ಸರ್ಕಾರಿ ಗೌರವಗಳೊಂದಿಗೆ ವಿದ್ಯಾವಾಚಸ್ಪತಿ, ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯ ಅಂತ್ಯಕ್ರಿಯೆ

ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ(85) ವಿಧಿವಶರಾಗಿದ್ದಾರೆ. ನಗರದ ಅಂಬಲಪಾಡಿ ತಮ್ಮ ನಿವಾಸದಲ್ಲಿ ಪದ್ಮಶ್ರೀ ಪುರಸ್ಕೃತ ಪ್ರವಚನಕಾರ ಗೋವಿಂದಾಚಾರ್ಯ ಕೊನೆಯುಸಿರೆಳೆದಿದ್ದಾರೆ.

ಸರ್ಕಾರಿ ಗೌರವಗಳೊಂದಿಗೆ  ವಿದ್ಯಾವಾಚಸ್ಪತಿ, ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯ ಅಂತ್ಯಕ್ರಿಯೆ
ಬನ್ನಂಜೆ ಗೋವಿಂದಾಚಾರ್ಯ
Follow us
KUSHAL V
| Updated By: ರಾಜೇಶ್ ದುಗ್ಗುಮನೆ

Updated on:Dec 13, 2020 | 10:41 PM

ಉಡುಪಿ: ಇಂದು ವಿಧಿವಶರಾದ ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ (85) ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಭಾನುವಾರ ರಾತ್ರಿ ಅಂಬಲಪಾಡಿಯ ಮನೆಯ ಆವರಣದಲ್ಲಿ ನೆರವೇರಿಸಲಾಯಿತು.

ಅಂಬಲಪಾಡಿಯಲ್ಲಿ ಭಾನುವಾರ ರಾತ್ರಿ ಅಂತ್ಯ ಸಂಸ್ಕಾರ ನೆರವೇರಿತು. ಈ ವೇಳೆ ಪೊಲೀಸರು ಮೂರು ಬಾರಿ ಕುಶಾಲುತೋಪು ಸಿಡಿಸಿ ಗೌರವ ಸೂಚಿಸಿದರು. ಹಿರಿಯ ಪುತ್ರ ವಿನಯಭೂಷಣ ಅಂತ್ಯ ಸಂಸ್ಕಾರದ ಕ್ರಿಯೆಗಳನ್ನು ನೆರವೇರಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟಿಲ್​ ಸೇರಿ ಅನೇಕರು ಅಂತ್ಯ ಸಂಸ್ಕಾರ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಉಡುಪಿಯ ಅಂಬಲಪಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ಪದ್ಮಶ್ರೀ ಪುರಸ್ಕೃತ ಪ್ರವಚನಕಾರ ಗೋವಿಂದಾಚಾರ್ಯರು ಕೊನೆಯುಸಿರೆಳೆದಿದ್ದಾರೆ. ಗೋವಿಂದಾಚಾರ್ಯರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಗೋವಿಂದಾಚಾರ್ಯ ಪ್ರವಚನಕಾರ ಹಾಗೂ ಮಧ್ವ ಸಿದ್ಧಾಂತದ ಪ್ರತಿಪಾದಕರಾಗಿದ್ದರು. ಜೊತೆಗೆ, ಪತ್ರಕರ್ತರಾಗಿ ಅನೇಕ ಅಂಕಣಗಳನ್ನು ಸಹ ಬರೆದಿದ್ದರು. ಬನ್ನಂಜೆ ಗೋವಿಂದಾಚಾರ್ಯರು ನಟ ಡಾ.ವಿಷ್ಣುವರ್ಧನ್​ರಿಗೆ ಆಧ್ಯಾತ್ಮಿಕ ಗುರುಗಳಾಗಿದ್ದರು.

ಗೋವಿಂದಾಚಾರ್ಯರು ಹಲವಾರು ಕೃತಿಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ತರ್ಜುಮೆ ಮಾಡಿದ್ದರು. ಕೇವಲ ಸಾಹಿತ್ಯ ಲೋಕಕ್ಕೆ ಸೀಮಿತವಾಗದೆ ಮೂರು ಚಲನಚಿತ್ರಗಳಿಗೆ ಸಂಭಾಷಣೆ ಸಹ ಬರೆದಿದ್ದರು. ಮಧ್ವಾಚಾರ್ಯ, ಶಂಕರಾಚಾರ್ಯ ಹಾಗೂ ರಾಮಾನುಜಾಚಾರ್ಯ ಚಿತ್ರಗಳಿಗೆ ಸಂಭಾಷಣೆ ಬರೆದಿದ್ದರು. ಹಲವು ಚಾರಿತ್ರಿಕ ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದ ಗೋವಿಂದಾಚಾರ್ಯರು ಉಪನಿಷತ್ತಿನ ಅಧ್ಯಾಯಗಳಿಗೆ ಟಿಪ್ಪಣಿ ಸಹ ಬರೆದಿದ್ದರು.

ಮಗನ ಸಂಪಿಡೀಕರಣದ (ಉತ್ತರ ಕ್ರಿಯೆ) ದಿನವೇ ಬನ್ನಂಜೆ ನಿಧನ ಮಗನ ಸಂಪಿಡೀಕರಣದ (ಉತ್ತರ ಕ್ರಿಯೆ) ದಿನವೇ ಬನ್ನಂಜೆ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಬನ್ನಂಜೆ ಗೋವಿಂದಾಚಾರ್ಯರ ಪುತ್ರ ವಿಜಯ ಭೂಷಣ ಆಚಾರ್ಯ (56) ಡಿ.2 ರಂದು ನಿಧನರಾಗಿದ್ದರು.

ಪುತ್ರನ ಉತ್ತರಕ್ರಿಯೆ ಇಂದು ಪೂರ್ಣಗೊಂಡಿತ್ತು. ಆದರೆ, ಸಂಪಿಡೀಕರಣದ ಮರುಗಳಿಗೆಯೇ ಗೋವಿಂದಾಚರ್ಯ ವಿಧಿವಶರಾಗಿದ್ದಾರೆ. ಖ್ಯಾತ ಪ್ರವಚನಕಾರ ಗೋವಿಂದಾಚಾರ್ಯ ಅಂತಿಮ ದರ್ಶನಕ್ಕೆ ಗಣ್ಯರ ದಂಡು ಹರಿದುಬಂತು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಪ್ರಮೋಧ್ ಮಧ್ವರಾಜ್, ಶಾಸಕ ರಘುಪತಿ ಭಟ್ ಅಂತಿಮ ದರ್ಶನ ಪಡೆದರು.

ಬನ್ನಂಜೆ ಗೋವಿಂದಾಚಾರ್ಯರ ನೆನಪು | ಸಂಪ್ರದಾಯ-ಆಧುನಿಕತೆಯನ್ನು ಸಮನ್ವಯಿಸಿ ನೋಡಿದ ಘನ ವಿದ್ವಾಂಸ: ಮಲ್ಲೇಪುರಂ ಜಿ.ವೆಂಕಟೇಶ್

ಸೃಷ್ಟಿಶೀಲ, ಸೃಜನಶೀಲ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ: ಲಕ್ಷ್ಮೀಶ ತೋಳ್ಪಾಡಿ

ಒಡನಾಡಿಯ ನೆನಪು | ಗೀತಾ ಭಾಷ್ಯ ಮುಗಿಸಿಯೇ ‘ಹೋಗಬೇಕು’ ಅಂದುಕೊಂಡಿದ್ದರು ಬನ್ನಂಜೆ ಗೋವಿಂದಾಚಾರ್ಯ

ಅಸಾಮಾನ್ಯ ಪಾಂಡಿತ್ಯದ ಖನಿ ಬನ್ನಂಜೆ ಗೋವಿಂದಾಚಾರ್ಯ

Published On - 12:17 pm, Sun, 13 December 20

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ