ಸೋರುತ್ತಿಲ್ಲದಿದ್ದರೂ ಛತ್ರಿ ಹಿಡಿದು ಬಸ್ ಚಲಾಯಿಸಿದ NWKRTC ಚಾಲಕ ಸಸ್ಪೆಂಡ್

ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸೊಂದರಲ್ಲಿ ಚಾಲಕರೊಬ್ಬರು ಸೋರುತ್ತಿರುವ ಮಳೆ ನೀರಿನಿಂದ ರಕ್ಷಣೆ ಪಡೆಯಲು ಛತ್ರಿ ಹಿಡಿದುಕೊಂಡೇ ಚಾಲನೆ ಮಾಡಿದ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ. ಇದರ ಬೆನ್ನಲ್ಲೇ NWKRTC ಪರಿಶೀಲನೆ ಮಾಡಿದ್ದು, ಬಸ್​ ಸೋರುತ್ತಿಲ್ಲ. ಬದಲಿಗೆ ಡ್ರೈವರ್ ಮನರಂಜನೆಗಾಗಿ ಛತ್ರಿ ಹಿಡಿದು ಬಸ್ ಚಾಲನೆ ಮಾಡಿರುವುದು ಗೊತ್ತಾಗಿದೆ.

ಸೋರುತ್ತಿಲ್ಲದಿದ್ದರೂ ಛತ್ರಿ ಹಿಡಿದು ಬಸ್ ಚಲಾಯಿಸಿದ NWKRTC ಚಾಲಕ ಸಸ್ಪೆಂಡ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: May 24, 2024 | 9:12 PM

ಬೆಂಗಳೂರು, (ಮೇ 24): ಛತ್ರಿ ಹಿಡಿದು NWKRTC ಬಸ್ ಚಲಾಯಿಸಿದ್ದ ಚಾಲಕನ ವಿಡಿಯೋ ವೈರಲ್​ ಆಗಿದ್ದು, ಇದೀಗ ಈ ವಿಡಿಯೋನ ಅಸಲಿಯತ್ತು ಬಯಲಾಗಿದೆ. ಮನೋರಂಜನೆಗಾಗಿ ಛತ್ರಿ ಹಿಡಿದು ಬಸ್ ಚಲಾಯಿಸಿದ್ದ ಡ್ರೈವರ್​ ಹನುಮಂತಪ್ಪ ಕಿಲ್ಲೇದಾರ ಅಮಾನತುಗೊಂಡಿದ್ದಾರೆ. ಹೌದು… ಬಸ್​ ಸೋರುತ್ತಿದೆ ಎನ್ನುವಂತೆ ಛತ್ರಿ ಹಿಡಿದು ಬಸ್​ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದ್ದಂತೆಯೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ತನಿಖೆ ನಡೆಸಿದ್ದು, ಮನರಂಜನೆಗಾಗಿ ಚಾಲಕ ಕೊಡೆ ಹಿಡಿದು ಬಸ್‌ ಚಾಲನೆ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಹನುಮಂತಪ್ಪ ಕಿಲ್ಲೇದಾರ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಬಸ್​​ನಲ್ಲಿ ಮಳೆ ನೀರು ಸೋರುತ್ತಿರಲಿಲ್ಲ. ಬಸ್ ನಲ್ಲಿ ಪ್ರಯಾಣಿಕರು ಯಾರು ಇಲ್ಲದ ವೇಳೆಯಲ್ಲಿ ಕಂಡಕ್ಟರ್ ಅನಿತಾ ಹೆಚ್ ಬಳಿಯಿದ್ದ ಛತ್ರಿ ತೆಗೆದುಕೊಂಡು ಮನರಂಜನೆಗಾಗಿ ವಿಡಿಯೋ ಮಾಡಿದ್ದಾರೆ. ಮಳೆ ನೀರು ಸೋರಿಕೆ ಬಗ್ಗೆ ಪ್ರಯಾಣಿಕರಿಂದ ಯಾವುದೇ ದೂರು ಬಂದಿಲ್ಲ ಎಂದು NWKRTC ಅಧಿಕಾರಿಗಳು ತಪಾಸಣೆ ನಡೆಸಿ ವರದಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಸೋರುತಿಹುದು ಬಸ್ ಮಾಳಿಗಿ: ವಾಯುವ್ಯ ಸಾರಿಗೆ ಬಸ್ ಚಾಲಕರಿಗೆ ಛತ್ರಿ ಗ್ಯಾರಂಟಿ! ವಿಡಿಯೋ ನೋಡಿ

ವಾಯವ್ಯ ಕರ್ನಾಟಕ ಸಾರಿಗೆ (NWKRTC Bus) ಬಸ್ಸೊಂದರಲ್ಲಿ ಸೋರುತ್ತಿರುವ ಮಳೆನೀರಿನಿಂದ ರಕ್ಷಣೆ ಪಡೆಯುವ ರೀತಿ ಹನುಮಂತಪ್ಪ ಕಿಲ್ಲೇದಾರ ಒಂದು ಕೈಯಲ್ಲಿ ಛತ್ರಿ ಹಿಡಿದುಕೊಂಡು ಮತ್ತೊಂದು ಕೈಯಿಂದ ಬಸ್ ಚಲಾಯಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಟೀಕೆಗಳು ವ್ಯಕ್ತವಾಗಿದ್ದವು.

ಸ್ಪಷ್ಟನೆಯಲ್ಲಿ ಏನಿದೆ?

ಧಾರವಾಡ ಘಟಕದ ಬೇಟಗೇರಿ-ಧಾರವಾಡ ಮಾರ್ಗದಲ್ಲಿ ಸಂಚರಿಸುವ ಬಸ್‌ನಲ್ಲಿ ಚಾಲಕರಾಗಿ ಹನುಮಂತಪ್ಪ ಅ ಕಿಲ್ಲೇದಾರ ಹಾಗೂ ನಿರ್ವಾಹಕರಾಗಿ ಅನಿತಾ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಮಳೆ ಬರುತ್ತಿದ್ದಾಗ ಸಂಜೆ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಇದ್ದಾಗ ಚಾಲಕರು ಮನೋರಂಜನೆಗಾಗಿ ನಿರ್ವಾಹಕರ ಬಳಿ ಇದ್ದ ಕೊಡೆಯನ್ನು ಪಡೆದು ಹಿಡಿದುಕೊಂಡು ಬಸ್‌ ಚಾಲನೆ ಮಾಡಿದ್ದಾರೆ. ಚಾಲನೆ ಮಾಡುತ್ತಿರುವ ದೃಶ್ಯವನ್ನು ನಿರ್ವಾಹಕಿ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ.

ಮಳೆ ಬರುತ್ತಿದ್ದಾಗ ಚಾಲಕರ ಮೇಲಿನ ಛಾವಣಿಯಾಗಲಿ ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದ ಛಾವಣಿಯಿಂದ ಸೋರುತ್ತಿರಲಿಲ್ಲ.ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕರ, ಪ್ರಯಾಣಿಕರ ಯಾವುದೇ ದೂರು ಸಹ ದಾಖಲಾಗಿಲ್ಲ. ವಾಹನವನ್ನು ವಿಭಾಗದ ತಾಂತ್ರಿಕ ಶಿಲ್ಪಿಗಳಿಂದ ಪರಿಶೀಲನೆ ಮಾಡಲಾಗಿದ್ದು ಮೇಲ್ಚಾವಣಿ ಸೋರುತ್ತಿಲ್ಲ ಎನ್ನುವುದನ್ನು ಖಚಿತಪಡಿಸಲಾಗಿದೆ. ಈ ವಿಡಿಯೋದ ಬಗ್ಗೆ ಸಿಬ್ಬಂದಿಯಿಂದ ಸ್ಪಷ್ಟೀಕರಣ ಪಡೆಯಲಾಗಿದ್ದು ಇದು ಕೇವಲ ಮನೋರಂಜನೆಗಾಗಿ ಮಾಡಿದ ವಿಡಿಯೋ ಚಿತ್ರೀಕರಣವಾಗಿರುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ಸರ್ಕಾರವನ್ನು ಟೀಕಿಸಿದ್ದ ಬಿಜೆಪಿ

ಇನ್ನು ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಕರ್ನಾಟಕ ಬಿಜೆಪಿ ವ್ಯಂಗ್ಯಚಿತ್ರವನ್ನು ಹಂಚಿಕೊಂಡಿದ್ದು ಕರ್ನಾಟಕದ ಸರ್ಕಾರದಿಂದ ಛತ್ರಿ ಭಾಗ್ಯಕ್ಕೆ ಚಾಲನೆ ಎಂದು ಸರ್ಕಾರವನ್ನು ಟೀಕಿಸಿತ್ತು.

ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು “ಸನ್ಮಾನ್ಯ ರಾಮಲಿಂಗಾರೆಡ್ಡಿ ಅವರೇ, ಇದು ನಮ್ಮ ಸರ್ಕಾರಿ ಬಸ್ಸುಗಳ ದುಃಸ್ಥಿತಿ. ಈ ರೀತಿ ಒಂದು ಕೈಯಲ್ಲಿ ಕೊಡೆ, ಒಂದು ಕೈಯಲ್ಲಿ ಸ್ಟಿಯರಿಂಗ್ ವೀಲ್ ಬ್ಯಾಲೆನ್ಸ್ ಮಾಡುತ್ತ ಓಡಿಸುವುದರಿಂದ ಚಾಲಕರು ಹಾಗೂ ಪ್ರಯಾಣಿಕರ ಜೀವಕ್ಕೆ ಕುತ್ತು. ಇದೇನಾ ಚಾಲಕರಿಗೆ ಇರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ ? (standard operating procedure). ಚಾಲಕರ, ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ಇರಲಿ.” ಎಂದಿದ್ದರು.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ