ಮೇಕೆದಾಟು ಯೋಜನೆಯ ಜಾರಿಗೆ ಸ್ಟಾಲಿನ್‌ ಅನುಮತಿಗಾಗಿ ಕಾದು ಕುಳಿತಿಲ್ಲ: ಬಿಜೆಪಿಗೆ ಸಿಎಂ ಟಾಂಗ್​​

ಕದ್ದು ಮುಚ್ಚಿ ಕಾವೇರಿಯನ್ನು ತಮಿಳು ನಾಡಿಗೆ ಹರಿಸಿ ಕನ್ನಡಿಗರಿಗೆ ದ್ರೋಹ ಬಗೆಯುತ್ತಿರುವ ಸಿಎಸ್'ಕೈ' ಎಂಬು ಬಿಜೆಪಿ ಟ್ವೀಟ್​ಗೆ ಕಾವೇರಿ ನೀರು ಹಂಚಿಕೆಯಲ್ಲಿ ನಾಡಿಗೆ ಅನ್ಯಾಯ ಆಗುತ್ತಿದ್ದಾಗ ಹಲವು ಬಾರಿ ಮನವಿ ಮಾಡಿದರೂ ಮಧ್ಯಪ್ರವೇಶಿಸದೆ ಕನ್ನಡಿಗರನ್ನು ಸಂಕಷ್ಟಕ್ಕೆ ತಳ್ಳಿದವರು ನಿಮ್ಮದೇ ಪ್ರಧಾನಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮೇಕೆದಾಟು ಯೋಜನೆಯ ಜಾರಿಗೆ ಸ್ಟಾಲಿನ್‌ ಅನುಮತಿಗಾಗಿ ಕಾದು ಕುಳಿತಿಲ್ಲ: ಬಿಜೆಪಿಗೆ ಸಿಎಂ ಟಾಂಗ್​​
ಸಿಎಂ ಸಿದ್ದರಾಮಯ್ಯ
Edited By:

Updated on: Mar 22, 2024 | 10:21 PM

ಬೆಂಗಳೂರು, ಮಾರ್ಚ್​ 22: ಕಾವೇರಿ ನೀರು ಹಂಚಿಕೆಯಲ್ಲಿ ನಾಡಿಗೆ ಅನ್ಯಾಯ ಆಗುತ್ತಿದ್ದಾಗ ಹಲವು ಬಾರಿ ಮನವಿ ಮಾಡಿದರೂ ಮಧ್ಯಪ್ರವೇಶಿಸದೆ ಕನ್ನಡಿಗರನ್ನು ಸಂಕಷ್ಟಕ್ಕೆ ತಳ್ಳಿದವರು ನಿಮ್ಮದೇ ಪ್ರಧಾನಿಗಳು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಿಪಕ್ಷ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಬಿಜೆಪಿ ಟ್ವೀಟ್ ವಿಚಾರವಾಗಿ ತಿರುಗೇಟು ನೀಡಿದ್ದು, ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದಾಗ ನಮ್ಮ ಮೇಲೆ ಮೊಕದ್ದಮೆ ದಾಖಲಿಸಿದವರು ನೀವೇ ಎಂದು ಹೇಳಿದ್ದಾರೆ.

ನಿಮ್ಮದೇ ಪಕ್ಷದ ರಾಜ್ಯಾಧ್ಯಕ್ಷ ತಮಿಳುನಾಡಿನಲ್ಲಿ ಕಾವೇರಿ ನೀರಿಗಾಗಿ ಹೋರಾಟ ನಡೆಸುತ್ತಾರೆ, ಮೇಕೆದಾಟು ಯೋಜನೆ ವಿರುದ್ಧ ಉಪವಾಸ ಸತ್ಯಾಗ್ರಹ ಕೂರುತ್ತಾರೆ. ಮೇಕೆದಾಟು ಯೋಜನೆಯ ಜಾರಿಗೆ ನಾವು ಎಂ.ಕೆ ಸ್ಟಾಲಿನ್‌ ಅವರ ಅನುಮತಿಗಾಗಿ ಕಾದು ಕುಳಿತಿಲ್ಲ, ನಮಗೆ ಅನುಮತಿ ಬೇಕಿರುವುದು ಕೇಂದ್ರ ಸರ್ಕಾರದ್ದು.

ಇದನ್ನೂ ಓದಿ: ಕಾವೇರಿ ಐದನೇ ಹಂತದ ಯೋಜನೆ: ಬೆಂಗಳೂರು ನೀರಿನ ಬಿಕ್ಕಟ್ಟು ಪರಿಹರಿಸುವ ಯೋಜನೆ ಬಗ್ಗೆ ತಿಳಿಯಬೇಕಾದ ವಿಚಾರಗಳಿವು

ನಿಮ್ಮದೇ ಪಕ್ಷದ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ನಾಳೆಯಿಂದಲೇ ಅಣೆಕಟ್ಟು ಕೆಲಸ ಆರಂಭ ಮಾಡಲು ನಾವು ತಯಾರಿದ್ದೇವೆ. ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ಸುಳ್ಳು ಸುದ್ದಿಯ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುವುದನ್ನು ನಿಲ್ಲಿಸಿ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಇಂಡಿಯಾ ಕೂಟ ಗೆದ್ರೆ ಮೇಕೆದಾಟು ಬಂದ್‌ ಎಂದ ಡಿಎಂಕೆ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ

ರಾಜ್ಯ ಬಿಜೆಪಿ ನನ್ನ ಭಾವಚಿತ್ರಕ್ಕೆ ಹಳದಿ ಬಣ್ಣದ ಜೆರ್ಸಿ ಹಾಕಿ ನನ್ನ ಬದ್ಧತೆಯನ್ನು ಅವಮಾನಿಸಬೇಡಿ,
“ನಾನು ಬದುಕಿರುವವರೆಗೆ ಕನ್ನಡಿಗನೆ, ಆರ್.ಸಿ.ಬಿಯ ಹೆಮ್ಮೆಯ ಅಭಿಮಾನಿಯೇ” ಎಂದು ತಿರುಗೇಟು ನೀಡಲಾಗಿದೆ.

ಈ ವಿಚಾರವಾಗಿ ಬಿಜೆಪಿ ಕದ್ದು ಮುಚ್ಚಿ ಕಾವೇರಿಯನ್ನು ತಮಿಳು ನಾಡಿಗೆ ಹರಿಸಿ ಕನ್ನಡಿಗರಿಗೆ ದ್ರೋಹ ಬಗೆಯುತ್ತಿರುವ ಸಿಎಸ್’ಕೈ’ ಎಂದು ಟ್ವೀಟ್​ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More
Loading...
Unable to load recommendations.
Follow Us