ಚುನಾವಣಾ ಕರ್ತವ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳೇ ಮತದಾನದಿಂದ ವಂಚಿತ? ಇಡಿಸಿ ನೀಡಿಲ್ಲವೆಂದು ಆರೋಪ

ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿರುವ ಅಧಿಕಾರಿ ಸಿಬ್ಬಂದಿಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ಮತಗಟ್ಟೆಯಲ್ಲೇ ಮತದಾನಕ್ಕೆ ಅವಕಾಶ ಇದೆ. ಇದಕ್ಕೆ ಆಯಾ ಎಆರ್​ಓಗಳು ಇಡಿಸಿ ನೀಡಬೇಕು. ಅಧಿಕಾರಿ ಸಿಬ್ಬಂದಿಗಳು ತಾವು ಕರ್ತವ್ಯ ನಿರ್ವಹಿಸುವ ಮತಗಟ್ಟೆಯಲ್ಲೇ ಇ.ಡಿ.ಸಿ ಹಾಜರುಪಡಿಸಿ ಮತದಾನ ಮಾಡಲು ಅವಕಾಶ ಇರುತ್ತದೆ. ಆದರೆ ಹಲವಾರು ಮಂದಿಗೆ ಇಡಿಸಿ ಕೊಡದೆ ಮತದಾನದಿಂದ ವಂಚಿತ ಆರೋಪ ಮಾಡಲಾಗಿದೆ.

ಚುನಾವಣಾ ಕರ್ತವ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳೇ ಮತದಾನದಿಂದ ವಂಚಿತ? ಇಡಿಸಿ ನೀಡಿಲ್ಲವೆಂದು ಆರೋಪ
ಚುನಾವಣಾ ಕರ್ತವ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳೇ ಮತದಾನದಿಂದ ವಂಚಿತ? ಇಡಿಸಿ ನೀಡಿಲ್ಲವೆಂದು ಆರೋಪ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ

Updated on: May 09, 2024 | 1:26 PM

ಚಾಮರಾಜನಗರ, ಮೇ 09: ರಾಜ್ಯದಲ್ಲಿ ಲೋಕಸಭೆಗೆ (Lok Sabha Elections) ಮೇ 07ರಂದು 2ನೇ ಹಂತದಲ್ಲಿ ಮತದಾನ ನಡೀತು. ಬಾಕಿ ಉಳಿದಿದ್ದ 14 ಕ್ಷೇತ್ರಗಳಿಗೆ ಯಶಸ್ವಿ ಮತದಾನ ಮಾಡಲಾಗಿದೆ. ಆದರೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳೇ ಮತದಾನದಿಂದ ವಂಚಿತರಾಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ನಿರ್ದಿಷ್ಟ ವ್ಯಕ್ತಿಗೆ ಅಥವಾ ನಿರ್ದಿಷ್ಟ ಪಕ್ಷಕ್ಕೆ ಮತ ಹಾಕುತ್ತಾರೆಂದು ಅಂತಹವರಿಗೆ ಇಡಿಸಿ (Elections Duty Certificate) ನೀಡಿಲ್ಲ ಎಂಬ ಗಂಭೀರ ಆರೋಪ ಮಾಡಲಾಗಿದೆ.

ಒಂದೆಡೆ ಕೋಟಿ ಕೋಟಿ ರೂ. ಖರ್ಚು ಮಾಡಿ ಎಲೆಕ್ಷನ್ ಕಮಿಷನ್ ಮತದಾನದ ಜಾಗೃತಿ ಕಾರ್ಯಕ್ರಮ ಮಾಡಿದೆ. ಆದರೆ ಇನ್ನೊಂದೆಡೆ ಚುನಾವಣಾ ಕರ್ತವ್ಯ ಅಧಿಕಾರಿಗಳಿಗೆ ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಅಂತ್ಯ: ಯಾವ್ಯಾವ ಕ್ಷೇತ್ರದಲ್ಲಿಎಷ್ಟು ಮತದಾನ? ಇಲ್ಲಿದೆ ವಿವರ

ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿರುವ ಅಧಿಕಾರಿ ಸಿಬ್ಬಂದಿಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ಮತಗಟ್ಟೆಯಲ್ಲೇ ಮತದಾನಕ್ಕೆ ಅವಕಾಶ ಇದೆ. ಇದಕ್ಕೆ ಆಯಾ ಎಆರ್​ಓಗಳು ಇಡಿಸಿ ನೀಡಬೇಕು. ಅಧಿಕಾರಿ ಸಿಬ್ಬಂದಿಗಳು ತಾವು ಕರ್ತವ್ಯ ನಿರ್ವಹಿಸುವ ಮತಗಟ್ಟೆಯಲ್ಲೇ ಇ.ಡಿ.ಸಿ ಹಾಜರುಪಡಿಸಿ ಮತದಾನ ಮಾಡಲು ಅವಕಾಶ ಇರುತ್ತದೆ. ಆದರೆ ಹಲವಾರು ಮಂದಿಗೆ ಇಡಿಸಿ ಕೊಡದೆ ಮತದಾನದಿಂದ ವಂಚಿತ ಆರೋಪ ಮಾಡಲಾಗಿದೆ.

ಅಗತ್ಯ ದಾಖಲೆಗಳೊಂದಿಗೆ 12A ಫಾರಂನಲ್ಲಿ ಅರ್ಜಿ ಸಲ್ಲಿಸಿದ್ದರೂ ಇಡಿಸಿ ನೀಡದೆ ವಂಚಿಸಲಾಗಿದೆ. ಗಣಕಯಂತ್ರದಲ್ಲಿ ಜನರೇಟ್ ಮಾಡಿದ್ದರೂ ಸಹಿ ಹಾಕಿ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗೆ ವಿತರಣೆ ಮಾಡಿಲ್ಲ ಎಂದು ಮತದಾನದಿಂದ ವಂಚಿತರಾದ ಸಿಬ್ಬಂದಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬೇಸರ ಮುಖದಲ್ಲಿ ತೋರ್ಪಡಿಸಿಕೊಳ್ಳದಿದ್ದರೂ ಒಲ್ಲದ ಮನಸ್ಸಿನಿಂದ ಸಾಯಂಕಾಲ ವೋಟು ಮಾಡಲು ಬಂದ ಅನಂತಕುಮಾರ್ ಹೆಗಡೆ

ನಿರ್ದಿಷ್ಟ ವ್ಯಕ್ತಿಗೆ ಅಥವಾ ನಿರ್ದಿಷ್ಟ ಪಕ್ಷಕ್ಕೆ ಮತ ಹಾಕುತ್ತಾರೆಂದು ಅಂತಹವರಿಗೆ ಇಡಿಸಿ ನೀಡಿಲ್ಲ ಎಂಬ ಗಂಭೀರ ಆರೋಪ ಮಾಡಿದ್ದು ಮತದಾನದಿಂದ ವಂಚಿಸುವ ದುರುದ್ದೇಶದಿಂದಲೇ ಇಡಿಸಿ ನೀಡಲಿಲ್ಲ ಎನ್ನಲಾಗುತ್ತಿದೆ.

ಇಡಿಸಿ ಸಿಗದೆ ಮತದಾನದಿಂದ ವಂಚಿತರಾದವರು ದೂರು ನೀಡಿದರೆ ಸಂಬಂಧಿಸಿದವರ ವಿರುದ್ದ ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಹೇಳಿದ್ದಾರೆ. ಆದರೆ 12A ನಲ್ಲಿ ಅರ್ಜಿ ಸಲ್ಲಿಸದವರೆಲ್ಲರಿಗೂ ಇಡಿಸಿ ನೀಡಲಾಗಿದೆ ಎಂದು ಜಿಲ್ಲಾಡಳಿತ ಸಮರ್ಥನೆ ನೀಡಿದೆ. ಹಾಗಾದರೆ ಯಾರದ್ದು ಸರಿ? ಯಾರದ್ದು ತಪ್ಪು ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ