ಪಡಿತರ ಚೀಟಿ ರದ್ದು ವಿಚಾರ: ಒಂದೇ ಒಂದು ಎಪಿಎಲ್​ ಕಾರ್ಡ್ ರದ್ದಾಗಿಲ್ಲ, ಸಚಿವ ಮುನಿಯಪ್ಪ

ಮಂಗಳೂರಿನಲ್ಲಿ ಮಾತನಾಡಿದ ಸಚಿವ ಕೆ.ಎಚ್. ಮುನಿಯಪ್ಪ, ಬಿಪಿಎಲ್ ಅಲ್ಲದವರನ್ನು ಎಪಿಎಲ್ ವರ್ಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಪಡಿತರ ವಿತರಣೆಗೆ ಹಣದ ಕೊರತೆ ಇಲ್ಲ. ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡುವಲ್ಲಿ ಯಾವುದೇ ತೊಂದರೆ ಇಲ್ಲ ಎಂದು ಎಪಿಎಲ್ ಕಾರ್ಡ್ ರದ್ದತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಪಡಿತರ ಚೀಟಿ ರದ್ದು ವಿಚಾರ: ಒಂದೇ ಒಂದು ಎಪಿಎಲ್​ ಕಾರ್ಡ್ ರದ್ದಾಗಿಲ್ಲ, ಸಚಿವ ಮುನಿಯಪ್ಪ
ಪಡಿತರ ಚೀಟಿ ರದ್ದು ವಿಚಾರ: ಒಂದೇ ಒಂದು ಎಪಿಎಲ್​ ಕಾರ್ಡ್ ರದ್ದಾಗಿಲ್ಲ, ಸಚಿವ ಮುನಿಯಪ್ಪ
Edited By:

Updated on: Nov 16, 2024 | 8:02 PM

ಮಂಗಳೂರು, ನವೆಂಬರ್​ 16: ಪರಿಷ್ಕರಣೆ ಮಾಡಿದಾಗ ಬಿಪಿಎಲ್​ ಅಲ್ಲದೇ ಇರೋರನ್ನು ಎಪಿಎಲ್​  ಮಾಡಿದ್ದೇವೆ. ಎಪಿಎಲ್​ಗೆ ಹಾಕಿದವರನ್ನು ರದ್ದು ಮಾಡುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆಹೆಚ್​ ಮುನಿಯಪ್ಪ (KH Muniyappa) ಹೇಳಿದ್ದಾರೆ. ರಾಜ್ಯದಲ್ಲಿ 11 ಲಕ್ಷ ಪಡಿತರ ಚೀಟಿ ರದ್ದಾಗಿದೆ ಎಂಬ ಬಿಜೆಪಿ ಶಾಸಕ ಸುನೀಲ್ ಕುಮಾರ್ ಹೇಳಿಕೆ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಪಡಿತರ ನೀಡುವುದಕ್ಕೆ ಹಣದ ಕೊರತೆ ಇಲ್ಲ ಎಂದು ಹೇಳಿದ್ದಾರೆ.

ಎಪಿಎಲ್​ಗೆ ಸಬ್ಸಿಡಿ ಕೊಡುವುದನ್ನು ನಿಲ್ಲಿಸಿದ್ದೇವೆ

ಅರ್ಹರಿಗೆ ಬಿಪಿಎಲ್​ ಕಾರ್ಡ್​ ವಿತರಣೆಗೆ ಯಾವುದೇ ತೊಂದರೆ ಇಲ್ಲ. ಎಪಿಎಲ್​ನವರಿಗೆ ಸಬ್ಸಿಡಿ ರೇಟ್​ನಲ್ಲಿ ಕೊಡ್ತಿದ್ದೆವು, ಹೆಚ್ಚಿನವರು ತೆಗೆದುಕೊಳ್ಳುತ್ತಿರಲಿಲ್ಲ. ಹಾಗಾಗಿ ಸದ್ಯಕ್ಕೆ ಎಪಿಎಲ್​ಗೆ ಸಬ್ಸಿಡಿ ಕೊಡುವುದನ್ನು ನಿಲ್ಲಿಸಿದ್ದೇವೆ. ಪರಿಷ್ಕರಣೆ ಪೂರ್ತಿ ಆದ ಮೇಲೆ ಎಪಿಎಲ್​ನವರು ಬೇಕೆಂದು ಮುಂದೆ ಬಂದ್ದರೆ ಖಂಡಿತಾ ಕೊಡುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಸದ್ದಿಲ್ಲದೆ ರದ್ದಾಗುತ್ತಿವೆ ಪಡಿತರ ಚೀಟಿ: ಬಿಪಿಎಲ್​, ಎಪಿಎಲ್​ ಕಾರ್ಡ್​ದಾರರಿಗೆ ಬಿಗ್​ ಶಾಕ್​

ಒಂದೇ ಒಂದು ಎಪಿಎಲ್​ ಕಾರ್ಡ್ ರದ್ದು ಆಗಿಲ್ಲ. ದಕ್ಷಿಣ ಭಾರತದಲ್ಲಿ ಅತೀ ಹೆಚ್ಚು ಕರ್ನಾಟಕದಲ್ಲಿ ಕಾರ್ಡ್ ಇದೆ. 6.50 ಕೋಟಿ ಜನ ಇದ್ದರೂ 4.50 ಕೋಟಿ ಜನರಿಗೆ ಕಾರ್ಡ್ ಕೊಟ್ಟಿದ್ದೇವೆ. ಅರ್ಹರಲ್ಲದವರು ಜಾಸ್ತಿ ಜನ ಇದ್ದಾರೆ ಎಂಬ ಭಾವನೆ ಬಂದಿದೆ.

ಸುನೀಲ್ ಕುಮಾರ್​​ ನನ್ನ ಬಳಿ ಕೇಳಿದ್ರೆ ಹೇಳುತ್ತೇನೆ ಎಂದ ಮುನಿಯಪ್ಪ

ಪರಿಷ್ಕರಣೆಗೆ ನಿಯಾಮವಳಿ ಹಾಕಿಕೊಂಡಿದ್ದೇವೆ. ಈ ಹಿಂದಿನ ಸರ್ಕಾರವೇ ಈ ನಿಯಮ ಮಾಡಿದೆ. ಆದಾಯ ತೆರಿಗೆ ಕಟ್ಟುವವರಿಗೆ, ಕಾರು ಇರುವವರಿಗೆಲ್ಲಾ ಅವರನ್ನು ಎಪಿಎಲ್​ಗೆ ಹಾಕುತ್ತೇವೆ. ಅವರನ್ನು ತೆಗೆದು ಹಾಕಲ್ಲ. ಪರಿಷ್ಕರಣೆ ಮಾಡುವಾಗ ಅರ್ಹರಿಗೆ ಬಿಪಿಎಲ್​ ಕೊಡುತ್ತೇವೆ. ನಮ್ಮ ಬಳಿ ಇದಕ್ಕಾಗಿ 8000 ಸಾವಿರ ಕೋಟಿ ಹಣ ರೂ. ಇದೆ. ತಿಂಗಳಿಗೆ 650 ಕೋಟಿಯೇ ಖರ್ಚು ಆಗಲ್ಲ. ಕೊಡೋದಕ್ಕೆ ಯಾವುದೇ ತೊಂದರೆ ಇಲ್ಲ. ಸುನೀಲ್ ಕುಮಾರ್ ಅವರಿಗೆ ಮನವರಿಕೆ ಮಾಡುತ್ತೇವೆ. ನನ್ನ ಬಳಿ ಕೇಳಿದರೆ ಹೇಳುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Loading...
Unable to load recommendations.
Follow Us