ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರ ಡ್ರೈವಿಂಗ್ ಲೈಸೆನ್ಸ್ ಅಮಾನತಿಗೆ ಸೂಚನೆ
ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಂಚಾರಿ ಪೊಲೀಸರು ವಾಹನ ಸವಾರರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ದಂಡ ವಿಧಿಸುವ ಕ್ರಮವನ್ನೂ ಕೈಗೊಳ್ಳುತ್ತಿದ್ದಾರೆ. ಹೀಗಿದ್ದರೂ ಒಂದಷ್ಟು ವಾಹನ ಸವಾರರು ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರುವುದು ಕಂಡುಬಂದಿದೆ. ಇಂತಹವರ ವಿರುದ್ಧ ಕ್ರಮಕ್ಕೆ ಮುಂದಾದ ಸಂಚಾರಿ ಪೊಲೀಸರು, ಡಿಎಲ್ ಅಮಾನತಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು, ಜ.9: ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರು ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ (Driving License) ಅಮಾನತು ಮಾಡುವಂತೆ ಎಲ್ಲಾ ಟ್ರಾಫಿಕ್ ಪೊಲೀಸ್ (Traffic Police) ಇಲಾಖೆ ಜಿಲ್ಲಾ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಂಚಾರಿ ಪೊಲೀಸರು ವಾಹನ ಸವಾರರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ದಂಡ ವಿಧಿಸುವ ಕ್ರಮವನ್ನೂ ಕೈಗೊಳ್ಳುತ್ತಿದ್ದಾರೆ. ಹೀಗಿದ್ದರೂ ಒಂದಷ್ಟು ವಾಹನ ಸವಾರರು ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರುವುದು ಕಂಡುಬಂದಿದೆ.
ಇಂತಹವರ ವಿರುದ್ಧ ಕ್ರಮಕ್ಕೆ ಮುಂದಾದ ಸಂಚಾರಿ ಪೊಲೀಸರು, ಡಿಎಲ್ ಅಮಾನತು ಮಾಡಲು ನಿರ್ಧರಿಸಿದ್ದಾರೆ. 2974 ಡ್ರೈವಿಂಗ್ ಲೈಸೆನ್ಸ್ ಅಮಾನತಿಗೆ ಸಂಚಾರಿ ಪೊಲೀಸರು ಬೇರೆಬೇರೆ ರಾಜ್ಯ ಮತ್ತು ರಾಜ್ಯದ ಜಿಲ್ಲಾ ಸಾರಿಗೆ ಕಚೇರಿಗೆ ಕಳುಹಿಸಲಾಗಿದ್ದು, ಈ ಪೈಕಿ 711 ಜನರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡಲಾಗಿದೆ. ಉಳಿದ 2263 ಮಂದಿಯ ಡ್ರೈವಿಂಗ್ ಲೈಸೆನ್ಸ್ ಅಮಾನತ್ತುಗೊಳಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ.
ಇದನ್ನೂ ಓದಿ: 255 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿದ್ದ ಸ್ಕೂಟರ್ ಮಾಲೀಕ ಕೊನೆಗೂ ಸಿಕ್ಕಿಬಿದ್ದಾಗ!
ಟ್ರಾಫಿಕ್ ನಿಯಮ ಉಲ್ಲಂಘಟನೆ ಮಾಡಿ ಸಂಚರಿಸುವುದರಿಂದ ಅಪಘಾತದಂತಹ ಅವಘಡಗಳು ಸಂಭವಿಸುತ್ತಿದ್ದು, ಅನೇಕರು ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರಿಗೆ ಗಾಯಗಳಾಗಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಹೀಗಾಗಿ ಟ್ರಾಫಿಕ್ ನಿಯಮ ಪಾಲಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರುವವರಿಂದ ದಂಡ ವಸೂಲಿ ಕೂಡ ಮಾಡಲಾಗುತ್ತಿದೆ. ಬೆಂಗಳೂರು ನಗರದಲ್ಲಂತೂ ರೂಲ್ಸ್ ಬ್ರೇಕ್ ಪ್ರಕರಣಗಳು ಬಹಳಷ್ಟು ಆಗುತ್ತಿವೆ. ಇದೇ ಕಾರಣಕ್ಕೆ ಪೊಲೀಸರು ಮಾತ್ರವಲ್ಲದೆ, ಕೆಲವು ಕಾಲೇಜು ವಿದ್ಯಾರ್ಥಿಗಳು ಬೆಂಗಳೂರಿನ ಸಿಗ್ನಲ್ಗಳಲ್ಲಿ ಟ್ರಾಫಿಕ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇತ್ತೀಚೆಗೆ ಸಾಮಾಜಿಕ ಕಾರ್ಯಕರ್ತರೊಬ್ಬರು ರಾಂಗ್ ರೂಟ್ನಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ವಡೆ ಕೊಟ್ಟು “ನೀವು ರಾಂಗ್ ರೂಟ್ನಲ್ಲಿ ಬಂದರೆ ನಿಮ್ಮ ಮನೆಯವರು ತಿಥಿ ವಡೆ ತಿನ್ನಬೇಕಾಗುತ್ತದೆ” ಎಂದು ಹೇಳಿ ಟ್ರಾಫಿಕ್ ನಿಯಮ ಪಾಲಿಸುವಂತೆ ಮನವಿ ಮಾಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ