share

ಬೆಂಗಳೂರು: 1 ರಿಂದ 8ನೇ ತರಗತಿಯ ಪರಿಶಿಷ್ಟ ಜಾತಿ (SC) ಮಕ್ಕಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು (pre matric student scholarship) ಸ್ಥಗಿತಗೊಳಿಸಲ್ಲ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಸ್ಪಷ್ಟಪಡಿಸಿದ್ದಾರೆ. ಕಾರ್ಯಕ್ರಮ ಸಂಪೂರ್ಣ ರಾಜ್ಯ ವಲಯದ ಯೋಜನೆಯಲ್ಲಿ ಯಾವುದೇ ಗೊಂದಲವಿಲ್ಲ. ಯೋಜನೆ ಈ ಹಿಂದಿನಂತೆಯೇ ಮುಂದುವರಿಯಲಿದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ತ್ವರಿತ ಅನುಷ್ಠಾನಕ್ಕೆ ಸೂಚನೆ

SC, ST ಸಮುದಾಯದ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಿ. ಯೋಜನೆ ಜಾರಿಗೆ ನಿಯಮಗಳನ್ನು ಸರಳೀಕರಿಸಿ. ಡಿಬಿಟಿ ಹೊರತುಪಡಿಸಿ ಸರಳ ಮಾರ್ಗಗಳಲ್ಲಿ ಯೋಜನೆ ಜಾರಿ ಮಾಡಿ. ಫಲಾನುಭವಿ ಕುಟುಂಬಗಳ ವಿದ್ಯುತ್ ಶುಲ್ಕ ವಸೂಲಿ ಹಾಗೂ ಪರಿಹಾರ ಕ್ರಮಗಳಿಗೆ ಮಾರ್ಗೋಪಾಯ ಕಂಡುಕೊಳ್ಳಿ. ಹಾಗೇ ಹೆಸ್ಕಾಂಗಳಲ್ಲಿ ಬಾಕಿ ಉಳಿದಿರುವ ವಿದ್ಯುತ್ ಶುಲ್ಕವನ್ನು ವಸೂಲಿ ಮಾಡಿ ಎಂದು ವಿಕಾಸಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಸಿದ್ದಾರೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ