AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್​ 1 ರಂದು ಐಟಿಬಿಟಿ ಕಂಪನಿಗಳು ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿಕೆ ಶಿವಕುಮಾರ್​

ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ಬರುವ ನವೆಂಬರ್​ 1ಕ್ಕೆ 50 ವರ್ಷವಾಗುತ್ತದೆ. ಈ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕಾರ್ಖಾನೆಗಳು, ಐಟಿಬಿಟಿ ಕಚೇರಿಗಳಲ್ಲಿ ಕನ್ನಡ ಬಾವುಟ ಹಾರಿಸುವುದು ಕಡ್ಡಾಯವೆಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದ್ದಾರೆ.

ನವೆಂಬರ್​ 1 ರಂದು ಐಟಿಬಿಟಿ ಕಂಪನಿಗಳು ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿಕೆ ಶಿವಕುಮಾರ್​
ಡಿಕೆ ಶಿವಕುಮಾರ್​
Anil Kalkere
| Updated By: ವಿವೇಕ ಬಿರಾದಾರ|

Updated on:Oct 11, 2024 | 11:00 AM

Share

ಬೆಂಗಳೂರು, ಅಕ್ಟೋಬರ್​ 11: 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು (Kannada Rajyostva) ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ನವೆಂಬರ್​ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ನವೆಂಬರ್ 1​ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ (Kannada Flag) ಹಾರಿಸಲೇಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಜಿಲ್ಲೆಯಲ್ಲಿ ಶೇ 50 ರಷ್ಟು ಜನ ಹೊರಗಿನಿಂದ ಬಂದವರಿದ್ದಾರೆ. ಹೊರಗಿನಿಂದ ಬಂದವರು ಸಹ ಕನ್ನಡ ಕಲಿಯಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮಾಡಬೇಕು. ರಾಷ್ಟ್ರಧ್ವಜದ ರೀತಿ ಕನ್ನಡ ಬಾವುಟಕ್ಕೆ ಗೌರವ ಕೊಡಬೇಕು. ಬಾವುಟ ಹಾರಿಸುವ ಮೂಲಕ ಶ್ರದ್ಧಾ, ಭಕ್ತಿ ಗೌರವ ತೋರಿಸಬೇಕು ಎಂದರು.

ಇದನ್ನೂ ಓದಿ: 69 ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲು 50 ಜನರ ಸಮಿತಿ ರಚನೆ

ಬೆಂಗಳೂರಿನಲ್ಲಿ ಎಲ್ಲರೂ ರಾಜೋತ್ಸವ ಆಚರಣೆ ಮಾಡುತ್ತಾರೆ. ರಾಜ್ಯೋತ್ಸವ ಆಚರಣೆಗೆ ಯಾವ ಕನ್ನಡ ಸಂಘಟನೆಗಳು ಕೂಡ ಒತ್ತಡ ಹೇರಬಾರದು. ಸರ್ಕಾರವೇ ಆದೇಶಿಸಿದೆ. ಅದರಂತೆ ರಾಜೋತ್ಸವ ಆಚರಣೆ ಮಾಡುತ್ತಾರೆ. ಆಚರಣೆ ಮಾಡದ ಸಂಸ್ಥೆ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಅಂತ ಸರ್ಕಾರ ನಿರ್ಧಾರ ಮಾಡುತ್ತೆ. ಕನ್ನಡ ಸಂಘಟನೆಗಳು ಖಾಸಗಿ ಸಂಸ್ಥೆಗಳ ಬಳಿ ಹೋಗಿ ಗಲಾಟೆ, ಬೆದರಿಸುವುದು ಬೇಡ ಎಂದು ಹೇಳಿದರು.

ಕೊರೊನಾ ಅಕ್ರಮ ಕುರಿತ ತನಿಖೆಗೆ ಎಸ್ಐಟಿ ರಚನೆ ವಿಚಾರವಾಗಿ ಮಾತನಾಡಿದ ಅವರು, ನನ್ನ ನೇತೃತ್ವದಲ್ಲಿ ಸಬ್ ಕಮಿಟಿ ಮಾಡಲಾಗಿದೆ. ಹಬ್ಬದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ. ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ನಾಡಿದ್ದು ಮಾತನಾಡುತ್ತೇನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:55 am, Fri, 11 October 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!