AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಸಮಸ್ಯೆಯೇ? ಇನ್ಮುಂದೆ ಸೋಶಿಯಲ್ ಮೀಡಿಯಾ ಮೂಲಕ ದೂರು ಸಲ್ಲಿಸಿ; ಹೇಗೆ ಗೊತ್ತಾ?

ಬೆಸ್ಕಾಂ ಗ್ರಾಹಕರು ಇದೀಗ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ 1912 ಸಹಾಯವಾಣಿಯ ಜೊತೆಗೆ ವಾಟ್ಸ್‌ಆ್ಯಪ್, ಫೇಸ್‌ಬುಕ್ ಮತ್ತು ಎಕ್ಸ್ (ಟ್ವಿಟರ್) ಮೂಲಕ ದೂರು ಸಲ್ಲಿಸಬಹುದು. ಈ ಬಗ್ಗೆ ಖದ್ದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಸೋಶಿಯಲ್ ಮೀಡಿಯಾದಲ್ಲಿ ಅಥವಾ ವಾಟ್ಸ್‌ಆ್ಯಪ್​​ನಲ್ಲಿ ದೂರು ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

ವಿದ್ಯುತ್ ಸಮಸ್ಯೆಯೇ? ಇನ್ಮುಂದೆ ಸೋಶಿಯಲ್ ಮೀಡಿಯಾ ಮೂಲಕ ದೂರು ಸಲ್ಲಿಸಿ; ಹೇಗೆ ಗೊತ್ತಾ?
ಬೆಸ್ಕಾಂImage Credit source: x.com/NammaBESCOM
ಗಂಗಾಧರ​ ಬ. ಸಾಬೋಜಿ
|

Updated on:May 08, 2026 | 8:47 PM

Share

ಬೆಂಗಳೂರು, ಮೇ 08: ಯಾವುದೇ ರೀತಿಯ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಕೂಡಲೇ ಬೆಸ್ಕಾಂ 24×7 ಸಹಾಯವಾಣಿ 1912ಕ್ಕೆ ಕರೆ ಮಾಡುತ್ತೇವೆ. ಸಂಪರ್ಕ ಸಾಧ್ಯವಾಗದಿದ್ದರೆ ಹೇಗೆ ಎಂಬ  ಚಿಂತೆ ಎದುರಾಗಿತ್ತು. ಆದರೆ ಇದೀಗ ವಾಟ್ಸ್‌ಆ್ಯಪ್‌, ಫೇಸ್‌ಬುಕ್ ಅಥವಾ ಎಕ್ಸ್ (ಟ್ವಿಟರ್) ಖಾತೆ ಮೂಲಕ ದೂರು ಸಲ್ಲಿಸಬಹುದಾಗಿದೆ. ಆ ಮೂಲಕ ಯಾವುದೇ ಸಮಸ್ಯೆಗಳಿದ್ದರೂ ಸೋಶಿಯಲ್ ಮೀಡಿಯಾ (Social media) ಮೂಲಕ ದೂರು ನೀಡುವಂತೆ ಬೆಸ್ಕಾಂ (BESCOM) ಗ್ರಾಹಕರಿಗೆ ಮನವಿ ಮಾಡಿದೆ.

ಮುಖ್ಯಾಂಶಗಳು

  • ಸೋಶಿಯಲ್ ಮೀಡಿಯಾ ಮೂಲಕವೂ ಬೆಸ್ಕಾಂಗೆ ದೂರು ಸಲ್ಲಿಸಬಹುದು.
  • ಪ್ರತಿ ಜಿಲ್ಲೆಗಳಿಗೆ ವಿಶೇಷ ವಾಟ್ಸ್‌ಆ್ಯಪ್‌ ಸಹಾಯವಾಣಿ ಲಭ್ಯ.
  • ಗ್ರಾಹಕರ ನೆರವಿಗೆ ಸನ್ನದ್ಧವಾದ ಬೆಸ್ಕಾಂ.

ದೂರು ನೀಡುವುದೇಗೆ?

ದೂರು ನೀಡುವಾಗ ಗ್ರಾಹಕರು ತಮ್ಮ ಐಡಿ, ನಿಖರವಾದ ವಿಳಾಸ ಮತ್ತು ಸಮಸ್ಯೆಯ ಸಂಕ್ಷಿಪ್ತ ಮಾಹಿತಿಯನ್ನು ಒದಗಿಸಬೇಕು. ಬೆಸ್ಕಾಂ ವ್ಯಾಪ್ತಿಯ ಪ್ರತಿ ಜಿಲ್ಲೆಗಳಿಗೂ ವಿಶೇಷ ವಾಟ್ಸ್‌ಆ್ಯಪ್‌ ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ. ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ, ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸ್‌ಆ್ಯಪ್‌ ಸಹಾಯವಾಣಿ ಸಂಖ್ಯೆಗೆ ಕಳುಹಿಸುವ ಮೂಲಕ ತ್ವರಿತ ಪರಿಹಾರ ಪಡೆಯಬಹುದಾಗಿದೆ.

ಬೆಸ್ಕಾಂ ಟ್ವೀಟ್​

ಇನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯು (ಬೆಸ್ಕಾಂ) ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್​ ಆಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಫೇಸ್‌ಬುಕ್ ಮತ್ತು ಎಕ್ಸ್ (ಟ್ವಿಟರ್) ಮೂಲಕ ದೂರುಗಳನ್ನು ಸ್ವೀಕರಿಸಲು ಮುಂದಾಗಿದೆ. ಮಳೆಗಾಲದ ತುರ್ತು ಸಮಯದಲ್ಲಿ 1912 ಸಹಾಯವಾಣಿ ಕರೆ ಸಂಪರ್ಕ ಸಾಧ್ಯವಾಗದಿದ್ದರೆ ಗ್ರಾಹಕರು ಬೆಸ್ಕಾಂನ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್  facebook.com/bescomblr ಮತ್ತು ಎಕ್ಸ್ (ಟ್ವಿಟರ್) x.com/NammaBESCOM ಮೂಲಕ ದೂರು ಸಲ್ಲಿಸಿ ಶೀಘ್ರ ಪರಿಹಾರ ಪಡೆಯಬಹುದಾಗಿದೆ.

ಜಿಲ್ಲಾವಾರು ವಾಟ್ಸ್‌ಆ್ಯಪ್‌ ಸಹಾಯವಾಣಿ ಸಂಖ್ಯೆಗಳು

ಬೆಂಗಳೂರು ನಗರ ಜಿಲ್ಲೆ ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013 ಮತ್ತು ಉತ್ತರ ವೃತ್ತ: 8277884014. ಕೋಲಾರ: 8277884015, ಚಿಕ್ಕಬಳ್ಳಾಪುರ: 8277884016, ಬಿಆರ್​ಸಿ: 8277884017, ತುಮಕೂರು: 8277884019, ದಾವಣಗೆರೆ: 8277884021, ಚಿತ್ರದುರ್ಗ: 8277884020, ರಾಮನಗರ: 8277884018.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:45 pm, Fri, 8 May 26

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್