ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ, 10ಕೆಜಿ ಅಕ್ಕಿ ಕೊಡ್ತೇವೆ: ಸಿದ್ದರಾಮಯ್ಯ ಭರವಸೆ

ಮೈಸೂರು: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತೆ. ನಾವು ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಹುಣಸೂರು ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಹೆಚ್​.ಪಿ.ಮಂಜುನಾಥ್ ಪರ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಕಣಗಲ್ ಬಳಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೆ. ನಾವು ಬಡವರಿಗೆ 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಪಕ್ಷಾಂತರಿಗಳಿಗೆ ತಕ್ಕ ಬುದ್ಧಿ ಕಲಿಸಿ: ಹೆಚ್​.ವಿಶ್ವನಾಥ್ ರಾಜೀನಾಮೆ […]

ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ, 10ಕೆಜಿ ಅಕ್ಕಿ ಕೊಡ್ತೇವೆ: ಸಿದ್ದರಾಮಯ್ಯ ಭರವಸೆ
ಸಾಧು ಶ್ರೀನಾಥ್​

Updated on: Nov 20, 2019 | 6:48 PM

ಮೈಸೂರು: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತೆ. ನಾವು ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಹುಣಸೂರು ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಹೆಚ್​.ಪಿ.ಮಂಜುನಾಥ್ ಪರ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಕಣಗಲ್ ಬಳಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೆ. ನಾವು ಬಡವರಿಗೆ 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಪಕ್ಷಾಂತರಿಗಳಿಗೆ ತಕ್ಕ ಬುದ್ಧಿ ಕಲಿಸಿ:
ಹೆಚ್​.ವಿಶ್ವನಾಥ್ ರಾಜೀನಾಮೆ ನೀಡಿದ ಕಾರಣ ಅನಗತ್ಯವಾಗಿ ಉಪಚುನಾವಣೆ ಬಂದಿದೆ. ಈ ಉಪಚುನಾವಣೆಯಲ್ಲಿ ಪಕ್ಷಾಂತರಿಗಳಿಗೆ ತಕ್ಕ ಬುದ್ಧಿ ಕಲಿಸಬೇಕು. ಹೀಗಾಗಿ ಕಾಂಗ್ರೆಸ್​ ಪಕ್ಷಕ್ಕೆ ಮತ ನೀಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

ನನ್ನನ್ನು ನೆಮ್ಮದಿಯಾಗಿರಲು ಬಿಟ್ಟಿರಲಿಲ್ಲ: 
ಹೆಚ್​.ವಿಶ್ವನಾಥ್ ಅಂಥವರು ಸಾರ್ವಜನಿಕ ಜೀವನದಲ್ಲಿರಬಾರದು. ಅವರು ಯಾವ ಪಕ್ಷದವರೂ ನೆಮ್ಮದಿಯಾಗಿರಲು ಬಿಡಲ್ಲ. ನಾನು ಸಿಎಂ ಆಗಿದ್ದಾಗಲೂ ನೆಮ್ಮದಿಯಾಗಿರಲು ಬಿಡಲಿಲ್ಲ. ನನ್ನನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವಂತೆ ಪತ್ರ ಬರೆದಿದ್ದರು. ಅವರು ಜೆಡಿಎಸ್‌ಗೆ ಚೂರಿ ಹಾಕಿ ಬೇರೆ ಪಕ್ಷಕ್ಕೆ ಹೋಗಿದ್ದಾರೆ ಎಂದು ವಿಶ್ವನಾಥ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Published On - 5:29 pm, Wed, 20 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us