ಕರ್ನಾಟಕದಲ್ಲಿ ನಿಲ್ಲದ ವರುಣಾರ್ಭಟ; ಆ.2 ರಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

ಕರ್ನಾಟಕದ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, ಭಾರಿ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿವೆ. ಈ ಹಿನ್ನಲೆ ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕದ ಈ ಕೆಳಗಿನ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ(ಆ.02) ರಜೆ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ನಿಲ್ಲದ ವರುಣಾರ್ಭಟ; ಆ.2 ರಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ
ಆ.2 ರಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ
ಕಿರಣ್ ಹನುಮಂತ್​ ಮಾದಾರ್

Updated on: Aug 01, 2024 | 10:23 PM

ಬೆಂಗಳೂರು, ಆ.01: ಕರ್ನಾಟಕದಾದ್ಯಂತ ಮಳೆ(Rain)ಯ ಅಬ್ಬರ ಜೋರಾಗಿದೆ. ಅದರಲ್ಲೂ ಮಲೆನಾಡು ಭಾಗಗಳಲ್ಲಿ ವರುಣಾರ್ಭಟಕ್ಕೆ ಗುಡ್ಡು ಕುಸಿತ ಉಂಟಾಗಿದ್ದರೆ, ಕೆಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹಲವರು ಸೂರನ್ನು ಕಳೆದುಕೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆ ಮುಂಜಾಗೃತ ಕ್ರಮವಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಈ ಕೆಳಗಿನ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ(ಆ.02) ರಜೆ ಘೋಷಿಸಲಾಗಿದೆ.

ಈ ಕೆಳಗಿನ ಜಿಲ್ಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ‌ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಇದನ್ನೂ ಓದಿ:ಮಳೆಗಾಗಿ ದೇವರ ಮೊರೆ ಹೋದ ಜನ; ಧಾರ್ಮಿಕ ಆಚರಣೆಗಳ ಮೂಲಕ ಪ್ರಾರ್ಥನೆ

ಉಡುಪಿ ಜಿಲ್ಲೆಯ ಶಾಲೆ, PU ಕಾಲೇಜಿಗೆ ರಜೆ

ಉಡುಪಿ: ಜಿಲ್ಲೆಯಲ್ಲಿ ನಾಳೆ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಶುಕ್ರವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ, PU ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಉಡುಪಿ ಡಿಸಿ ಡಾ. ವಿದ್ಯಾಕುಮಾರಿ ಆದೇಶಿಸಿದ್ದಾರೆ. ಜೊತೆಗೆ ನದಿ, ಸಮುದ್ರ ತೀರದ ಜನರಿಗೆ ಎಚ್ಚರವಹಿಸಲು ಸೂಚಿಸಲಾಗಿದೆ. ಇನ್ನು ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜಿಗೆ ಎಂದಿನಂತೆ ತರಗತಿ ನಡೆಯಲಿದೆ.

ಉತ್ತರ ಕನ್ನಡ ಜಿಲ್ಲೆಯ 7 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ: ಭಾರತೀಯ ಹವಮಾನ ಇಲಾಖೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಆ.01 ರ ಮಧ್ಯಾಹ್ನ 1:00 ಗಂಟೆಯಿಂದ ಆ.2 ರ ಬೆಳಿಗ್ಗೆ 08-30 ರವರೆಗೆ ಭಾರಿ ಮಳೆಯಾಗುವ ಸೂಚನೆ (ರೆಡ್ ಅಲರ್ಟ್)ನ್ನು ನೀಡಿದೆ. ಭಾರಿ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿದ್ದು, ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯಿದ್ದು, ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕಿನ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ, ಐ.ಟಿ.ಐ
ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ನಾಳೆ (ಆ.2) ರಜೆ ಘೋಷಿಸಿದ್ದಾರೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:20 pm, Thu, 1 August 24

Loading...
Unable to load recommendations.
Follow Us