ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸ್ಥಳ ಫಿಕ್ಸ್​; ವಾರ್ತಾ ಇಲಾಖೆ ಆಯುಕ್ತರಿಂದ ಸ್ಥಳ ಪರಿಶೀಲನೆ

| Updated By: guruganesh bhat

Updated on: Apr 04, 2021 | 11:05 AM

ಮೈಸೂರು ಜಿಲ್ಲೆಯಲ್ಲಿ ಚಿತ್ರನಗರಿಯನ್ನು ನಿರ್ಮಿಸುವುದಕ್ಕೆ ಸರ್ಕಾರ ಆದೇಶ ಹೊರಡಿಸಿರುವ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸ್ಥಳ ಫಿಕ್ಸ್​; ವಾರ್ತಾ ಇಲಾಖೆ ಆಯುಕ್ತರಿಂದ ಸ್ಥಳ ಪರಿಶೀಲನೆ
ಮೈಸೂರಿನಲ್ಲಿ ಚಿತ್ರನಗರಿ ನಿರ್ಮಿಸಲು ಅಧಿಕಾರಿಗಳಿಂದ ಸ್ಥಳ ಪರಿಶೀಲನೆ
Follow us on

ಮೈಸೂರು: ಜಿಲ್ಲೆಯಲ್ಲಿ ಚಿತ್ರನಗರಿಯನ್ನು ನಿರ್ಮಿಸುವುದಕ್ಕೆ ಸರ್ಕಾರ ಆದೇಶ ಹೊರಡಿಸಿರುವ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್. ಹರ್ಷ ಸ್ಥಳಕ್ಕೆ ಆಗಮಿಸಿ ಹಿಮ್ಮಾವು ಸಮೀಪದಲ್ಲಿನ ಸ್ಥಳ ಪರಿಶೀಲನೆ ಮಾಡಿದ್ದಾರೆ. 2021-22ರ ಬಜೆಟ್​ನಲ್ಲಿ ಮುಖ್ಯಂತ್ರಿ ಬಿ.ಎಸ್​ ಯಡಿಯೂರಪ್ಪ ಘೋಷಿಸಿರುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ಕಾರ್ಯ ಚುರುಕಾಗಿ ನಡೆಯುತ್ತಿದೆ.

ಹಿಮ್ಮಾವು ಗ್ರಾಮದಲ್ಲಿರುವ ಜಾಗ ಚಿತ್ರ ಜನರಿಗೆ ಅತ್ಯಂತ ಸೂಕ್ತ ಜಾಗವಾಗಿದೆ. ಈ ಕಾರಣದಿಂದ ಮೂಲ ಸೌಕರ್ಯ ಒದಗಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಿಕೊಳ್ಳುವಂತೆ ಕೆಐಎಡಿಬಿ ಅಧಿಕಾರಿಗಳಿಗೆ ವಾರ್ತಾ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

ಸ್ಥಳ ಪರಿಶೀಲನೆಯ ನಂತರದಲ್ಲಿ ಜಾಗದ ದಾಖಲೆ, ಇತರ ವಿಷಯಗಳ ಕುರಿತು ವಾರ್ತಾ ಇಲಾಖೆ ಆಯುಕ್ತ ಹರ್ಷ ಜಾಗದ ವಿವರ ಪಡೆದಿದ್ದಾರೆ. ಏಪ್ರಿಲ್​ 7ರಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹಾಗೂ ಇತರ ಅಧಿಕಾರಿಗಳ ಜೊತೆ ಸಭೆ ಬಳಿಕ ಅಂತಿಮ ರೂಪುರೇಷೆ ಕೈಗೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

ಚಿತ್ರನಗರಿ ನಿರ್ಮಿಸುವ ಸ್ಥಳ

ಇದನ್ನೂ ಓದಿ: ಮೈಸೂರಿನಲ್ಲಿ ಚಿತ್ರನಗರಿ ಫೈನಲ್? ಸಿಎಂ ಅನುಮೋದನೆಯಷ್ಟೇ ಬಾಕಿ

ಮೈಸೂರಿನಲ್ಲೇ ಚಿತ್ರನಗರಿ ನಿರ್ಮಾಣ ಮಾಡಲು ನಿರ್ಧಾರ: ಸಚಿವ ಸಿ.ಸಿ. ಪಾಟೀಲ್