ಕಾರಿನ ಮೇಲೆ ಉರುಳಿಬಿದ್ದ ಹಳೆಯ ಮರ: ತಂದೆ-ಮಗ ಸ್ಥಳದಲ್ಲೇ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿಬಿದ್ದು ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾಗಿದ್ದಾರೆ. ಚಾಮರಾಜನಗರ ತಾಲೂಕು ಸಂತೇಮರಹಳ್ಳಿ ಸಮೀಪ ಹೆಗ್ಗವಾಡಿ ಕ್ರಾಸ್ ಬಳಿ ಈ ವಿರಳ ಘಟನೆ ನಡೆದಿದೆ.

ಕಾರಿನ ಮೇಲೆ ಉರುಳಿಬಿದ್ದ ಹಳೆಯ ಮರ: ತಂದೆ-ಮಗ ಸ್ಥಳದಲ್ಲೇ ದಾರುಣ ಸಾವು
ಕಾರಿನ ಮೇಲೆ ಉರುಳಿಬಿದ್ದ ಹಳೆಯ ಮರ: ಇಬ್ಬರು ಸ್ಥಳದಲ್ಲೇ ದಾರುಣ ಸಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 05, 2022 | 8:28 PM

ಚಾಮರಾಜನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿಬಿದ್ದು (tree fall) ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾಗಿದ್ದಾರೆ. ಚಾಮರಾಜನಗರ (chamarajanagar) ತಾಲೂಕು ಸಂತೇಮರಹಳ್ಳಿ ಸಮೀಪ ಹೆಗ್ಗವಾಡಿ ಕ್ರಾಸ್ ಬಳಿ ಈ ವಿರಳ ಘಟನೆ ನಡೆದಿದೆ. ಕುದೇರು ರಸ್ತೆಯಲ್ಲಿ ಚಲಿಸುತ್ತಿದ್ದ ಮಾರುತಿ ಒಮ್ನಿ ಕಾರಿನ (maruti omni car) ಮೇಲೆಯೇ ಹಳೆಯ ಮರ ಉರುಳಿದೆ. ಮೃತರ ಗುರುತು ಪತ್ತೆಯಾಗಿದ್ದು, ಹೊನ್ನೂರಿನ ಹೆಚ್.ಬಿ. ರಾಜು(49) ಮತ್ತು ಅವರ ಪುತ್ರ ಶರತ್(22) ಸಾವನ್ನಪ್ಪಿದವರು.

ರಾಜು ಯಳಂದೂರಿನಲ್ಲಿ ಹೋಲ್​ಸೇಲ್​ ಅಂಗಡಿ ನಡೆಸುತ್ತಿದ್ದರು. ಮರ ಬಿದ್ದ ರಭಸಕ್ಕೆ ಓಮ್ನಿ ವ್ಯಾನ್​ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಳೆದೆರಡು ದಿನದಿಂದ ಒಂದೇ ಸಮನೆ ಮಳೆಯಾಗುತ್ತಿದ್ದು ಮರ ನೀರಿಗೆ ನೆನೆದಿತ್ತು. ಹಳೆ ಮರವಾಗಿದ್ದರಿಂದ ಇಂದು ಬಿದ್ದುಹೋಗಿದೆ. ಕುದೇರು ಕಡೆಯಿಂದ ಬರುತ್ತಿದ್ದ ಮಾರುತಿ ಒಮ್ನಿ ಕಾರಿನ ಮೇಲೆ ಆಲದ ಮರ ಉರುಳಿಬಿದ್ದಿದೆ. ಸಂತೇಮರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹತ್ತಾರು ವರ್ಷ ಬಾಳಿದ್ದ ಮರ ಒಂದೆರಡು ಕ್ಷಣ ತಡವಾಗಿ ಬಿದ್ದಿದ್ದರೆ… ಬಹುಶಃ ಅಪ್ಪ-ಮಗ ಬದುಕುಳಿಯುತ್ತಿದ್ದರಾ? ಆದರೆ ವಿಧಿ ಬರಹ ಹೀಗಿತ್ತು.

ಮಗನ ಮೇಲೆ ಚಿರತೆ ದಾಳಿ; ಸುದ್ದಿ ತಿಳಿದು ತಾಯಿ ಹೃದಯಾಘಾತದಿಂದ ಸಾವು

ಬೆಳಗಾವಿ: ಮಗನ ಮೇಲೆ ಚಿರತೆ ದಾಳಿ ಮಾಡಿದೆ ಎಂಬ ಸುದ್ದಿ ತಿಳಿದು ತಾಯಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಕೆ.ಹೆಚ್.ಖನಗಾವಿ ಗ್ರಾಮದಲ್ಲಿ ನಡೆದಿದೆ. ತಾಯಿ ಶಾಂತಾ ಮಿರಜಕರ್(65) ಮೃತ ದುರ್ದೈವಿ. ಕಟ್ಟಡ ಕಾರ್ಮಿಕ ಜಾಧವ್​ನಗರದಲ್ಲಿ ಸಿದ್ದರಾಯಿ ಮಿರಜಕರ್ ಎಂಬುವರ ಮೇಲೆ ​ಚಿರತೆ ದಾಳಿ ಮಾಡಿತ್ತು. ಇದರಿಂದ ಗಾಯಗೊಂಡ ಸಿದ್ದರಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಬರುತ್ತಿದ್ದರು. ಈ ವೇಳೆ ಮಗನ ಮೇಲೆ ಚಿರತೆ ದಾಳಿ ಮಾಡಿದೆ ಎಂದು ಸುದ್ದಿ ತಿಳಿದು ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ದೇವಸ್ಥಾನದ ಮುಂಭಾಗದ ಕಲ್ಲಿನ ಕಂಬ ಬಿದ್ದು ವ್ಯಕ್ತಿ ಸಾವು

ಯಾದಗಿರಿ: ದೇವಸ್ಥಾನದ ಮುಂಭಾಗದ ಕಲ್ಲಿನ ಕಂಬ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆ ವಡಗೇರ ತಾಲೂಕಿನ ಉಳ್ಳೇಸುಗೂರು ಗ್ರಾಮದಲ್ಲಿ ನಡೆದಿದೆ. ಉಳ್ಳೇಸುಗೂರು ಗ್ರಾಮದಲ್ಲಿ ದೇವಪ್ಪ(40) ಮೃತ ದುರ್ದೈವಿ.

ಶ್ರಾವಣ ಮಾಸ ಹಿನ್ನೆಲೆ ಪ್ರತಿ ದಿನ ಗ್ರಾಮದ ಆಂಜನೇಯ ದೇಗುಲದ ಮುಂದೆ ಭಜನೆ ಮಾಡುತ್ತಿದ್ದರು. ಎಂದಿನಂತೆ ಇಂದು ಕೂಡ ಬಜನೆ ಮಾಡುವಾಗ ದೇವಪ್ಪ ಮೈಮೇಲೆ ಕಲ್ಲಿನ ಕಂಬ ಬಿದ್ದಿದೆ. ಪರಿಣಾಮ ದೇವಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಡಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:15 pm, Fri, 5 August 22

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು