Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ, ವರದಿಯಲ್ಲಿ ಏನೇನಿದೆ?

Karnataka Caste Census Report: ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ತೀವ್ರ ವಿರೋಧದ ನಡುವೆಯೂ ಇಂದು ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆಯಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಸಿಎಂ ಸಿದ್ದರಾಮಯ್ಯಗೆ ವರದಿ ಸಲ್ಲಿಸಿದರು. ಇನ್ನು ಈ ವರದಿಯಲ್ಲಿ ಎಷ್ಟು ಪ್ರತಿಗಳಿವೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ, ವರದಿಯಲ್ಲಿ ಏನೇನಿದೆ?
ಜಾತಿ ಗಣತಿ ವರದಿ ಸಲ್ಲಿಕೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Feb 29, 2024 | 3:40 PM

ಬೆಂಗಳೂರು, (ಫೆಬ್ರವರಿ 29): ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹೆಚ್ಚು ಸುದ್ದು ಮಾಡಿದ ವಿಷಯಗಳಲ್ಲಿ ಈ ಜಾತಿ ಗಣತಿ ವರದಿ (Karnataka Caste Census Report:) ಸಲ್ಲಿಕೆ ವಿಚಾರವೂ ಒಂದಾಗಿದೆ. ಇದೀಗ ತೀವ್ರ ವಿರೋಧದ ನಡುವೆಯೂ ಜಾತಿ ಗಣತಿ ವರದಿ ಸಲ್ಲಿಕೆಯಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು(Jayaprakash Hegde) ಇಂದು(ಫೆಬ್ರವರಿ 29) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಸಲ್ಲಿಸಿದರು. ಇನ್ನು ಈ ವರದಿಯಲ್ಲಿ ಒಟ್ಟು 13 ಪ್ರತಿಗಳಿವೆ.

ಇನ್ನು ಕಾಂತರಾಜ್ ವರದಿ ಸ್ವೀಕಾರ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಸ್ವೀಕರಿಸಿದ್ದೇನೆ. ಜಾತಿ ಗಣತಿ ವರದಿಯಲ್ಲಿ ಏನಿದೆ ಎಂದು ನಾನು ನೋಡಿಲ್ಲ. ಕ್ಯಾಬಿನೆಟ್​​ನಲ್ಲಿ ಜಾತಿಗಣತಿ ವರದಿ ಚರ್ಚೆ ಮಾಡುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳತ್ತೇವೆ ಎಂದು ಹೇಳಿದರು.

ಜಯಪ್ರಕಾಶ್​ ಹೆಗ್ಡೆ ಹೇಳಿದ್ದೇನು?

ಇನ್ನು ಜಾತಿಗಣತಿ ವರದಿ ಹಸ್ತಾಂತರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ, ಕಾಂತರಾಜು ಸಮಿತಿ 2014-15ರಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ದತ್ತಾಂಶ  ಸಂಗ್ರಹ ಮಾಡಿತ್ತು. ಕಾಂತರಾಜು ಸಮಿತಿ ದತ್ತಾಂಶ ಪ್ರಕಾರ ನಾವು ವರದಿ ಸಿದ್ಧಪಡಿಸಿದ್ದೇವೆ​. ಜಾತಿಗಣತಿ ವರದಿಗೆ ಕಾರ್ಯದರ್ಶಿ, ಎಲ್ಲಾ ಸದಸ್ಯರು ಸಹಿಯೂ ಇದೆ. ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ. ಜಾತಿಗಣತಿ ವರದಿಯನ್ನು ಓದದೇ ಅವೈಜ್ಞಾನಿಕ ಎಂದು ಹೇಗೆ ಹೇಳುತ್ತೀರಿ. ನಾವು ಸಿದ್ಧಪಡಿಸಿದ ಜಾತಿ ಗಣತಿಯ ವರದಿ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಜಾತಿ ಗಣತಿ ವರದಿಯಲ್ಲಿ ಏನೇನಿದೆ?

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರಿಂದ ಸಲ್ಲಿಕೆಯಾದ ಜಾತಿ ಗಣತಿ ವರದಿಯಲ್ಲಿ ಒಟ್ಟು 13 ಪ್ರತಿಗಳನ್ನು ಸಿದ್ಧಪಡಿಸಲಾಗಿದೆ. ಎಲ್ಲ ಪ್ರತಿಗಳು ಕೂಡ ದೊಡ್ಡ ಸಂಪುಟಗಳಾಗಿವೆ. ಕೆಲವು ಸಂಪುಟಗಳನ್ನು ಎರಡು-ಮೂರು ಭಾಗಗಳಾಗಿ ಮಾಡಲಾಗಿದೆ. ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಎಲ್ಲ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಾನಮಾನಗಳ ಸಮೀಕ್ಷೆಯನ್ನು ವರದಿಯು ಒಳಗೊಂಡಿದೆ.

ಜಾತಿಗಣ ವರದಿಯಲ್ಲಿರುವ ಅಂಶಗಳು

  • ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ಸಮಗ್ರ ರಾಜ್ಯ ವರದಿ
  •  ಜಾತಿವಾರು ಜನಸಂಖ್ಯೆ ವಿವರ – 1 ಸಂಪುಟ
  •  ಜಾತಿ / ವರ್ಗಗಳ ಲಕ್ಷಣಗಳು( ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನ ಹೊರತು ಪಡಿಸಿ)
  •  ಜಾತಿ / ವರ್ಗಗಳ ಪ್ರಮುಖ ಲಕ್ಷಣಗಳು ( ಪರಿಶಿಷ್ಟ ಜಾತಿಗಳು)
  •  ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು ( ಪರಿಶಿಷ್ಟ ಪಂಗಡಗಳು)
  •  ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ ಅಂಶಗಳು (ಎರಡು ಸಿಡಿಗಳು)
  •  ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆ 2015 ರ ದತ್ತಾಂಶಗಳ ಅಧ್ಯಯನ ವರದಿ 2024

2013 ರಿಂದ 2018ರವರೆಗಿನ ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದ ಅವಧಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯನ್ನು ಮಾಡಿಸಲಾಗಿತ್ತು. ಆದ್ರೆ ಕಾರಣಂತರಗಳಿಂದ ಸರ್ಕಾರ ವರದಿ ಸ್ವೀಕರಿಸಿರಲಿಲ್ಲ. ಈ ಮಧ್ಯೆ ವರದಿ ಸೋರಿಕೆಯಾಗಿದ್ದು ಭಾರಿ ಸದ್ದು ಮಾಡಿತ್ತು. ಇದೀಗ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಿದ್ದಾರೆ. ಅಧಿಕಾರಕ್ಕೆ ಬಂದ್ಮೇಲೆ ಜಾತಿ ಗಣತಿ ವರದಿಯನ್ನ ಸ್ವೀಕಾರ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

154 ಕೋಟಿ ರೂ. ವೆಚ್ಚದಲ್ಲಿ ವರದಿ ತಯಾರಿಕೆ: ಬರೋಬ್ಬರಿ 154 ಕೋಟಿ ರೂ. ವೆಚ್ಚದಲ್ಲಿ ಈ ಜಾತಿ ಗಣತಿ ವರದಿಯನ್ನು ಸಿದ್ಧಪಡಿಸಲಾಗಿದೆ. ಕಾಂಗ್ರೆಸ್‌ ಸ್ವಪಕ್ಷೀಯ ನಾಯಕರು ಹಾಗೂ ಬಿಜೆಪಿ ನಾಯಕರ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ ವರದಿ ಸ್ವೀಕಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲೇ ಒಳ ಬೇಗುದಿ ಸೃಷ್ಟಿಸಿರುವ ಜಾತಿ ಗಣತಿ ಜ್ವಾಲೆ ಸ್ಫೋಟವಾಗುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:13 pm, Thu, 29 February 24

14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು