AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಯಾರೂ ಟಚ್ ಮಾಡೋಕೆ ಆಗಲ್ಲ, ಪಿಕ್ಚರ್ ಅಭೀ ಬಾಕಿ ಹೈ’: ಸಿಸಿಬಿ ನಡೆ, ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದ ತನಿಖೆಯಲ್ಲಿ ಸಿಸಿಬಿ ಪೊಲೀಸರು ತಮ್ಮ ದೆಹಲಿ ನಿವಾಸದ ಲಿಂಕ್ ಪ್ರಸ್ತಾಪಿಸುತ್ತಿದ್ದಂತೆ ಆಕ್ರೋಶಗೊಂಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ ಎಂದಿದ್ದು, ನಾಳೆ ಹಲವು ವಿಚಾರ ಬಹಿರಂಗಪಡಿಸುವುದಾಗಿ ಹೇಳಿದ್ದಾರೆ.

‘ನನ್ನ ಯಾರೂ ಟಚ್ ಮಾಡೋಕೆ ಆಗಲ್ಲ, ಪಿಕ್ಚರ್ ಅಭೀ ಬಾಕಿ ಹೈ’: ಸಿಸಿಬಿ ನಡೆ, ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಹೆಚ್.ಡಿ. ಕುಮಾರಸ್ವಾಮಿImage Credit source: PTI
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Nov 01, 2026 | 8:41 PM

Share

ಮುಖ್ಯಾಂಶಗಳು

  • ನನ್ನನ್ನು ಮುಟ್ಟಲು ಸರ್ಕಾರಕ್ಕೆ ಸಾಧ್ಯವಿಲ್ಲ: ಕುಮಾರಸ್ವಾಮಿ
  • ಕಮಿಷನರ್ ಸೀಮಂತ್ ಕುಮಾರ್ ಸಿಂಗ್‌ ವಿರುದ್ಧವೂ ವಾಗ್ದಾಳಿ
  • ನಾಳೆ ನಿಜವಾದ ‘ಪಿಕ್ಚರ್’ ತೋರಿಸುವೆ: ಪ್ರಿಯಾಂಕ್ ಖರ್ಗೆಗೆ ತಿರುಗೇಟು

ಬೆಂಗಳೂರು, ನವೆಂಬರ್ 1: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಬಹುಚರ್ಚಿತ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನಡೆಸುತ್ತಿರುವ ತನಿಖೆ ಮತ್ತು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೀಡಿದ್ದ ಹೇಳಿಕೆ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಈ ಸರ್ಕಾರದ ಆಡಳಿತ ಯಂತ್ರ ಹಾಗೂ ಅಧಿಕಾರಿಗಳು ಈ ಕುಮಾರಸ್ವಾಮಿಯನ್ನು ಅಷ್ಟು ಸುಲಭವಾಗಿ ಎದುರಿಸಲು ಅಥವಾ ಟಚ್ ಮಾಡಲು ಸಾಧ್ಯವಿಲ್ಲ’ ಎಂದು ನೇರ ಸವಾಲು ಒಡ್ಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ವಿಡಿಯೋ ಅಪ್ಲೋಡ್ ಮಾಡಲು ಬಳಸಲಾದ ಮೊಬೈಲ್ ಫೋನ್ ದೆಹಲಿಯಲ್ಲಿರುವ ಹೆಚ್‌ಡಿಕೆ ನಿವಾಸದ ಬಳಿ ವಿನಿಮಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೀಡಿದ್ದ ಹೇಳಿಕೆಯನ್ನು ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು. ‘ಯಾರೀ ಅದು ಕಮಿಷನರ್? ಅವರು ಪೊಲೀಸ್ ಕಮಿಷನರಾ ಅಥವಾ ಹೆಡ್ ಕ್ಲರ್ಕಾ? ಕರ್ಕ್ ತರ ನಡೆದುಕೊಳ್ಳುತ್ತಿದ್ದಾರೆ. ತಮ್ಮ ಹುದ್ದೆ ಮತ್ತು ಜಾಗವನ್ನು ಉಳಿಸಿಕೊಳ್ಳಲು ಯಾರ ಹಂಗಿನಲ್ಲೋ ಈ ರೀತಿ ಜವಾಬ್ದಾರಿರಹಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ತಮ್ಮ ಜಾಗ ಉಳಿಸಿಕೊಳ್ಳಲು ಏನೆಲ್ಲಾ ಮಾಡುತ್ತಿದ್ದಾರೆ ಎಂಬುದು ನನಗೂ ಚೆನ್ನಾಗಿ ಗೊತ್ತಿದೆ’ ಎಂದು ಕಿಡಿಕಾರಿದರು.

ಹೆಚ್.ಡಿ. ಕುಮಾರಸ್ವಾಮಿ ಮಾತಿನ ವಿಡಿಯೋ

ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ‘ಟ್ರೇಲರ್ ಅಷ್ಟೇ ಮುಗಿದಿದೆ, ಪಿಕ್ಚರ್ ಅಭೀ ಬಾಕಿ ಹೈ’ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ‘ನಾನು ಮೂಲತಃ ಸಿನಿಮಾ ನಿರ್ಮಾಣ ಮಾಡಿದವನು, ಇವರಿಂದ ಸಿನಿಮಾ ಕಲಿಯುವ ಅಗತ್ಯವಿಲ್ಲ. ಇವರು ಈಗ ಸಿನಿಮಾ ಮಾಡಲು ಹೊರಟಿದ್ದಾರೆ. ಸೋಮವಾರ ಬೆಳಿಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ನಿಜವಾದ ಪಿಕ್ಚರ್ ತೋರಿಸುತ್ತೇನೆ. ಈ ಸ್ಟಿಂಗ್ ಆಪರೇಷನ್ ಪ್ರಕರಣ ಯಾರಿಗೆ ತಿರುಗುಬಾಣ ಆಗಲಿದೆ, ಸರ್ಕಾರ ಯಾರನ್ನೆಲ್ಲ ರಕ್ಷಣೆ ಮಾಡುತ್ತಿದೆ ಮತ್ತು ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ದಾಖಲೆ ಸಮೇತ ವಿವರಿಸುತ್ತೇನೆ’ ಎಂದರು.

ಇದನ್ನೂ ಓದಿ: ಸ್ಟಿಂಗ್ ಪ್ರಕರಣ: ರೋಚಕ ಕಹಾನಿಯನ್ನು ಸಿಸಿಬಿ ಪೊಲೀಸರು ಬೇಧಿಸಿದ್ಹೇಗೆ, ಹೆಚ್​ಡಿಕೆ ಲಿಂಕ್ ಏನು? ಇಲ್ಲಿದೆ ಅಚ್ಚರಿಯ ಮಾಹಿತಿ

ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಕೋರ್ಟ್‌ನಿಂದ ತಡೆಯಾಜ್ಞೆ ತಂದಿರುವುದು ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಗಳನ್ನು ಉಲ್ಲೇಖಿಸಿದ ಅವರು, ತಮ್ಮ ಬೆಂಬಲಿಗರು ಅಥವಾ ಕಾರ್ಯಕರ್ತರು ಯಾರೂ ಗಾಬರಿಯಾಗುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 pm, Sun, 1 November 26

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಸುದೀಪ್ ಎದುರು, ಸೋನಿಕಾ-ಧನುಶ್​​ ಅವರ ಮಿಮಿಕ್ ಮಾಡಿದ ತಾಂಡವ್-ಪ್ರಶಾಂತ್
ಸುದೀಪ್ ಎದುರು, ಸೋನಿಕಾ-ಧನುಶ್​​ ಅವರ ಮಿಮಿಕ್ ಮಾಡಿದ ತಾಂಡವ್-ಪ್ರಶಾಂತ್
ಬೆಂಗಳೂರಿನಲ್ಲಿ ಮೈ ಹೋಮ್ ಗ್ರೂಪ್‌ನ ನೂತನ ಕಚೇರಿ ಉದ್ಘಾಟನೆ
ಬೆಂಗಳೂರಿನಲ್ಲಿ ಮೈ ಹೋಮ್ ಗ್ರೂಪ್‌ನ ನೂತನ ಕಚೇರಿ ಉದ್ಘಾಟನೆ
ಬಿಜೆಪಿಗೆ ವಾಪಸಾಗಲು ಯತ್ನಾಳ್ ಹಾಕಿದ್ರು 2 ಕಂಡಿಷನ್‌! ಏನದು? ಇಲ್ಲಿದೆ ನೋಡಿ
ಬಿಜೆಪಿಗೆ ವಾಪಸಾಗಲು ಯತ್ನಾಳ್ ಹಾಕಿದ್ರು 2 ಕಂಡಿಷನ್‌! ಏನದು? ಇಲ್ಲಿದೆ ನೋಡಿ
ನವೆಂಬರ್ 2 ರಿಂದ 8 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 2 ರಿಂದ 8 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸ್ಟಿಂಗ್: ಸರ್ಕಾರ ಯಾರನ್ನು ರಕ್ಷಿಸುತ್ತಿದೆ? ಪ್ರಲ್ಹಾದ್ ಜೋಶಿ ಪ್ರಶ್ನೆ
ಸ್ಟಿಂಗ್: ಸರ್ಕಾರ ಯಾರನ್ನು ರಕ್ಷಿಸುತ್ತಿದೆ? ಪ್ರಲ್ಹಾದ್ ಜೋಶಿ ಪ್ರಶ್ನೆ
ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ ಸೌಲಭ್ಯ!
ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ ಸೌಲಭ್ಯ!
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ