AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ, 10ಕೆಜಿ ಅಕ್ಕಿ ಕೊಡ್ತೇವೆ: ಸಿದ್ದರಾಮಯ್ಯ ಭರವಸೆ

ಮೈಸೂರು: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತೆ. ನಾವು ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಹುಣಸೂರು ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಹೆಚ್​.ಪಿ.ಮಂಜುನಾಥ್ ಪರ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಕಣಗಲ್ ಬಳಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೆ. ನಾವು ಬಡವರಿಗೆ 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಪಕ್ಷಾಂತರಿಗಳಿಗೆ ತಕ್ಕ ಬುದ್ಧಿ ಕಲಿಸಿ: ಹೆಚ್​.ವಿಶ್ವನಾಥ್ ರಾಜೀನಾಮೆ […]

ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ, 10ಕೆಜಿ ಅಕ್ಕಿ ಕೊಡ್ತೇವೆ: ಸಿದ್ದರಾಮಯ್ಯ ಭರವಸೆ
ಸಾಧು ಶ್ರೀನಾಥ್​
|

Updated on:Nov 20, 2019 | 6:48 PM

Share

ಮೈಸೂರು: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತೆ. ನಾವು ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಹುಣಸೂರು ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಹೆಚ್​.ಪಿ.ಮಂಜುನಾಥ್ ಪರ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಕಣಗಲ್ ಬಳಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೆ. ನಾವು ಬಡವರಿಗೆ 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಪಕ್ಷಾಂತರಿಗಳಿಗೆ ತಕ್ಕ ಬುದ್ಧಿ ಕಲಿಸಿ: ಹೆಚ್​.ವಿಶ್ವನಾಥ್ ರಾಜೀನಾಮೆ ನೀಡಿದ ಕಾರಣ ಅನಗತ್ಯವಾಗಿ ಉಪಚುನಾವಣೆ ಬಂದಿದೆ. ಈ ಉಪಚುನಾವಣೆಯಲ್ಲಿ ಪಕ್ಷಾಂತರಿಗಳಿಗೆ ತಕ್ಕ ಬುದ್ಧಿ ಕಲಿಸಬೇಕು. ಹೀಗಾಗಿ ಕಾಂಗ್ರೆಸ್​ ಪಕ್ಷಕ್ಕೆ ಮತ ನೀಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

ನನ್ನನ್ನು ನೆಮ್ಮದಿಯಾಗಿರಲು ಬಿಟ್ಟಿರಲಿಲ್ಲ:  ಹೆಚ್​.ವಿಶ್ವನಾಥ್ ಅಂಥವರು ಸಾರ್ವಜನಿಕ ಜೀವನದಲ್ಲಿರಬಾರದು. ಅವರು ಯಾವ ಪಕ್ಷದವರೂ ನೆಮ್ಮದಿಯಾಗಿರಲು ಬಿಡಲ್ಲ. ನಾನು ಸಿಎಂ ಆಗಿದ್ದಾಗಲೂ ನೆಮ್ಮದಿಯಾಗಿರಲು ಬಿಡಲಿಲ್ಲ. ನನ್ನನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವಂತೆ ಪತ್ರ ಬರೆದಿದ್ದರು. ಅವರು ಜೆಡಿಎಸ್‌ಗೆ ಚೂರಿ ಹಾಕಿ ಬೇರೆ ಪಕ್ಷಕ್ಕೆ ಹೋಗಿದ್ದಾರೆ ಎಂದು ವಿಶ್ವನಾಥ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Published On - 5:29 pm, Wed, 20 November 19