ಯಾದಗಿರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ! 52 ಲಕ್ಷ ರೂ. ಮೌಲ್ಯದ ಮರಳು ಜಪ್ತಿ
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ವಾಡಹಳ್ಳಿ ಗೇಟ್ ರಿಜಾಯ್ ಪಾಷಾ(41) ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ.
ಯಾದಗಿರಿ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಸುಮಾರು 52 ಲಕ್ಷ ರೂಪಾಯಿ ಮೌಲ್ಯದ ಮರಳನ್ನ ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಸುರಪುರ ತಾಲೂಕಿನ ಹೆಮ್ಮಡಗಿ ಮತ್ತು ಚೌಡೇಶ್ವರಹಾಳದಲ್ಲಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕೃಷ್ಣಾ ನದಿಯಿಂದ ಮರಳನ್ನು ತಂದು ಸಂಗ್ರಹಿಸಲಾಗಿತ್ತು. ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಡಿವೈಎಸ್ಪಿ ದೇವರಾಜ್ ನೇತೃತ್ವದ ತಂಡ ನಿಖರ ಮಾಹಿತಿ ಆಧಾರದ ಮೇಲೆ ದಾಳಿ ಮಾಡಿದೆ. ಸದ್ಯ ಈ ಪ್ರಕರಣ ಸುರಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ವಾಡಹಳ್ಳಿ ಗೇಟ್ ರಿಜಾಯ್ ಪಾಷಾ(41) ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ. ತಾವರೆಕೆರೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಬಂಧಿತ ಆರೋಪಿಯಿಂದ 950 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಬಳಿಯ ಕಟ್ಟಡದಲ್ಲಿ ಬೊಮ್ಮೇನಹಳ್ಳಿಯ ವೆಂಕಟೇಶ್(35) ಶವ ಪತ್ತೆಯಾಗಿದೆ. ‘ನನ್ನ ಸಾವಿಗೆ ಪೊಲೀಸರೇ ಕಾರಣ’ವೆಂದು ವ್ಯಕ್ತಿ ಶವ ಪತ್ತೆಯಾದ ಸ್ಥಳದಲ್ಲಿಯೇ ಗೋಡೆ ಬರಹ ಕೂಡಾ ಪತ್ತೆಯಾಗಿದೆ.
ಇದನ್ನೂ ಓದಿ
ರಾಯಚೂರಿನಲ್ಲಿ ಕ್ರೂಸರ್ ಪಲ್ಟಿ! ಮಹಿಳೆ ಸಾವು, 7 ಜನರಿಗೆ ಗಾಯ
ಪ್ರಿಯಾಂಕ್ ಖರ್ಗೆ ಬಳಿ 50 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಇದೆಯಂತೆ: ಕ್ಯಾ. ಗಣೇಶ್ ಕಾರ್ಣಿಕ್
Published On - 2:45 pm, Tue, 16 November 21