AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರ ಮನೆಗೆ ಹೋಗಿ ಲಸಿಕೆ ನೀಡುವುದಕ್ಕೆ ಕಾರಣವೇನು? ಜಿಲ್ಲಾ ಆರ್‌ಸಿಹೆಚ್ ಡಾ.ಜಯಾನಂದ್‌ಗೆ ಷೋಕಾಸ್ ನೋಟಿಸ್

ಕೊರೊನಾ ಲಸಿಕೆ ಕೇವಲ ಆಸ್ಪತ್ರೆಗಳಲ್ಲಿ ಮಾತ್ರ ನೀಡಬೇಕು ಎಂದು ಸ್ಪಷ್ಟನೆ ನೀಡಿದ್ದರು. ಸದ್ಯ ಸಚಿವ ಬಿ.ಸಿ.ಪಾಟೀಲ್ ಮನೆಯಲ್ಲೇ ಲಸಿಕೆ ಪಡೆದ ವಿಚಾರಕ್ಕೆ ಸಂಬಂಧಿಸಿ ಜಿಲ್ಲಾ ಆರ್‌ಸಿಹೆಚ್(RCH) ಡಾ.ಜಯಾನಂದ್‌ಗೆ ನೋಟಿಸ್ ಜಾರಿಯಾಗಿದೆ.

ಸಚಿವರ ಮನೆಗೆ ಹೋಗಿ ಲಸಿಕೆ ನೀಡುವುದಕ್ಕೆ ಕಾರಣವೇನು? ಜಿಲ್ಲಾ ಆರ್‌ಸಿಹೆಚ್ ಡಾ.ಜಯಾನಂದ್‌ಗೆ ಷೋಕಾಸ್ ನೋಟಿಸ್
ಆರೋಗ್ಯ ಸಿಬ್ಬಂದಿಯನ್ನು ಮನೆಗೆ ಕರೆಸಿ ಲಸಿಕೆ ಪಡೆದ ಬಿ.ಸಿ. ಪಾಟೀಲ್.
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Mar 03, 2021 | 11:06 AM

ಬೆಂಗಳೂರು: ಮಾರ್ಚ್ 03ರಂದು ಬಿ.ಸಿ. ಪಾಟೀಲ್ ಆರೋಗ್ಯ ಸಿಬ್ಬಂದಿಯನ್ನು ತಮ್ಮ ಮನೆಗೆ ಕರೆಸಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು. ಸಚಿವರ ಈ ನಡೆಗೆ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಬಳಿಕ ಸಂಜೆ ವೇಳೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾತನಾಡಿ ಕೊರೊನಾ ಮಾರ್ಗಸೂಜಿ ಪ್ರಕಾರ ಯಾವುದೇ ವ್ಯಕ್ತಿಯ ಮನೆಗಳಿಗೆ ಹೋಗಿ ಲಸಿಕೆ ಹಾಕುವಂತಿಲ್ಲ. ಕೊರೊನಾ ಲಸಿಕೆ ಕೇವಲ ಆಸ್ಪತ್ರೆಗಳಲ್ಲಿ ಮಾತ್ರ ನೀಡಬೇಕು ಎಂದು ಸ್ಪಷ್ಟನೆ ನೀಡಿದ್ದರು. ಸದ್ಯ ಸಚಿವ ಬಿ.ಸಿ.ಪಾಟೀಲ್ ಅವರು ಹಾವೇರಿಯಲ್ಲಿರುವ ತಮ್ಮ ಮನೆಯಲ್ಲೇ ಲಸಿಕೆ ಪಡೆದ ವಿಚಾರಕ್ಕೆ ಸಂಬಂಧಿಸಿ ಜಿಲ್ಲಾ ಆರ್‌ಸಿಹೆಚ್(RCH) ಡಾ.ಜಯಾನಂದ್‌ಗೆ ನೋಟಿಸ್ ಜಾರಿಯಾಗಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್‌ ನೋಟಿಸ್ ಜಾರಿ ಮಾಡಿದ್ದಾರೆ. ಕೊವಿಡ್ ಲಸಿಕೆ ಕೇವಲ ಆರೋಗ್ಯ ಸಂಸ್ಥೆಗಳಲ್ಲಿ ನೀಡಬೇಕು. ಈ ಬಗ್ಗೆ ಹಲವು ಸಭೆಗಳಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಆದರೂ ಮನೆಗೆ ಹೋಗಿ ಲಸಿಕೆ ನೀಡುವುದಕ್ಕೆ ಕಾರಣವೇನು? ಈ‌ ಘಟನೆ ಇಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಘನತೆಗೆ ಕುಂದು ತಂದಿದೆ. ಇದು ಅಧಿಕಾರಿಗಳ ನಿರ್ಲಕ್ಷ್ಯತನವಾಗಿದ್ದು ಆಕ್ಷೇಪಾರ್ಹ. ಈ ಲೋಪಕ್ಕೆ ಕಾರಣ ನೀಡುವಂತೆ ಡಾ.ಜಯಾನಂದ್‌ಗೆ ಅರುಂಧತಿ ಚಂದ್ರಶೇಖರ್‌ ನೋಟಿಸ್ ಜಾರಿ ಮಾಡಿದ್ದಾರೆ. ಇನ್ನು ತಪ್ಪಾಗಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ನೋಟಿಸ್​ನಲ್ಲಿ ಎಚ್ಚರಿಕೆ ಕೊಟ್ಟಿದ್ದಾರೆ.

ದೇಶಾದ್ಯಂತ ಆರಂಭವಾದ ಮತ್ತೊಂದು ಹಂತದ ವ್ಯಾಕ್ಸಿನೇಷನ್​ನ ಮೊದಲ ದಿನವಾದ ಮಾರ್ಚ್.01ರಂದು ಸ್ವತ: ಪ್ರಧಾನಿ ಮೋದಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಹೋಗಿ ಕೊರೊನಾ ಲಸಿಕೆ ಪಡೆಯೋ ಮೂಲಕ 130 ಕೋಟಿ ಜನರಿಗೆ ಲಸಿಕೆ ಪಡೆಯಲು ಪ್ರೇರೇಪಿಸಿದ್ದರು. ಆಸ್ಪತ್ರೆ ಬರುವ ಜನರಿಗೆ ಅಡಚಣೆ ಆಗಬಾರದೆಂದು ಮೋದಿ ಬೆಳಗ್ಗೆಯೇ ಆಸ್ಪತ್ರೆಗೆ ಭೇಟಿ ನೀಡಿ ಲಸಿಕೆ ಪಡೆದಿದ್ದರು. ಆದ್ರೆ ರಾಜ್ಯದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹಾಗೂ ಕುಟುಂಬ ಸಹ ಲಸಿಕೆ ಹಾಕಿಸಿಕೊಂಡಿದ್ದು ಸಚಿವರ ದೌಲತ್ತಿಗೆ ಆಕ್ರೋಶ ವ್ಯಕ್ತವಾಗಿತ್ತು. ಮಾರ್ಚ್ 02ರಂದು ಬಿ.ಸಿ. ಪಾಟೀಲ್ ಆಸ್ಪತ್ರೆಗೆ ಹೋಗದೆ ಹಾವೇರಿ ಜಿಲ್ಲೆ ಹಿರೇಕೆರೂರಿನ ತಮ್ಮ ನಿವಾಸಕ್ಕೆ ಆರೋಗ್ಯ ಸಿಬ್ಬಂದಿಯನ್ನು ಕರೆಸಿ ಮನೆಯಲ್ಲೇ ಲಸಿಕೆ ಪಡೆದಿದ್ದರು.

ಸಚಿವರ ಈ ನಡೆ ಅಸಮಾಧಾನ ಉಂಟು ಮಾಡಿತ್ತು. ಎಲ್ಲಾರಿಗೂ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಪಡೆಯಲು ಸೂಚನೆ ನೀಡಲಾಗಿದೆ. ಆದ್ರೆ ಸಚಿವ ಬಿ.ಸಿ.ಪಾಟೀಲ್ ತಮ್ಮದೇ ನಿಯಮವನ್ನು ರೂಪಿಸಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದೇ ವಿಚಾರಕ್ಕೆ ಸಂಬಂಧಿಸಿ ಇಂದು ಜಿಲ್ಲಾ ಆರ್‌ಸಿಹೆಚ್ ಡಾ.ಜಯಾನಂದ್‌ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್‌ ನೋಟಿಸ್ ಜಾರಿ ಮಾಡಿದ್ದಾರೆ.

BC patil wife

ಮನೆಯಲ್ಲೇ ಲಸಿಕೆ ಪಡೆದ ವನಜಾ ಪಾಟೀಲ್

ಇದನ್ನೂ ಓದಿ: ಮನೆಗೇ ಬಂದು ಲಸಿಕೆ ಹಾಕಿದ ಆರೋಗ್ಯ ಸಿಬ್ಬಂದಿ.. ಸಚಿವ ಬಿ.ಸಿ. ಪಾಟೀಲ್​ರಿಂದ ಇದೆಂಥಾ ದರ್ಬಾರ್..?

ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​