AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ನಿಲ್ಲದ ವರುಣಾರ್ಭಟ; ಆ.2 ರಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

ಕರ್ನಾಟಕದ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, ಭಾರಿ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿವೆ. ಈ ಹಿನ್ನಲೆ ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕದ ಈ ಕೆಳಗಿನ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ(ಆ.02) ರಜೆ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ನಿಲ್ಲದ ವರುಣಾರ್ಭಟ; ಆ.2 ರಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ
ಆ.2 ರಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Aug 01, 2024 | 10:23 PM

Share

ಬೆಂಗಳೂರು, ಆ.01: ಕರ್ನಾಟಕದಾದ್ಯಂತ ಮಳೆ(Rain)ಯ ಅಬ್ಬರ ಜೋರಾಗಿದೆ. ಅದರಲ್ಲೂ ಮಲೆನಾಡು ಭಾಗಗಳಲ್ಲಿ ವರುಣಾರ್ಭಟಕ್ಕೆ ಗುಡ್ಡು ಕುಸಿತ ಉಂಟಾಗಿದ್ದರೆ, ಕೆಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹಲವರು ಸೂರನ್ನು ಕಳೆದುಕೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆ ಮುಂಜಾಗೃತ ಕ್ರಮವಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಈ ಕೆಳಗಿನ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ(ಆ.02) ರಜೆ ಘೋಷಿಸಲಾಗಿದೆ.

ಈ ಕೆಳಗಿನ ಜಿಲ್ಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ‌ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಇದನ್ನೂ ಓದಿ:ಮಳೆಗಾಗಿ ದೇವರ ಮೊರೆ ಹೋದ ಜನ; ಧಾರ್ಮಿಕ ಆಚರಣೆಗಳ ಮೂಲಕ ಪ್ರಾರ್ಥನೆ

ಉಡುಪಿ ಜಿಲ್ಲೆಯ ಶಾಲೆ, PU ಕಾಲೇಜಿಗೆ ರಜೆ

ಉಡುಪಿ: ಜಿಲ್ಲೆಯಲ್ಲಿ ನಾಳೆ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಶುಕ್ರವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ, PU ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಉಡುಪಿ ಡಿಸಿ ಡಾ. ವಿದ್ಯಾಕುಮಾರಿ ಆದೇಶಿಸಿದ್ದಾರೆ. ಜೊತೆಗೆ ನದಿ, ಸಮುದ್ರ ತೀರದ ಜನರಿಗೆ ಎಚ್ಚರವಹಿಸಲು ಸೂಚಿಸಲಾಗಿದೆ. ಇನ್ನು ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜಿಗೆ ಎಂದಿನಂತೆ ತರಗತಿ ನಡೆಯಲಿದೆ.

ಉತ್ತರ ಕನ್ನಡ ಜಿಲ್ಲೆಯ 7 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ: ಭಾರತೀಯ ಹವಮಾನ ಇಲಾಖೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಆ.01 ರ ಮಧ್ಯಾಹ್ನ 1:00 ಗಂಟೆಯಿಂದ ಆ.2 ರ ಬೆಳಿಗ್ಗೆ 08-30 ರವರೆಗೆ ಭಾರಿ ಮಳೆಯಾಗುವ ಸೂಚನೆ (ರೆಡ್ ಅಲರ್ಟ್)ನ್ನು ನೀಡಿದೆ. ಭಾರಿ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿದ್ದು, ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯಿದ್ದು, ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕಿನ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ನಾಳೆ (ಆ.2) ರಜೆ ಘೋಷಿಸಿದ್ದಾರೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:20 pm, Thu, 1 August 24

Follow Us
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!