ಕೋಲಾರ: ಕೊವಿಡ್ ವಾರ್ಡ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ 45 ವರ್ಷದ ನರ್ಸ್ ಕೊರೊನಾದಿಂದ ನಿಧನ

22 ವರ್ಷಗಳಿಂದ ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಕೊರೊನಾ ಲಸಿಕೆ ಪಡೆದು ಕೊವಿಡ್ ವಾರ್ಡ್​ನಲ್ಲಿ ಕೆಲಸ ಮಾಡುತ್ತಿದ್ದರು.

ಕೋಲಾರ: ಕೊವಿಡ್ ವಾರ್ಡ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ 45 ವರ್ಷದ ನರ್ಸ್ ಕೊರೊನಾದಿಂದ ನಿಧನ
ಮೃತ ನರ್ಸ್ ಶರ್ಮಿಳಾ
Follow us
TV9 Web
| Updated By: ganapathi bhat

Updated on:Aug 21, 2021 | 9:46 AM

ಕೋಲಾರ: ಕೊರೊನಾ ಸೋಂಕಿನಿಂದ 45 ವರ್ಷದ ನರ್ಸ್ ಶರ್ಮಿಳಾ ಎಂಬವರು ಸಾವನ್ನಪ್ಪಿದ್ದಾರೆ. ಬಂಗಾರಪೇಟೆ ತಾಲೂಕಿನ ದಾಸರಹೊಸಹಳ್ಳಿ ನಿವಾಸಿ ಶರ್ಮಿಳಾ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಅದಕ್ಕಾಗಿ ಕೋಲಾರ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ನರ್ಸ್ ಶರ್ಮಿಳಾ ಇಂದು (ಮೇ 26) ಕೊನೆಯುಸಿರೆಳೆದಿದ್ದಾರೆ.

ಕೆಜಿಎಫ್​​ ತಾಲೂಕು ಆಸ್ಪತ್ರೆಯಲ್ಲಿ ನರ್ಸ್​ ಆಗಿದ್ದ ಶರ್ಮಿಳಾ, ಇತ್ತೀಚೆಗಷ್ಟೆ ಕೊವಿಡ್​ ವ್ಯಾಕ್ಸಿನ್ ಪಡೆದಿದ್ದರು. 22 ವರ್ಷಗಳಿಂದ ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಕೊರೊನಾ ಲಸಿಕೆ ಪಡೆದು ಕೊವಿಡ್ ವಾರ್ಡ್​ನಲ್ಲಿ ಕೆಲಸ ಮಾಡುತ್ತಿದ್ದರು. ಸೋಂಕು ತಗುಲಿದ ಬಳಿಕ ಕೋಲಾರ ಜಿಲ್ಲಾಸ್ಪತ್ರೆ ಹಾಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕೋಲಾರದಲ್ಲಿ ಇಂದು 907 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.

ಕರ್ನಾಟಕದಲ್ಲಿ ಇಂದು (ಮೇ 26) ಹೊಸದಾಗಿ 26,811 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 24,99,784ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 20,62,910 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 530 ಜನರ ಸಾವು ಸಂಭವಿಸಿದೆ. ತನ್ಮೂಲಕ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 26,929 ಜನರು ಮೃತಪಟ್ಟಿದ್ದಾರೆ. 4,09,924 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 6,433 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ, ಇಂದು ಕೊರೊನಾ ಸೋಂಕಿಗೆ 285 ಜನರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಹೊಸ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆಯಾಗಿದ್ದು, ಕಳೆದ ಕೆಲವು ದಿನಗಳಿಂದ 25 ಸಾವಿರದ ಆಸುಪಾಸಿನಲ್ಲಿ ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ. ಆದರೆ, ಸೋಂಕಿತರ ಮರಣ ಪ್ರಮಾಣ ಮಾತ್ರ ಕಡಿಮೆ ಆಗಿಲ್ಲ. ಸಾವಿನ ಸಂಖ್ಯೆ ಕೂಡ ಇಳಿಕೆಯಾಗಬೇಕಿದೆ.

ಬೆಂಗಳೂರಲ್ಲಿ ಒಟ್ಟು ಕೊರೊನಾ ಪೀಡಿತರ ಸಂಖ್ಯೆ 11,37,929ಕ್ಕೆ ಏರಿಕೆಯಾಗಿದೆ. 11,37,929 ಸೋಂಕಿತರ ಪೈಕಿ 9,18,423 ಜನರು ಗುಣಮುಖ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 285 ಜನರ ಬಲಿಯಾಗಿದೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 12,148 ಜನರ ಸಾವು ಸಂಭವಿಸಿದೆ. 2,07,357 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳ; ಗ್ರಾಮ ಪಂಚಾಯತಿ ಅಧಿಕಾರಿಗಳ ಜೊತೆ ಬಿ.ಎಸ್. ಯಡಿಯೂರಪ್ಪ ಸಂವಾದ

Lockdown Guidelines: ಕೊರೊನಾ ಸೋಂಕು ಇಳಿಕೆಯತ್ತ ಮುಖ ಮಾಡಿರುವಾಗಲೇ ಲಾಕ್​ಡೌನ್ ನಿಯಮ ಸಡಿಲಿಸಿದ ಕರ್ನಾಟಕ ಸರ್ಕಾರ

Published On - 9:54 pm, Wed, 26 May 21