ಕರ್ನಾಟಕದಲ್ಲಿ 2000 ಗಡಿ ದಾಟಿದ ಡೆಂಗ್ಯೂ ಸೋಂಕಿತರ ಸಂಖ್ಯೆ; ಎಚ್ಚರವಹಿಸುವಂತೆ ವೈದ್ಯರ ಸಲಹೆ

ಕೇರಳದಲ್ಲಿ ಜ್ವರದ ಕೇಸ್​ಗಳು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲೂ ಆತಂಕ ಮೂಡಿದ್ದು, ಈಗಾಗಲೇ ಕಳೆದ 27 ದಿನಗಳಲ್ಲಿ 334 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, 2,000 ಗಡಿ ದಾಟಿದೆ.

ಕರ್ನಾಟಕದಲ್ಲಿ 2000 ಗಡಿ ದಾಟಿದ ಡೆಂಗ್ಯೂ ಸೋಂಕಿತರ ಸಂಖ್ಯೆ; ಎಚ್ಚರವಹಿಸುವಂತೆ ವೈದ್ಯರ ಸಲಹೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 28, 2023 | 2:17 PM

ಬೆಂಗಳೂರು: ಕೇರಳ(Kerala)ದಲ್ಲಿ ಜ್ವರದ ಕೇಸ್​ಗಳು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲೂ ಆತಂಕ ಮೂಡಿದೆ. ಕೇರಳದಲ್ಲಿ ಪ್ರತಿನಿತ್ಯ 10 ಸಾವಿರ ಜ್ವರದ ಕೇಸ್​ ದಾಖಲಾಗುತ್ತಿದ್ದು, ಕಳೆದ 20 ದಿನಗಳಲ್ಲಿ 1,48,362 ಜ್ವರದ ಕೇಸ್ ದಾಖಲಾಗಿದೆ. ಈ ಮಧ್ಯೆ ಮಳೆಗಾಲ ಶುರುವಾಗುತ್ತಿದ್ದು, ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆತಂಕ ಎದುರಾಗಿದೆ. ರಾಜ್ಯದ ಅಂಕಿ ಅಂಶ ನೋಡುವುದಾದರೆ ಕಳೆದ 27 ದಿನಗಳಲ್ಲಿ 334 ಡೆಂಗ್ಯೂ ಜ್ವರ(Dengue Fever)ದ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 2,000 ಗಡಿ ದಾಟಿದೆ.

ಡೆಂಗ್ಯೂ ಜತೆ ಚಿಕನ್​ಗುನ್ಯಾ ಕೇಸ್​ಗಳ ಸಂಖ್ಯೆ ಕೊಂಚ ಏರಿಕೆ

ಹೌದು ಈಗಾಗಲೇ ಕೊರೊನಾ ಮಾಹಾಮಾರಿಗೆ ತತ್ತರಿಸಿದ್ದು, ಇದೀಗ ಡೆಂಗ್ಯೂ ಜತೆ ಚಿಕನ್​ಗುನ್ಯಾ ಪ್ರಕರಣಗಳ ಸಂಖ್ಯೆ ಕಳೆದ ಎರಡು ವಾರಗಳಿಂದ ಕೊಂಚ ಹೆಚ್ಚಳವಾಗಿದೆ. ಜನವರಿಯಿಂದ ನಿನ್ನೆಯವರೆಗೆ 2,180 ಡೆಂಗ್ಯೂ ಕೇಸ್​ಗಳು ಪತ್ತೆಯಾಗಿದ್ದು, ಬರೊಬ್ಬರಿ 77,260 ರಕ್ತದ ಮಾದರಿಯನ್ನ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಕುರಿತು ಜನರಿಗೆ ಆರೋಗ್ಯದ ಬಗ್ಗೆ ಎಚ್ಚರವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:Influenza: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಇನ್ಫ್ಲುಯೆನ್ಜ, ನಿಮ್ಮ ಮಕ್ಕಳಲ್ಲಿ ಜ್ವರ, ಶೀತ ಕಂಡುಬಂದರೆ ನಿರ್ಲಕ್ಷಿಸಬೇಡಿ

ಬೆಂಗಳೂರಿನಲ್ಲಷ್ಟೇ 732 ಕೇಸ್

ಜನವರಿಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 2180 ಡೆಂಗ್ಯೂ ಕೇಸ್ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಅಷ್ಟೇ 732 ಕೇಸ್ ಬೆಳಕಿಗೆ ಬಂದಿದೆ. ಇನ್ನುಳಿದಂತೆ 77260 ಬ್ಲಡ್ ಸ್ಯಾಂಪಲ್ಸ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇನ್ನು 534 ಚಿಕನ್ ಗುನ್ಯಾ ಕೇಸ್ ಸೇರಿದಂತೆ 84ಮಲೇರಿಯಾ ಪ್ರಕರಣ ಪತ್ತೆಯಾಗಿದೆ. ಇದೀಗ ಮಳೆಗಾಲ ಶುರುವಾಗುತ್ತಿದ್ದು, ವಾತಾವರಣ ಬದಲಾವಣೆಯಿಂದ ಮತ್ತಷ್ಟು ಕೇಸ್​ ಹೆಚ್ಚುವ ಸಾಧ್ಯತೆಯಿದೆ. ಈ ಕಾರಣಕ್ಕಾಗಿ ಮುಂಜಾಗೃತ ಕ್ರಮವಹಿಸಲು ಈಗಾಗಲೇ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:17 pm, Wed, 28 June 23

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?