Omicron: ಕರ್ನಾಟಕದಲ್ಲಿ 130 ವಿದ್ಯಾರ್ಥಿಗಳಿಗೆ ಕೊವಿಡ್ ಸೋಂಕು; ಮತ್ತೆ ಶಾಲೆ ಮುಚ್ಚುವ ಸುಳಿವು ನೀಡಿದ ಸರ್ಕಾರ

Karnataka Covid-19 Cases: ಕೇರಳದಿಂದ ಹಿಂತಿರುಗಿದ ಎಂ.ವಿ. ಕಾವೂರಿನ ಶೆಟ್ಟಿ ಕಾಲೇಜಿನ 173 ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಗಿದೆ. ಆರಂಭದಲ್ಲಿ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಪತ್ತೆಯಾಯಿತು, ನಂತರ ಇನ್ನೂ ನಾಲ್ಕು ವಿದ್ಯಾರ್ಥಿಗಳಲ್ಲಿ ಕೊವಿಡ್ ಸೋಂಕು ದೃಢಪಟ್ಟಿತು.

Omicron: ಕರ್ನಾಟಕದಲ್ಲಿ 130 ವಿದ್ಯಾರ್ಥಿಗಳಿಗೆ ಕೊವಿಡ್ ಸೋಂಕು; ಮತ್ತೆ ಶಾಲೆ ಮುಚ್ಚುವ ಸುಳಿವು ನೀಡಿದ ಸರ್ಕಾರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 07, 2021 | 4:26 PM

ಬೆಂಗಳೂರು: ಕರ್ನಾಟಕದ ಸಾರ್ವಜನಿಕ ಶಿಕ್ಷಣ ಆಯುಕ್ತರ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಇದುವರೆಗೆ ಕರ್ನಾಟಕದಾದ್ಯಂತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯಲ್ಲಿ ಓದುತ್ತಿರುವ 130 ಮಕ್ಕಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಚಿಕ್ಕಮಗಳೂರಿನ ಜವಾಹರ ನವೋದಯ ವಿದ್ಯಾಲಯ ವಸತಿ ಶಾಲೆಯಲ್ಲಿ ಗರಿಷ್ಠ 92 ಪ್ರಕರಣಗಳು ವರದಿಯಾಗಿವೆ. ಈ ನಡುವೆ, ಕೇರಳದ ಗಡಿಯಲ್ಲಿರುವ ಚಾಮರಾಜನಗರ ಜಿಲ್ಲೆಯಲ್ಲಿ 7 ಮತ್ತು ಕೊಡಗು ಜಿಲ್ಲೆಯಲ್ಲಿ 11 ವಿದ್ಯಾರ್ಥಿಗಳಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಕೇವಲ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಸೋಮವಾರ 9 ವಿದ್ಯಾರ್ಥಿಗಳಿಗೆ ಕೊವಿಡ್ ಪಾಸಿಟಿವ್ ದೃಫಟ್ಟಿರುವುದರಿಂದ ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜನ್ನು ಸೀಲ್ ಮಾಡಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್ ಮಾತನಾಡಿ, ಕೇರಳದಿಂದ ಹಿಂತಿರುಗಿದ ಎಂ.ವಿ. ಕಾವೂರಿನ ಶೆಟ್ಟಿ ಕಾಲೇಜಿನ 173 ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಗಿದೆ. ಆರಂಭದಲ್ಲಿ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಪತ್ತೆಯಾಯಿತು. ನಂತರ ಇನ್ನೂ ನಾಲ್ಕು ವಿದ್ಯಾರ್ಥಿಗಳಲ್ಲಿ ಕೊವಿಡ್ ಸೋಂಕು ದೃಢಪಟ್ಟಿತು ಎಂದಿದ್ದಾರೆ.

ಸೋಮವಾರ ಇನ್ನೂ ಇಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಎಲ್ಲಾ ಸೋಂಕಿತ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಅವರ ಪ್ರಾಥಮಿಕ ಸಂಪರ್ಕಗಳನ್ನು ಸಹ ಟ್ರ್ಯಾಕ್ ಮಾಡಲಾಗಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಕೋವಿಡ್ -19 ಗಾಗಿ ಮರುಪರೀಕ್ಷೆ ಮಾಡಲಾಗುವುದು. ವಿದ್ಯಾರ್ಥಿಗಳ ಸ್ವ್ಯಾಬ್ ಮಾದರಿಗಳನ್ನು ಸಹ ಜೀನೋಮಿಕ್ ಪರೀಕ್ಷೆಗೆ ಕಳುಹಿಸಲಾಗಿದೆ.

ಕರ್ನಾಟಕದ ಶಾಲೆಗಳಲ್ಲಿ ಮತ್ತೆ ಕೊರೊನಾ ಉಲ್ಬಣವಾಗಿರುವುದರಿಂದ ಶಿಕ್ಷಣ ಸಚಿವರು ಮತ್ತೆ ಶಾಲೆಗಳನ್ನು ಮುಚ್ಚುವ ಸುಳಿವು ನೀಡಿದ್ದಾರೆ. ಹೊಸ ಒಮಿಕ್ರಾನ್ ರೂಪಾಂತರದ ಭಯ ಹೆಚ್ಚಾಗಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ, ಕರ್ನಾಟಕದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚುವ ಸುಳಿವು ನೀಡಿದ್ದಾರೆ. ಆದರೆ, ಸದ್ಯಕ್ಕೆ ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

ಈಗಾಗಲೇ ಚಿಕ್ಕಮಗಳೂರಿನ ವಸತಿ ಶಾಲೆಯಲ್ಲಿ 92 ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಹೆಚ್ಚುತ್ತಿರುವ COVID-19 ಕ್ಲಸ್ಟರ್‌ನ ಹರಡುವಿಕೆಯನ್ನು ಎದುರಿಸಲು ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ಸ್ವ್ಯಾಬ್‌ಗಳನ್ನು ಸಂಗ್ರಹಿಸಲಾಗಿದೆ. ಹಾಗೇ, ಶಾಲಾ-ಕಾಲೇಜುಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಶಾಲೆಗಳಿಗೆ ಪ್ರತ್ಯೇಕ ಕೊರೊನಾ ಮಾರ್ಗಸೂಚಿ ಪ್ರಕಟಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟದಿಂದ ಮನವಿ

ನರಸಿಂಹರಾಜಪುರದ ಶಾಲೆಯ 35 ವಿದ್ಯಾರ್ಥಿಗಳಿಗೆ ಕೊವಿಡ್ ಪಾಸಿಟಿವ್; ಸೋಂಕಿತ ಮಕ್ಕಳ ಸಂಖ್ಯೆ 94ಕ್ಕೆ ಏರಿಕೆ

Published On - 4:24 pm, Tue, 7 December 21

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು