AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 New Guidelines: ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ

Covid 19 Karnataka Guidelines: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ.

Covid 19 New Guidelines: ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ
ಒಮಿಕ್ರಾನ್
TV9 Web
| Edited By: |

Updated on:Dec 03, 2021 | 4:23 PM

Share

Covid 19 Karnataka Guidelines: ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಸಭಯ ಬಳಿಕೆ ನೂತನ ನಿಯಮಾವಳಿಗಳ ಮಾಹಿತಿ ನೀಡಿದ ಕಂದಾಯ ಸಚಿವ ಆರ್​.ಅಶೋಕ್, ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು ಪ್ರಕಟಿಸಿದರು.  ಸರ್ಕಾರ ಮಾಡಿಕೊಳ್ಳುತ್ತಿರುವ ಸಿದ್ಧತೆ ಮತ್ತು ಹೊಸ ನಿಯಮಾವಳಿಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು.

ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ ಸಮಾರಂಭಕ್ಕೆ ಅವಕಾಶವಿಲ್ಲ ಸಿನಿಮಾ ಹಾಲ್, ಮಾಲ್‌ನಲ್ಲಿ, ಶಾಲೆಗಳಲ್ಲಿ ಕೆಲಸ ಮಾಡುವವರು ಮತ್ತು ಮಕ್ಕಳ ಪೋಷಕರು 2 ಡೋಸ್ ಕಡ್ಡಾಯವಾಗಿ ಪಡೆಿದರಬೇಕು. ಮದುವೆಗಳಲ್ಲಿ 500ರೊಳಗೆ ಮಾತ್ರ ಜನ ಸೇರಬೇಕು. ಪ್ರತಿನಿತ್ಯ 1 ಲಕ್ಷ ಕೊವಿಡ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ 2ನೇ ಅಲೆ ವೇಳೆ ಸಿದ್ಧಗೊಂಡಿದ್ದ ಕೊವಿಡ್ ಬೆಡ್, ಐಸಿಯು ಬೆಡ್‌ಗಳನ್ನು ಮತ್ತೆ ಸಿದ್ಧಪಡಿಸಲು ಸೂಚಿಸಲಾಗಿದೆ. ಆಕ್ಸಿಜನ್ ಪ್ಲ್ಯಾಂಟ್ ಸಿದ್ಧಪಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ. ರಾಜ್ಯದಲ್ಲಿ ಮತ್ತೆ ಕಂಟ್ರೋಲ್ ರೂಂ ಆರಂಭಿಸಲಾಗುವುದು.  ಅದಕ್ಕೆ ಬೇಕಾದ ಸಿಬ್ಬಂದಿ ನಿಯೋಜಿಸಲು ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಔಷಧಿಗಳನ್ನು ಮುಂಚಿತವಾಗಿಯೇ ಖರೀದಿಸುವಂತೆ ಸೂಚಿಸಲಾಗಿದೆ ಎಂದರು.

ರಾಜ್ಯದಲ್ಲಿ ಕೊವಿಡ್​ ಉಸ್ತುವಾರಿಗಾಗಿ ಶಿಲ್ಪಾ ನಾಗರಾಜ್ ಅವರನ್ನು ಸರ್ವೆಲೈನ್ಸ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕೊವಿಡ್ ಟೆಸ್ಟ್‌ಗೆ ₹ 500 ದರ ನಿಗದಿ ಮಾಡಲಾಗಿದೆ. ಅಬೇಟ್‌ ಟೆಸ್ಟ್​ಗೆ ₹ 3 ಸಾವಿರ ನಿಗದಿ ಮಾಡಲಾಗಿದೆ. ಮೊದಲೇ ಸಮಯದ ವೇಳಾಪಟ್ಟಿ ನಿಗದಿ ಮಾಡಿರುತ್ತೇವೆ. ಏರ್‌ಪೋರ್ಟ್‌ನಲ್ಲಿಯೂ ಕಟ್ಟುನಿಟ್ಟಾಗಿ ಕೊವಿಡ್ ಟೆಸ್ಟ್ ನಡೆಸಲಾಗುವುದು. ನೆಗೆಟಿವ್ ವರದಿ ಬಂದ ನಂತರ ಏರ್‌ಪೋರ್ಟ್‌ನಿಂದ ಹೊರಕ್ಕೆ ಕಳಿಸಲಾಗುವುದು. ಬೆಳಗಾವಿ ಸುವರ್ಣಸೌಧದಲ್ಲಿಯೇ ಅಧಿವೇಶನ ನಡೆಯುತ್ತದೆ ಎಂದು ತಿಳಿಸಿದರು.

ಪ್ರತ್ಯೇಕ ಮಾರ್ಗಸೂಚಿಗೆ ಮುಖ್ಯಮಂತ್ರಿ ಸೂಚನೆ ವಿಧಾನ ಮಂಡಲದ ಚಳಿಗಾಲದ ಅಧಿವೇಶನಕ್ಕೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು ಸೂಚನೆ ನೀಡಿದರು. ಕಟ್ಟುನಿಟ್ಟಿನ ನಿಯಮಗಳ ನಡುವೆ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ. ಒಮಿಕ್ರಾನ್ ಬಗ್ಗೆ ತಜ್ಞರಿಂದ ಬೊಮ್ಮಾಯಿ ಮಾಹಿತಿ ಸಂಗ್ರಹಿಸಿದರು. ಒಮಿಕ್ರಾನ್ ವೈರಸ್‌ನ ತೀವ್ರತೆ ಹೇಗಿರುತ್ತದೆ? ಇದನ್ನು ಹೇಗೆ ನಿಯಂತ್ರಿಸಬೇಕು ಎಂಬ ಬಗ್ಗೆ ವಿವರಣೆ ನೀಡುವಂತೆ ಮುಖ್ಯಮಂತ್ರಿ ಕೋರಿದರು. ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಿಸಬೇಕು. ಅಭಿಯಾನಕ್ಕೆ ಹೊಸ ವೇಗ ನೀಡಬೇಕು ಎಂದು ತಜ್ಞರು ಸಭೆಯಲ್ಲಿ ಸಲಹೆ ಮಾಡಿದರು.

ಸಭೆಯಲ್ಲಿ ಸಚಿವರಾದ ಡಾ.ಕೆ.ಸುಧಾಕರ್, ಗೋವಿಂದ ಕಾರಜೋಳ, ಡಾ.ಅಶ್ವತ್ಥ್ ನಾರಾಯಣ, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ತಜ್ಞ ವೈದ್ಯರಾದ ಡಾ.ಎಂ.ಕೆ.ಸುದರ್ಶನ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಲಸಿಕೆ ಅಭಿಯಾನಕ್ಕೆ ಇನ್ನಷ್ಟು ವೇಗ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದಲ್ಲಿ ಎಲ್ಲರಿಗೂ ಲಸಿಕೆ ತಲುಪುವಂತೆ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ: Omicron: ಒಮಿಕ್ರಾನ್ ನಿರ್ವಹಣೆ: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ಇದನ್ನೂ ಓದಿ: ವ್ಯಾಕ್ಸಿನೇಷನ್, ಮುಂಚಿನ ಸೋಂಕುಗಳ ಕಾರಣದಿಂದಾಗಿ ಒಮಿಕ್ರಾನ್ ತೀವ್ರತೆ ಕಡಿಮೆ: ಆರೋಗ್ಯ ಸಚಿವಾಲಯ

Published On - 3:39 pm, Fri, 3 December 21