AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಇಂದಿನಿಂದ ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ಮಳೆ ಜೋರು, ಆರೆಂಜ್ ಅಲರ್ಟ್​

ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ ಇದ್ದರೆ, ಚಿತ್ರದುರ್ಗ, ದಾವಣಗೆರೆ, ಹಾಸನ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಇಂದಿನಿಂದ ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ಮಳೆ ಜೋರು, ಆರೆಂಜ್ ಅಲರ್ಟ್​
ಮಳೆImage Credit source: Chaitanya Vee Filter Screens
ನಯನಾ ರಾಜೀವ್
|

Updated on: Jul 12, 2024 | 7:43 AM

Share

ಕರ್ನಾಟಕದಲ್ಲಿ ಮುಂಗಾರು ಮುಂದುವರೆದಿದೆ, ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ ಇದ್ದರೆ, ಚಿತ್ರದುರ್ಗ, ದಾವಣಗೆರೆ, ಹಾಸನ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕಾರವಾರ, ಆಗುಂಬೆ, ಕೋಟ, ಶೃಂಗೇರಿ, ಕೊಲ್ಲೂರು, ಕುಂದಾಪುರ, ಅಂಕೋಲಾ, ಗೋಕರ್ಣ, ಸಿದ್ದಾಪುರ, ಕುಮಟಾ, ಜೋಯಿಡಾ, ಧರ್ಮಸ್ಥಳ, ಗೇರುಸೊಪ್ಪ, ಮಂಕಿ, ಕೊಪ್ಪ, ಜಯಪುರ, ಚಿಕ್ಕಮಗಳೂರು, ಕಮ್ಮರಡಿ, ಕ್ಯಾಸಲ್​ರಾಕ್, ಕದ್ರಾ, ಕೂಡಲಸಂಗಮ, ಬಾಳೆಹೊನ್ನೂರು, ಕೊಟ್ಟಿಗೆಹಾರ, ಲಿಂಗನಮಕ್ಕಿ, ಬನವಾಸಿ, ಶಿರಾಲಿ, ಬೆಳ್ತಂಗಡಿ, ಆಲಮಟ್ಟಿ, ಲೋಂಡಾ, ಮುದ್ದೇಬಿಹಾಳ, ಹುಂಚದಕಟ್ಟೆ, ಕಾರ್ಕಳ, ಉಡುಪಿ, ಕಿರವತ್ತಿ, ಯಲ್ಲಾಪುರ, ಹಳಿಯಾಳ, ಮುಂಡಗೋಡ, ಲಕ್ಷ್ಮೇಶ್ವರ, ಚಿಕ್ಕೋಡಿ, ಸವಣೂರು, ಕಲಘಟಗಿ, ಹಾವೇರಿ, ಲಿಂಗಸುಗೂರು, ಹೆಸರಘಟ್ಟ, ಭಾಗಮಂಡಲದಲ್ಲಿ ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿಯಲ್ಲಿ ಕೂಡ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಜುಲೈ 13ರಿಂದ ಕರ್ನಾಟಕದ ಕರಾವಳಿ ಸೇರಿ 13 ಜಿಲ್ಲೆಗಳಲ್ಲಿ ಮತ್ತಷ್ಟು ಹೆಚ್ಚಲಿದೆ ಮಳೆಯ ಅಬ್ಬರ

ಹೊನ್ನಾವರದಲ್ಲಿ 27.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 26.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ