ರಾಜ್ಯದ 2 ನರ್ಸಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ದೃಢ
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ನರ್ಸಿಂಗ್ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ವಿದ್ಯಾರ್ಥಿಗಳು ಒಂದೇ ಕಟ್ಟಡದಲ್ಲಿ ಆನ್ಲೈನ್ ಕ್ಲಾಸ್ನಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ನರ್ಸಿಂಗ್ ಕಾಲೇಜಿನ 15 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ವಿದ್ಯಾರ್ಥಿಗಳು ಒಂದೇ ಕಟ್ಟಡದಲ್ಲಿ ಆನ್ಲೈನ್ ಕ್ಲಾಸ್ನಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, ಒಬ್ಬರಿಂದ ಹದಿನೈದು ವಿದ್ಯಾರ್ಥಿಗಳಿಗೆ ಸೋಂಕು ಹಬ್ಬಿರುವ ಶಂಕೆ ವ್ಯಕ್ತವಾಗಿದೆ ಎಂದು DHO ಡಾ.ರವಿ ಮಾಹಿತಿ ನೀಡಿದ್ದಾರೆ.
ದಾವಣಗೆರೆಯಲ್ಲಿ ಒಂದೇ ಕಾಲೇಜಿನ 21 ವಿದ್ಯಾರ್ಥಿಗಳಿಗೆ ಕೊರೊನಾ ಇತ್ತ, ಬೆಣ್ಣೆನಗರಿ ದಾವಣಗೆರೆಯಲ್ಲಿ ಸಹ ಒಂದೇ ಕಾಲೇಜಿನ 21 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. ಇಲ್ಲೂ ಕೂಡ ಜಿಲ್ಲೆಯಲ್ಲಿರುವ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಲ್ಲಿ ಸೋಂಕು ಪತ್ತೆಯಾಗಿದೆ. ಸದ್ಯ, ಎಲ್ಲಾ ಸೋಂಕಿತರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಟಿವಿ9ಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾಹಿತಿ ಕೊಟ್ಟಿದ್ದಾರೆ.
ನಿನ್ನೆ ಸಂಜೆ ವೇಳೆ ವಿದ್ಯಾರ್ಥಿಗಳ ಗಂಟಲು ದ್ರವವನ್ನು ಸಂಗ್ರಹಿಸಲಾಗಿತ್ತು. ಸದ್ಯ, ಬಹುತೇಕರು ಆರೋಗ್ಯವಾಗಿದ್ದಾರೆ. ಇಷ್ಟರಲ್ಲಿ ಆಸ್ಪತ್ರೆ ಯಿಂದ ಅವರನ್ನ ಡಿಸ್ಚಾರ್ಜ್ ಮಾಡಲಾಗುವುದು. ವಿದ್ಯಾರ್ಥಿಗಳಲ್ಲಿ ಗಂಭೀರ ಸ್ವರೂಪದ ಸೋಂಕಿನ ಲಕ್ಷಣಗಳು ಇಲ್ಲ ಎಂದು ಡಾ.ರಾಘವನ್ ಹೇಳಿದ್ದಾರೆ.
ಕೇರಳದಿಂದ ಬಂದಿರುವ ನಾಲ್ಕು ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಆ ನಾಲ್ಕು ವಿದ್ಯಾರ್ಥಿನಿಯರಿಗೆ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರ ಸಂಪರ್ಕದಲ್ಲಿ ಇದ್ದವರನ್ನು ಟೆಸ್ಟ್ ಮಾಡಿಸಿದಾಗ ಒಟ್ಟು 21 ಪಾಸಿಟಿವ್ ಕೇಸ್ ಕಂಡು ಬಂದಿವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದ್ದಾರೆ.
ಸದ್ಯ, ಎಲ್ಲರಿಗೆ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸಂಪರ್ಕದಲ್ಲಿ ಇದ್ದ 362 ಜನರಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಟಿವಿ9ಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ಕೊಟ್ಟಿದ್ದಾರೆ.
ಕೊರೊನಾ ಅವತಾರ್ 2 ಮಧ್ಯೆ ಅಧಿಕಾರಿಗಳ ನಿರ್ಲಕ್ಷ್ಯ: ವಿದೇಶದಿಂದ ಬರೋರಿಗೆ ಹಾಕ್ತಿಲ್ಲ ಸೀಲ್!
Published On - 4:27 pm, Thu, 24 December 20



