ಕೃಷಿ ಮಸೂದೆ ವಾಪಸ್: ಒಣ ಪ್ರತಿಷ್ಠೆಗೆ ಒಳಗಾಗದೆ ಕಾಯ್ದೆ ವಾಪಸ್; ಪ್ರಧಾನಿ ಮೋದಿಯನ್ನು ಅಭಿನಂದಿಸುವೆ- ಮಾಜಿ ಸಿಎಂ ಬಿಎಸ್ವೈ
ನಮ್ಮದು ಸ್ಪಂದನ ಶೀಲ ಸರ್ಕಾರ. ರೈತರ ಒತ್ತಾಯಕ್ಕೆ ಸ್ಪಂದನೆ ಮಾಡಿದ್ದಾರೆ. ಪಂಚರಾಜ್ಯ ಚುನಾವಣಾ ಹಿನ್ನೆಲೆ ಕಾಯ್ದೆ ವಾಪಸ್ ಪಡೆದಿದ್ದಾರಾ ಎಂಬ ವಿಚಾರವಾಗಿ ಮಾತನಾಡಿದ ಬೊಮ್ಮಾಯಿ ಪಂಚರಾಜ್ಯ ಚುನಾವಣೆಗೂ ಇದಕ್ಕೂ ಸಂಬಂಧ ಇಲ್ಲ. ಹಿಂದೆ ನಡೆದ ಹರಿಯಾಣ, ಪಂಜಾಬ್ ಉಪಚುನಾವಣೆಯಲ್ಲಿ ಜಯ ಸಾಧಿಸಿದ್ದೇವೆ. ಮಸೂದೆಗಳು ಇನ್ನೊಂದು ಸರಿ ಚರ್ಚೆಯಾಗ್ಬೇಕು ಎಂದಿದ್ದಾರೆ.
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ದಿಢೀರನೆ ವಿವಾದಿತ ಮೂರು ಕೃಷಿ ಮಸೂದೆಗಳನ್ನು ವಾಪಸ್ ತೆಗೆದುಕೊಳ್ಳುವ ನಿರ್ಧಾರ ಪ್ರಕಟಿಸಿದ್ದಾರೆ. ಬಿಜೆಪಿ ನಾಯಕರು ಮತ್ತು ಆಡಳಿತಾರೂಢ ಬಿಜೆಪಿ ಸರ್ಕಾರದ ಮಂತ್ರಿಗಳು ಪ್ರಧಾನಿ ಮೋದಿಯ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಯಾವುದೇ ಒಣ ಪ್ರತಿಷ್ಟೆಗೆ ಒಳಗಾಗದೇ ವಿವಾದಿತ ಕಾಯ್ದೆ ವಾಪಸ್ ಪಡೆದಿದ್ದಾರೆ. ಇದಕ್ಕಾಗಿ ಪ್ರಧಾನಿ ಮೋದಿಯವರನ್ನು ಅಭಿನಂದಿಸುವೆ ಎಂದು ಮಾಜಿ ಸಿಎಂ B.S.ಯಡಿಯೂರಪ್ಪ ಹೇಳಿದ್ದಾರೆ. ಇನ್ನು ರೈತ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿಯಿತಾ ಎಂಬ ಪ್ರಶ್ನೆಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಮಣಿಯುವ ಪ್ರಶ್ನೆ ಇಲ್ಲ ಎಂದಿದ್ದಾರೆ.
ದೇಶದಲ್ಲಿ ಬಿಜೆಪಿಗೆ ಎದುರಾಳಿಗಳೇ ಇಲ್ಲ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮಾಜಿ ಸಿಎಂ ಬಿಎಸ್ ವೈ ಅವರು ವಿವಾದಿತ ಮೂರು ಕೃಷಿ ಕಾಯ್ದೆ ವಾಪಸ್ ಪಡೆದಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಒಣ ಪ್ರತಿಷ್ಠೆಗೆ ಒಳಗಾಗದೆ ಕಾಯ್ದೆ ವಾಪಸ್ ಪಡೆದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಈ ತೀರ್ಮಾನ ಮಾಡಿರುವುದಿಲ್ಲ. ಏಕೆಂದರೆ ದೇಶದಲ್ಲಿ ಬಿಜೆಪಿಗೆ ಎದುರಾಳಿಗಳೇ ಇಲ್ಲ. ಉತ್ತರ ಪ್ರದೇಶ ಚುನಾವಣೆಯನ್ನ ನಾವೇ ಗೆಲ್ತಿವಿ. ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಕಾಯ್ದೆಯಲ್ಲಿ ಲೋಪದೋಷ ಇಲ್ಲ ಅಂತ ಹೇಳಿದ್ದು ನಿಜ. ಆದರೆ ರೈತರ ಹೋರಾಟಕ್ಕೆ ಬೆಲೆ ಕೊಟ್ಟಿದ್ದೇವೆ. ತಡವಾಗಿಯಾದ್ರೂ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಕೃಷಿ ಕಾಯ್ದೆ ಹೋರಾಟದಲ್ಲಿ ರೈತರ ಸಾವಿಗೂ, ಕಾಯ್ದೆಗೂ ಸಂಬಂಧವಿಲ್ಲ. ಆದ್ರೂ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತ ರೈತರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ವ್ಯಾಖ್ಯಾನ: ಇನ್ನು ರೈತ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿಯಿತಾ ಎಂಬ ಪ್ರಶ್ನೆಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಮಣಿಯುವ ಪ್ರಶ್ನೆ ಇಲ್ಲ. ಈ ಪ್ರಕ್ರಿಯೆಯಿಂದ ನಮ್ಮ ದೇಶದಲ್ಲಿ ಜಾಗತೀಕರಣ, ಉದಾರೀಕರಣ ಪ್ರಾರಂಭವಾಗಿದೆ. ಎಲ್ಲ ರಾಜ್ಯಗಳ ಅಭಿಪ್ರಾಯ ಪಡೆಯಲಾಗಿತ್ತು. ಪಂಜಾಬ್ ಹರಿಯಾಣ ಭಾಗದ ರೈತರು ರೆಗ್ಯುಲೇಟರಿ ಮಾರ್ಕೆಟ್ ನಲ್ಲಿಯೇ ಇರಲಿ ಅನೋ ಒತ್ತಾಯ ಮಾಡಿದ್ದರು. ರೈತರ ಜೊತೆ ಮಾತ್ನಾಡಿ ಕನ್ವೆನ್ಸ್ ಮಾಡಿದ್ರು. ಆದ್ರೆ ರೈತರು ಕನ್ವೆನ್ಸ್ ಆಗಿಲ್ಲ. ಹೀಗಾಗಿ ಈ ಮೂರು ಖಾಯ್ದೆಯನ್ನ ಪ್ರಧಾನಿ ಮೋದಿ ಹಿಂಪಡೆದಿದ್ದಾರೆ.
ನಮ್ಮದು ಸ್ಪಂದನ ಶೀಲ ಸರ್ಕಾರ. ರೈತರ ಒತ್ತಾಯಕ್ಕೆ ಸ್ಪಂದನೆ ಮಾಡಿದ್ದಾರೆ. ಪಂಚರಾಜ್ಯ ಚುನಾವಣಾ ಹಿನ್ನೆಲೆ ಕಾಯ್ದೆ ವಾಪಸ್ ಪಡೆದಿದ್ದಾರಾ ಎಂಬ ವಿಚಾರವಾಗಿ ಮಾತನಾಡಿದ ಬೊಮ್ಮಾಯಿ ಪಂಚರಾಜ್ಯ ಚುನಾವಣೆಗೂ ಇದಕ್ಕೂ ಸಂಬಂಧ ಇಲ್ಲ. ಹಿಂದೆ ನಡೆದ ಹರಿಯಾಣ, ಪಂಜಾಬ್ ಉಪಚುನಾವಣೆಯಲ್ಲಿ ಜಯ ಸಾಧಿಸಿದ್ದೇವೆ. ಮಸೂದೆಗಳು ಇನ್ನೊಂದು ಸರಿ ಚರ್ಚೆಯಾಗ್ಬೇಕು. ಹಿಂದೆ ತೆಗೆದುಕೊಂಡ್ರೆ ವಿಶ್ವಾಸ ಬರುತ್ತೆ ಅನ್ನೋ ದೃಷ್ಟಿಯಿಂದ ವಾಪಸ್ ತೆಗೆದುಕೊಂಡಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರಿನಲ್ಲಿ ವ್ಯಾಖ್ಯಾನಿಸಿದ್ದಾರೆ.
ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾಧ್ಯಮ ಪ್ರಕಟಣೆ: ಕರ್ನಾಟಕ ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾಧ್ಯಮ ಪ್ರಕಟಣೆ ನೀಡಿದ್ದು, ಸಾರಾಂಶ ಹೀಗಿದೆ: ರೈತರಿಗೆ ಸಮಂಜಸವಾದ ದರದಲ್ಲಿ ಬೀಜಗಳನ್ನು ಒದಗಿಸಲು ಮತ್ತು ಸೂಕ್ಷ್ಮ ನೀರಾವರಿ, 22 ಕೋಟಿ ಮಣ್ಣಿನ ಆರೋಗ್ಯ ಕಾರ್ಡ್‌ಗಳಂತಹ ಸೌಲಭ್ಯಗಳನ್ನು ಒದಗಿಸಲು ನಾವು ಕೆಲಸ ಮಾಡಿದ್ದೇವೆ. ಇಂತಹ ಅಂಶಗಳು ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಕಾರಣವಾಗಿವೆ. ಆದಾಗ್ಯೂ, ಹೊಸ ಕಾನೂನುಗಳ ಪ್ರಯೋಜನಗಳ ಬಗ್ಗೆ ಕೆಲವು ವರ್ಗದವರಿಗೆ ಅರ್ಥಮಾಡಿಸಲು ಸಾಧ್ಯವಾಗದೇ ಇರುವುದರಿಂದ ಕೇಂದ್ರ ಸರ್ಕಾರ ಕೃಷಿ ಕಾಯಿದೆಗಳನ್ನು ಹಿಂದಕ್ಕೆ ತೆಗೆದುಕೊಳ್ಳಲು ನಿರ್ಧರಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Also Read: ಕೃಷಿ ಮಸೂದೆ ವಾಪಸ್: ಪ್ರಜಾಸತ್ತೆಯಲ್ಲಿ ಜನಶಕ್ತಿಯೇ ಅಂತಿಮ, ಇದು ರಾಜಕೀಯ ತೀರ್ಮಾನ- ವಿಪಕ್ಷ ನಾಯಕರುಗಳ ಪ್ರತಿಕ್ರಿಯೆ Also Read: PM Modi on Farm Laws: ಮೂರೂ ಕೃಷಿ ಮಸೂದೆಗಳು ವಾಪಸ್ ತೆಗೆದುಕೊಂಡು, ರೈತರ ಕ್ಷಮೆ ಕೋರಿದ ಪ್ರಧಾನಿ ನರೇಂದ್ರ ಮೋದಿ
Ex Cm Yadiyurappa Press Meet | ಮಾಜಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ | Tv9Kannada
Published On - 12:00 pm, Fri, 19 November 21