ಕ್ವಾರಿಯಲ್ಲಿ ಈಜಲು ತೆರಳಿದ್ದ ಎನ್ಎಸ್ಎಸ್ ವಿದ್ಯಾರ್ಥಿ ನೀರುಪಾಲು
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಅರೇಪುರ ಗ್ರಾಮದ ಕಲ್ಲು ಕ್ವಾರಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿದ್ದಾನೆ. ಬೇಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್.ಅಖಿಲ್(17) ಮೃತ ವಿದ್ಯಾರ್ಥಿ. ಕಾಲೇಜುವತಿಯಿಂದ NSS ಶಿಬಿರಕ್ಕಾಗಿ ಅರೇಪುರ ಗ್ರಾಮದಲ್ಲಿ ಕ್ಯಾಂಪ್ ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನ ಊಟ ಮಾಡಿಕೊಂಡು ಪಕ್ಕದಲ್ಲಿಯೇ ಇದ್ದ ಕಲ್ಲು ಕ್ವಾರಿಯಲ್ಲಿ ನಾಲ್ವರು ವಿದ್ಯಾರ್ಥಿಗಳು ಈಜಲು ಹೋಗಿದ್ದಾರೆ. ಈಜು ಬಾರದ ಹಿನ್ನೆಲೆಯಲ್ಲಿ ನೀರಿನಲ್ಲಿ ಮುಳುಗಿ ಅಖಿಲ್ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಅರೇಪುರ ಗ್ರಾಮದ ಕಲ್ಲು ಕ್ವಾರಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿದ್ದಾನೆ. ಬೇಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್.ಅಖಿಲ್(17) ಮೃತ ವಿದ್ಯಾರ್ಥಿ.
ಕಾಲೇಜುವತಿಯಿಂದ NSS ಶಿಬಿರಕ್ಕಾಗಿ ಅರೇಪುರ ಗ್ರಾಮದಲ್ಲಿ ಕ್ಯಾಂಪ್ ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನ ಊಟ ಮಾಡಿಕೊಂಡು ಪಕ್ಕದಲ್ಲಿಯೇ ಇದ್ದ ಕಲ್ಲು ಕ್ವಾರಿಯಲ್ಲಿ ನಾಲ್ವರು ವಿದ್ಯಾರ್ಥಿಗಳು ಈಜಲು ಹೋಗಿದ್ದಾರೆ. ಈಜು ಬಾರದ ಹಿನ್ನೆಲೆಯಲ್ಲಿ ನೀರಿನಲ್ಲಿ ಮುಳುಗಿ ಅಖಿಲ್ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.