ಗಣೇಶ ಮೂರ್ತಿ ವಿಸರ್ಜನೆ: ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆ.5ರ ವರೆಗೆ ಮದ್ಯ ಮಾರಾಟ ನಿಷೇಧ

| Updated By: Rakesh Nayak Manchi

Updated on: Sep 02, 2022 | 5:45 PM

ಸಾಮೂಹಿಕ ಗಣೇಶ ಮೂರ್ತಿ ವಿಸರ್ಜನೆ ಹಿನ್ನೆಲೆ ನಗರದ ಈಶಾನ್ಯ ಹಾಗೂ ಪೂರ್ವ ವಿಭಾಗದ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಗಣೇಶ ಮೂರ್ತಿ ವಿಸರ್ಜನೆ: ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆ.5ರ ವರೆಗೆ ಮದ್ಯ ಮಾರಾಟ ನಿಷೇಧ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಸಾಮೂಹಿಕ ಗಣೇಶ ಮೂರ್ತಿ ವಿಸರ್ಜನೆ ಹಿನ್ನೆಲೆ ನಗರದ ಈಶಾನ್ಯ ಹಾಗೂ ಪೂರ್ವ ವಿಭಾಗದ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಹೊರಡಿಸಿದ ಆದೇಶದಂತೆ, ಬಾರ್, ಪಬ್, ರೆಸ್ಟೋರೆಂಟ್​ಗಳಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು, ಈಶಾನ್ಯ ವಿಭಾಗದ ವಿದ್ಯಾರಣ್ಯಪುರ, ಯಲಹಂಕ, ಯಲಹಂಕ ನ್ಯೂಟೌನ್, ಕೊಡಿಗೆಹಳ್ಳಿ ವ್ಯಾಪ್ತಿಯಲ್ಲಿ ಸೆ.3ರ ಸಂಜೆ 6 ಗಂಟೆಯಿಂದ ಸೆ.5ರ ಬೆಳಿಗ್ಗೆ 6ರವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ. ಪೂರ್ವ ವಿಭಾಗ ಕೆ.ಜಿ.ಹಳ್ಳಿ, ಗೋವಿಂದಪುರ, ಡಿ.ಜೆ.ಹಳ್ಳಿ, ಬಾಣಸವಾಡಿ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಭಾರತಿನಗರ, ಪುಲಿಕೇಶಿ ನಗರ, ಹಲಸೂರು ವ್ಯಾಪ್ತಿಯಲ್ಲಿ ಸೆ.4ರ ಬೆಳಿಗ್ಗೆ 6 ಗಂಟೆಯಿಂದ ಸೆ.5ರ ಬೆಳಿಗ್ಗೆ 6ವರೆಗೂ ಮದ್ಯ ಮಾರಾಟ ನಿಷೇಧ ಹೇರಲಾಗಿದೆ.

ಮತ್ತಷ್ಟು ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:45 pm, Fri, 2 September 22