ಪಕ್ಷಕ್ಕಾಗಿ ಬಹಳ ದುಡಿದಿರುವ ಈಶ್ವರಪ್ಪ ಮಗನಿಗಾಗಿ ಟಿಕೆಟ್ ಕೇಳಿದ್ದರಲ್ಲಿ ತಪ್ಪೇನೂ ಇಲ್ಲ: ಅರ್ ಅಶೋಕ, ಹಿರಿಯ ಬಿಜೆಪಿ ನಾಯಕ

Updated on: Mar 16, 2024 | 2:51 PM

ಅವರು ಮಗನಿಗೆ ಟಿಕೆಟ್ ಕೇಳಿರುವುದರಲ್ಲಿ ತಪ್ಪೇನೂ ಇಲ್ಲ, ಯಾಕೆಂದರೆ ಪಕ್ಷದ ಸಂಘಟನೆಯಲ್ಲಿ ಅವರು ನಿರ್ವಹಿಸಿರುವ ಪಾತ್ರ ದೊಡ್ಡದು ಎಂದು ಅಶೋಕ ಹೇಳಿದರು. ಈಶ್ವರಪ್ಪ ಮಗ ಕಾಂತೇಶ್ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಲು ತಾನು ಪ್ರಯತ್ನಿಸುತ್ತೇನೆ ಮತ್ತು ಈ ವಿಷಯದಲ್ಲಿ ಕೇಂದ್ರೀಯ ನಾಯಕರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಅಶೋಕ ಹೇಳಿದರು.

ಕಲಬುರಗಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೇರೆ ಬೇರೆ ಕ್ಷೇತ್ರಗಳಿಂದ ಬಿಜೆಪಿ ಅಬ್ಯರ್ಥಿಗಳ ಹೆಸರು ಘೋಷಣೆಯಾಗಿರುವುದು ಸತ್ಯ ಆದರೆ, ಪಕ್ಷದ ನಿಜವಾದ ಉಮೇದುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi), ಪೋಲಿಂಗ್ ಬೂತ್ ಗೆ (polling booth) ಹೋಗುವ ಮತದಾರ ತನ್ನ ಹಕ್ಕನ್ನು ಚಲಾಯಿಸುವಾಗ ಬಿಜೆಪಿ ಅಭ್ಯರ್ಥಿಯ ಹೆಸರು ನೋಡದೆ ಮೋದಿಯವರ ಹೆಸರು ನೆನಪಿಸಿಕೊಂಡು ವೋಟು ಮಾಡಲಿದ್ದಾನೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ಹೇಳಿದರು. ನಗರದ ವಿಮಾನ ನಿಲ್ದಾಣ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಪಕ್ಷಕ್ಕಾಗಿ ದಶಕಗಳಿಂದ ದುಡಿದಿರುವ ಕೆಎಸ್ ಈಶ್ವರಪ್ಪನವರಿಗೆ ನಿರಾಶೆಯಾಗಿರುವುದು ಸ್ವಾಭಾವಿಕ, ಅವರು ಮಗನಿಗೆ ಟಿಕೆಟ್ ಕೇಳಿರುವುದರಲ್ಲಿ ತಪ್ಪೇನೂ ಇಲ್ಲ, ಯಾಕೆಂದರೆ ಪಕ್ಷದ ಸಂಘಟನೆಯಲ್ಲಿ ಅವರು ನಿರ್ವಹಿಸಿರುವ ಪಾತ್ರ ದೊಡ್ಡದು ಎಂದು ಅಶೋಕ ಹೇಳಿದರು. ಈಶ್ವರಪ್ಪ ಮಗ ಕಾಂತೇಶ್ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಲು ತಾನು ಪ್ರಯತ್ನಿಸುತ್ತೇನೆ ಮತ್ತು ಈ ವಿಷಯದಲ್ಲಿ ಕೇಂದ್ರೀಯ ನಾಯಕರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಅಶೋಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ: ಆರ್ ಅಶೋಕ ವಾಗ್ದಾಳಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More