ಸೆಪ್ಟೆಂಬರ್ 14ರಂದು ರಾಜ್ಯದ 10 ಮಹಾನಗರ ಪಾಲಿಕೆ ಬಂದ್: ಪಾಲಿಕೆ ಸಿಬ್ಬಂದಿಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವಂತೆ ಪ್ರತಿಭಟನೆ
ಮಹಾನಗರ ಪಾಲಿಕೆ ಸಿಬ್ಬಂದಿಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಸೆಪ್ಟೆಂಬರ್ 14ರಂದು ರಾಜ್ಯದ 10 ಮಹಾನಗರ ಪಾಲಿಕೆಯ ಸಿಬ್ಬಂದಿ ಪ್ರತಿಭಟನೆ ಮಾಡುತ್ತಿದ್ದಾರೆ.

ಬೆಂಗಳೂರು: ಮಹಾನಗರ ಪಾಲಿಕೆ (Municipal corporation) ಸಿಬ್ಬಂದಿಗೂ ಆರೋಗ್ಯ ಸಂಜೀವಿನಿ (Arogya Sanjeevani) ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಸೆಪ್ಟೆಂಬರ್ 14ರಂದು ರಾಜ್ಯದ 10 ಮಹಾನಗರ ಪಾಲಿಕೆ ಯ ಸಿಬ್ಬಂದಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದ ಸೆಪ್ಟೆಂಬರ್ 14ರಂದು ರಾಜ್ಯದ 10 ಮಹಾನಗರ ಪಾಲಿಕೆ ಬಂದ್ ಆಗಲಿವೆ. ರಾಜ್ಯ ಸರ್ಕಾರಿ ನೌಕರರು ಮತ್ತು ಕುಟುಂಬಕ್ಕೆ ಆರೋಗ್ಯ ಸಂಜೀವಿನಿ ಜಾರಿಗೊಳಿಸುವಂತೆ, ಸಿಬ್ಬಂದಿ ಕರ್ತವ್ಯವನ್ನು ಬಹಿಷ್ಕರಿಸಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ವಿಜಯಪುರ, ಕಲಬುರಗಿ, ತುಮಕೂರು ಮಹಾನಗರ ಪಾಲಿಕೆಗಳು ಬಂದ್ ಆಗಲಿವೆ.
1. ದಾವಣಗೆರೆ ಮಹಾನಗರ ಪಾಲಿಕೆ ನೌಕರರ ಸಂಘ
2. ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ನೌಕರರ ಸಂಘ
3.ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘ
4.ಮಂಗಳೂರು ಮಹಾನಗರ ಪಾಲಿಕೆ ನೌಕರರ ಸಂಘ
5.ಕಲಬುರಗಿ ಮಹಾನಗರ ಪಾಲಿಕೆ ನೌಕರರ ಸಂಘ
6.ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘ
7.ಬೆಳಗಾವಿ ಮಹಾನಗರ ಪಾಲಿಕೆ ನೌಕರರ ಸಂಘ
8.ಬಳ್ಳಾರಿ ಮಹಾನಗರ ಪಾಲಿಕೆ ನೌಕರರ ಸಂಘ
9.ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ
10.ತುಮಕೂರು ಮಹಾನಗರ ಪಾಲಿಕೆ ನೌಕರರ ಸಂಘ ಯೋಜನೆಯನ್ನು ತಮಗೂ ಜಾರಿಗೊಳಿಸುವಂತೆ ಪ್ರತಿಭಟನೆ ಮಾಡುತ್ತಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:00 pm, Mon, 12 September 22




