ಚಿಕ್ಕಬಳ್ಳಾಪುರ: ಹೊಸ ರೂಪದೊಂದಿಗೆ ಕಾರ್ಯಾಚರಣೆಗೆ ಇಳಿದ ಹಳೆ ಕೆಎಸ್​​ಆರ್​ಟಿಸಿ ಬಸ್​ಗಳು

ಹಳೆ ಕೆಎಸ್​ಆರ್​ಟಿಸಿ ಬಸ್​ಗಳನ್ನು ನವೀಕರಿಸುವ ಕಾರ್ಯ ಕೆಲವು ತಿಂಗಳ ಹಿಂದೆ ಆರಂಭವಾಗಿತ್ತು. ಅದರಂತೆ ಕೆಲವು ಬಸ್​ಗಳು ಹೊಸ ರೂಪ ಪಡೆದು ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಕಾರ್ಯಾಚರಣೆಗೆ ಇಳಿದಿವೆ.

ಚಿಕ್ಕಬಳ್ಳಾಪುರ: ಹೊಸ ರೂಪದೊಂದಿಗೆ ಕಾರ್ಯಾಚರಣೆಗೆ ಇಳಿದ ಹಳೆ ಕೆಎಸ್​​ಆರ್​ಟಿಸಿ ಬಸ್​ಗಳು
ಕೆಎಸ್​​ಆರ್​ಟಿಸಿ
Follow us
|

Updated on:Aug 07, 2023 | 6:32 PM

ಕೋಲಾರ/ ಚಿಕ್ಕಬಳ್ಳಾಪುರ, ಆಗಸ್ಟ್ 7: ಹಳೆ ಕೆಎಸ್​ಆರ್​ಟಿಸಿ (KSRTC) ಬಸ್​ಗಳು ಹೊಸ ರೂಪದೊಂದಿಗೆ ಕಾರ್ಯಾಚರಣೆ ಆರಂಭಿಸಿವೆ. ಬೆಂಗಳೂರಿನ (Bengaluru) ಕೆಂಗೇರಿಯಲ್ಲಿರುವ ಪ್ರಾದೇಶಿಕ ಕಾರ್ಯಾಗಾರದಲ್ಲಿ ನವೀಕರಿಸಿದ ಸುಮಾರು 45 ಬಸ್​ಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿಕ್ಕಬಳ್ಳಾಪುರ (Chikkaballapur) ಮತ್ತು ಕೋಲಾರ (Kolar) ವಿಭಾಗಗಳಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.

ಕೆಎಸ್​​ಆರ್​​ಟಿಸಿ ಚಿಕ್ಕಬಳ್ಳಾಪುರ ವಿಭಾಗದ ಮೂಲಗಳ ಪ್ರಕಾರ, ವಿಭಾಗಕ್ಕೆ ಸೇರಿದ ವಿವಿಧ ಡಿಪೋಗಳಲ್ಲಿ 14 ನವೀಕರಿಸಿದ ಬಸ್ಸುಗಳನ್ನು ಬಳಸಲಾಗುತ್ತಿದೆ. ಕೋಲಾರದಲ್ಲಿ ಒಟ್ಟು 20 ನವೀಕರಿಸಿದ ಬಸ್ಸುಗಳನ್ನು ಸೇವೆಗೆ ಬಳಸಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿನ್ನು ಕೆಎಸ್​ಆರ್​ಟಿಸಿ ಬಸ್​​ಗಳು ಎಡ ಬದಿಯ ಲೇನ್​ನಲ್ಲೇ ಸಂಚರಿಸಬೇಕು

ಸಾಮಾನ್ಯವಾಗಿ, ಒಂಬತ್ತು ಲಕ್ಷ ಕಿಲೋಮೀಟರ್​ಗಿಂತ ಹೆಚ್ಚು ಚಲಿಸಿದ ಬಸ್ಸುಗಳನ್ನು ಗುಜರಿ ಬಸ್​ಗಳೆಂದು ಪರಿಗಣಿಸಲಾಗುತ್ತದೆ. ಆದರೆ, ಶಕ್ತಿ ಯೋಜನೆ ಜಾರಿ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾದ ಹಿನ್ನೆಲೆ ಹೆಚ್ಚುವರಿ ಬಸ್​ಗಳನ್ನು ಕಾರ್ಯಾಚರಣೆ ನಡೆಸುವುದು ಅನಿವಾರ್ಯವಾಗಿತ್ತು. ಹೀಗಾಗಿ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೊಸ ಬಸ್​ಗಳ ಖರೀದಿ ಬದಲು ಹಳೇ ಬಸ್ಸುಗಳನ್ನು ನವೀಕರಿಸಲು ಕೆಎಸ್ಆರ್​ಟಿಸಿ ನಿರ್ಧರಿಸಿತ್ತು.

ನವೀಕರಿಸಿದ ಬಸ್​ಗಳ ಬಗ್ಗೆ ಮಾತನಾಡಿದ ಚಿಕ್ಕಬಳ್ಳಾಪುರದ ಕೆಎಸ್​ಆರ್​ಟಿಸಿ ಪ್ರಭಾರ ಡಿಪೋ ಮ್ಯಾನೇಜರ್ ಶಿಲ್ಪಾ, ನವೀಕರಿಸಿದ ಬಸ್​ಗಳನ್ನು ಇನ್ನೂ ಒಂದೂವರೆಯಿಂದ ಎರಡು ಲಕ್ಷ ಕಿಲೋಮೀಟರ್ ವರೆಗೆ ಓಡಿಸಬಹುದು. ಅಂತಹ ಆರು ಬಸ್ಸುಗಳನ್ನು ಚಿಕ್ಕಬಳ್ಳಾಪುರ ಡಿಪೋವೇ ನಿರ್ವಹಿಸುತ್ತಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Mon, 7 August 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ