ಕೊವಿಡ್ನಿಂದ ಅನಾಥರಾದ ಮಕ್ಕಳಿಗೆ ಸೌಲಭ್ಯ ಒದಗಿಸಲು ನೋಡಲ್ ಅಧಿಕಾರಿ ನೇಮಕ
Karnataka Covid Update: ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಸರ್ಕಾರದಿಂದ ಅತ್ಯಾವಶ್ಯಕ ಸೌಕರ್ಯಗಳನ್ನು ಆದ್ಯತೆಯ ಆಧಾರದ ಮೇಲೆ ಒದಗಿಸುವ ಸಲುವಾಗಿ ಅಗತ್ಯ ಕ್ರಮವಹಿಸುವ ಜವಾಬ್ಧಾರಿಯನ್ನು ನೋಡಲ್ ಅಧಿಕಾರಿಗೆ ವಹಿಸಲಾಗಿದೆ.
ಬೆಂಗಳೂರು: ಕೊವಿಡ್ನಿಂದ ತಂದೆ, ತಾಯಿ ಅಥವಾ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸರ್ಕಾರದಿಂದ ಅಗತ್ಯ ಸೌಕರ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ನೋಡಲ್ ಅಧಿಕಾರಿಯನ್ನು ನೇಮಿಸಿದೆ. ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕ ಆಯುಕ್ತರಾದ ಕೆ.ಪಿ.ಮೋಹನ್‌ರಾಜ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಸರ್ಕಾರದಿಂದ ಅತ್ಯಾವಶ್ಯಕ ಸೌಕರ್ಯಗಳನ್ನು ಆದ್ಯತೆಯ ಆಧಾರದ ಮೇಲೆ ಒದಗಿಸುವ ಸಲುವಾಗಿ ಅಗತ್ಯ ಕ್ರಮವಹಿಸುವ ಜವಾಬ್ಧಾರಿಯನ್ನು ನೋಡಲ್ ಅಧಿಕಾರಿಗೆ ವಹಿಸಲಾಗಿದೆ.
ವೈದ್ಯರು ಮತ್ತು ವೈದ್ಯೇತರ ಸಿಬ್ಬಂದಿಗೆ ಜಿಲ್ಲೆಗಳಲ್ಲಿನ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಶೇ 10ರಷ್ಟು ಹಾಸಿಗೆ ಮೀಸಲಿಡುವಂತೆ ಹಾಸಿಗೆ ಮೀಸಲಿಡಲು ಆರೋಗ್ಯ ಇಲಾಖೆಯ ನಿರ್ದೇಶಕರು ಆದೇಶಿಸಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಮತ್ತು ವೈದ್ಯೇತರ ಸಿಬ್ಬಂದಿ ಹಾಗೂ ಅವರ ಕುಟುಂಬಕ್ಕೆ ಚಿಕಿತ್ಸೆ ಒದಗಿಸಲು ಅನುಕೂಲವಾಗುವಂತೆ ಈ ಆದೇಶ ಹೊರಡಿಸಲಾಗಿದೆ.
ಇಂದು ಎಷ್ಟು ಜನಕ್ಕೆ ಕೊರೊನಾ ಸೋಂಕು ಕರ್ನಾಟಕದಲ್ಲಿ ಸೋಮವಾರ (ಮೇ 3) ಒಟ್ಟು 44,438 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 239 ಜನರು ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 22,112 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 115 ಜನರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16,46,303ಕ್ಕೆ (16.46 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿಂದು ಕೊರೊನಾ ಸೋಂಕಿನಿಂದ 239 ಜನರ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 16,250ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 11,85,299 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 4,44,734 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 22,112 ಜನರಿಗೆ ಸೋಂಕು ದೃಢಪಟ್ಟಿದೆ. ನಗರದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 8,19,404ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿಂದು ಕೊರೊನಾ ಸೋಂಕಿಗೆ 115 ಜನರು ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 6716ಕ್ಕೆ ಏರಿಕೆಯಾಗಿದೆ. 8,19,404 ಸೋಂಕಿತರ ಪೈಕಿ 5,17,770 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,94,917 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ 44,438 ಮಂದಿಗೆ ಕೊರೊನಾ ಸೋಂಕು, 239 ಸಾವು
K Sudhakar Press Meet: ಆಕ್ಸಿಜನ್ ಕೊರತೆಯಿಂದ ಮೂವರು ಮಾತ್ರ ಸಾವನ್ನಪ್ಪಿದ್ದಾರೆ; ಸಚಿವ ಸುಧಾಕರ್ ಸ್ಪಷ್ಟನೆ
Published On - 8:39 pm, Mon, 3 May 21