ಮಂಗಳೂರಿನಲ್ಲಿ ಮತ್ತೆ ಧರ್ಮ ದಂಗಲ್; ಜಾತ್ರೆಯಲ್ಲಿಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಬೇಡವೆಂದು ಆಗ್ರಹ

ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂಬ ಕೂಗು ಕೇಳಿ ಬಂದಿದೆ. ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಜಯರಾಮ್ ಶೆಟ್ಟಿಗಾರ್ ಎಂಬುವವರು ದೇವಸ್ಥಾನದ 150 ಮೀ ವ್ಯಾಪ್ತಿಯೊಳಗೆ ಅನ್ಯಮತೀಯ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದು ಹಾಗೂ ದೇವಸ್ಥಾನದ ವಠಾರದಲ್ಲಿ ಹಿಂದುಗಳೇ ವ್ಯಾಪಾರ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಮಂಗಳೂರಿನಲ್ಲಿ ಮತ್ತೆ ಧರ್ಮ ದಂಗಲ್; ಜಾತ್ರೆಯಲ್ಲಿಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಬೇಡವೆಂದು ಆಗ್ರಹ
ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘವು ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಪತ್ರ ಸಲ್ಲಿಸಿದೆ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಆಯೇಷಾ ಬಾನು

Updated on:Mar 23, 2024 | 9:55 AM

ಮಂಗಳೂರು, ಮಾರ್ಚ್​.23: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನದಲ್ಲಿ ಮತ್ತೆ ವ್ಯಾಪಾರ ಧರ್ಮ ದಂಗಲ್ ಕಂಡು ಬಂದಿದೆ. ಅನ್ಯಮತೀಯರಿಗೆ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘವು ದೇವಸ್ಥಾನದ ಆಡಳಿತ ಮಂಡಳಿಗೆ ಆಗ್ರಹಿಸಿದೆ. ಮುಲ್ಕಿಯಲ್ಲಿ ನಡೆಯಲಿರುವ ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ (Bappanadu Durga Parameshwari Temple) ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂಬ ಕೂಗು ಕೇಳಿ ಬಂದಿದೆ.

ಬಪ್ಪನಾಡುವಿನ ವ್ಯಾಪಾರ ಧರ್ಮ ದಂಗಲ್ ಕಳೆದ ವರ್ಷ ಬ್ಯಾನರ್ ಮೂಲಕ ಸದ್ದು ಮಾಡಿತ್ತು. ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಜಯರಾಮ್ ಶೆಟ್ಟಿಗಾರ್ ಎಂಬುವವರು ದೇವಸ್ಥಾನದ 150 ಮೀ ವ್ಯಾಪ್ತಿಯೊಳಗೆ ಅನ್ಯಮತೀಯ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದು ಹಾಗೂ ದೇವಸ್ಥಾನದ ವಠಾರದಲ್ಲಿ ಹಿಂದುಗಳೇ ವ್ಯಾಪಾರ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸನಾತನ ಧರ್ಮಕ್ಕಾಗಿ ಒಗ್ಗೂಡುವ ಸಮಯ ಬಂದಿದೆ; ದ್ವೇಷದ ಪೋಸ್ಟ್ ಹಾಕಿದ್ದಕ್ಕೆ ಸಿ.ಟಿ. ರವಿ ವಿರುದ್ಧ ಎಫ್ಐಆರ್

ಬಪ್ಪ ಬ್ಯಾರಿ ಎಂಬ ಕೇರಳ ವ್ಯಾಪಾರಿಯು ದೇವಸ್ಥಾನವನ್ನು ಕಟ್ಟಿದರು ಎಂದು ಹೇಳಲಾಗುತ್ತೆ. ಇದು ದೇವಿಯ ಮಹಿಮೆಯನ್ನು ತಿಳಿಸುತ್ತದೆ. ಮುಲ್ಕಿ ನದಿಯ ಪ್ರವಾಹದಲ್ಲಿ ದೇವಸ್ಥಾನವು ನಶಿಸಿತು. ಆದರೆ 5 ಲಿಂಗಗಳ ಪೀಠಕ್ಕೆ ಯಾವುದೇ ಹಾನಿಯಾಗಿರಲಿಲ್ಲ. ಒಂದು ದಿನ ಬಪ್ಪ ಬ್ಯಾರಿ ಹಡಗು ಆ ಲಿಂಗಗಳಿಗೆ ಡಿಕ್ಕಿ ಹೊಡೆಯಿತು. ಆಗ ಅವನಿಗೆ ದುರ್ಗಾದೇವಿಯು ಕನಸಿನಲ್ಲಿ ಬಂದು ಆ ಲಿಂಗಗಳಿಗೆ ದೇವಸ್ಥಾನವನ್ನು ಕಟ್ಟಲು ಹೇಳಿದಂತಾಯಿತು. ಆದ್ದರಿಂದ ಈ ಸ್ಥಳವನ್ನು ಬಪ್ಪ ಎಂದು ಕರೆಯುತ್ತಾರೆ.

ಈ ವಿಷಯವನ್ನು ತಲೆಯಲ್ಲಿ ಇಟ್ಟುಕೊಂಡು ಬಪ್ಪ ಬ್ಯಾರಿ ಮನೆತನದವರು ಉತ್ಸವಗಳಲ್ಲಿ ಪ್ರಸಾದವನ್ನು ಹಂಚುತ್ತಾರೆ. ಈ ಮನೆತನದವರು ಹೂವು ಹಣ್ಣುಗಳನ್ನು ಅರ್ಪಿಸುತ್ತಾರೆ. ಆ 5 ಲಿಂಗಗಳು ಯಾವುವೆಂದರೆ ಮೂಲ ದುರ್ಗ, ಅಗ್ನಿ ದುರ್ಗ, ಜಲದುರ್ಗ, ವನದುರ್ಗ, ಆಗ್ರಾದುರ್ಗ ಇವೆಲ್ಲವುಗಳು ಒಂದೇ ಪಾಣಿಪೀಠದಲ್ಲಿ ಸ್ಥಾಪಿಸಿದ್ದಾರೆ. ಮುಖ್ಯವಾದ ಹಬ್ಬಗಳು ಯಾವುವೆಂದರೆ ಕಾರ್ತಿಕ ಪೂಜಾ ದೀಪೋತ್ಸವ, ಶರನ ನವರಾತ್ರಿ ಯುಗಾದಿ ಮತ್ತು ಶುಕ್ರವಾರ ವಿಶೇಷ ಪೂಜೆಗಳು ಜಾತ್ರೆಯು ಮಾರ್ಚ್-ಏಪ್ರಿಲ್‌ಗಳಲ್ಲಿ 9 ದಿನಗಳ ಕಾಲ ನಡೆಯುತ್ತದೆ.

ಇಲ್ಲಿ ನಡೆಯುವ ಜಾತ್ರೆಗೆ ಮತ, ಧರ್ಮವೀರಿ ಎಲ್ಲರೂ ಭಾಗವಹಿಸುತ್ತಾರೆ. ಆದರೆ ಕಳೆದ 2-3 ವರ್ಷಗಳಿಂದ ಇಲ್ಲಿ ಧರ್ಮ ದಂಗಲ್ ನಡೆಯುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:53 am, Sat, 23 March 24

45 ವರ್ಷಗಳ ನಂತರ ತೆರೆದ ಸಂಭಾಲ್‌ನ ದೇವಾಲಯ; ವಿಡಿಯೋ ವೈರಲ್
45 ವರ್ಷಗಳ ನಂತರ ತೆರೆದ ಸಂಭಾಲ್‌ನ ದೇವಾಲಯ; ವಿಡಿಯೋ ವೈರಲ್
ಭಾರತವನ್ನು ವಿಶ್ವವು ಪ್ರಜಾಪ್ರಭುತ್ವದ ತಾಯಿಯೆಂದು ಆದರಿಸುತ್ತದೆ: ಪ್ರಧಾನಿ
ಭಾರತವನ್ನು ವಿಶ್ವವು ಪ್ರಜಾಪ್ರಭುತ್ವದ ತಾಯಿಯೆಂದು ಆದರಿಸುತ್ತದೆ: ಪ್ರಧಾನಿ
Bigg Boss: ರಜತ್ ಮಾಡಿದ ತಪ್ಪಿಗೆ ಶಿಕ್ಷೆ ವಿಧಿಸಿದ ಕಿಚ್ಚ ಸುದೀಪ್
Bigg Boss: ರಜತ್ ಮಾಡಿದ ತಪ್ಪಿಗೆ ಶಿಕ್ಷೆ ವಿಧಿಸಿದ ಕಿಚ್ಚ ಸುದೀಪ್
ಬ್ರ್ಯಾಂಡ್ ಬೆಂಗಳೂರು ಸಿಗುತ್ತಿಲ್ಲ, ರಸ್ತೆಗುಂಡಿಗಳಲ್ಲಿ ದಫನ್ ಆಯಿತೇ?
ಬ್ರ್ಯಾಂಡ್ ಬೆಂಗಳೂರು ಸಿಗುತ್ತಿಲ್ಲ, ರಸ್ತೆಗುಂಡಿಗಳಲ್ಲಿ ದಫನ್ ಆಯಿತೇ?
ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ:ಶಾಸಕ
ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ:ಶಾಸಕ
ಪರಭಾಷಾ ಚಿತ್ರಗಳ ಹಾವಳಿ ಹೆಚ್ಚುತ್ತಿದೆ, ಕಡಿಮೆಯಾಗುತ್ತಿಲ್ಲ: ಗೋವಿಂದು
ಪರಭಾಷಾ ಚಿತ್ರಗಳ ಹಾವಳಿ ಹೆಚ್ಚುತ್ತಿದೆ, ಕಡಿಮೆಯಾಗುತ್ತಿಲ್ಲ: ಗೋವಿಂದು
ಧರಣಿಯಲ್ಲಿ ಪಾಲ್ಗೊಂಡ ಸಚಿವೆಯನ್ನು ಸಿಎಂ ಸಸ್ಪೆಂಡ್ ಮಾಡಲಿ: ಸ್ವಾಮೀಜಿ
ಧರಣಿಯಲ್ಲಿ ಪಾಲ್ಗೊಂಡ ಸಚಿವೆಯನ್ನು ಸಿಎಂ ಸಸ್ಪೆಂಡ್ ಮಾಡಲಿ: ಸ್ವಾಮೀಜಿ
ಗುರಿ ಕಳೆದುಕೊಂಡವರಿಗೆ, ಹಾದಿ ತಪ್ಪಿದವರಿಗೆ ಕಿಚ್ಚ ತೋರಲಿದ್ದಾರೆ ದಾರಿ
ಗುರಿ ಕಳೆದುಕೊಂಡವರಿಗೆ, ಹಾದಿ ತಪ್ಪಿದವರಿಗೆ ಕಿಚ್ಚ ತೋರಲಿದ್ದಾರೆ ದಾರಿ
ನಮ್ಮ ಹೋರಾಟಗಳನ್ನು ನಿಲ್ಲಿಸುವ ವ್ಯರ್ಥ ಪ್ರಯತ್ನ ಸರ್ಕಾರ ಮಾಡ್ತಿದೆ: ಅಶೋಕ
ನಮ್ಮ ಹೋರಾಟಗಳನ್ನು ನಿಲ್ಲಿಸುವ ವ್ಯರ್ಥ ಪ್ರಯತ್ನ ಸರ್ಕಾರ ಮಾಡ್ತಿದೆ: ಅಶೋಕ
ಅಲ್ಲು ಅರ್ಜುನ್ ಬಂಧನದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ: ಗುಂಡೂರಾವ್
ಅಲ್ಲು ಅರ್ಜುನ್ ಬಂಧನದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ: ಗುಂಡೂರಾವ್