AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಮತ್ತೇ ಭೂಕಂಪನ; ಭಾರೀ ಶಬ್ದ ಕೇಳಿ, ಭೂಮಿ ನಡುಗಿದ ಅನುಭವ

ಬೆಳಗ್ಗೆ 11.22ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪನದ ಅನುಭವದಿಂದ ಜನರು ಭಯಗೊಂಡಿದ್ದಾರೆ. ಕೆಲ ತಿಂಗಳ ಬಳಿಕ ಮತ್ತೇ ಭೂಕಂಪದ ಆತಂಕ ಉಂಟಾಗಿದೆ.

ವಿಜಯಪುರದಲ್ಲಿ ಮತ್ತೇ ಭೂಕಂಪನ; ಭಾರೀ ಶಬ್ದ ಕೇಳಿ, ಭೂಮಿ ನಡುಗಿದ ಅನುಭವ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 22, 2022 | 2:06 PM

Share

ವಿಜಯಪುರ: ಜಿಲ್ಲೆಯಲ್ಲಿ ಮತ್ತೇ ಭೂಕಂಪನ (Earthquake) ದ ಅನುಭವ ಉಂಟಾಗಿದೆ. ಭಾರೀ ಶಬ್ದ ಕೇಳಿ ಬಂದು ಭೂಮಿ‌ನಡುಗಿದ ಅನುಭವವಾಗಿದೆ. ವಿಜಯಪುರ ನಗರ ಸೇರಿದಂತೆ‌ ಸುತ್ತಮುತ್ತಲ ಗ್ರಾಮಗಳಲ್ಲಿ ಭೂಕಂಪನವಾಗಿದೆ. ಬೆಳಗ್ಗೆ 11.22ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪನದ ಅನುಭವದಿಂದ ಜನರು ಭಯಗೊಂಡಿದ್ದಾರೆ. ಕೆಲ ತಿಂಗಳ ಬಳಿಕ ಮತ್ತೇ ಭೂಕಂಪದ ಆತಂಕ ಉಂಟಾಗಿದೆ. 3.5ರಷ್ಟು ತೀವ್ರತೆಯಲ್ಲಿ ರಿಕ್ಟರ್‌ ಮಾಪನದಲ್ಲಿ ಭೂಮಿ‌ ಕಂಪಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಭೂಕಂಪನದ ಕೇಂದ್ರ ಬಿಂದು ಕಂಡುಬಂದಿದೆ. ಈ ಹಿಂದೆ (ಜನವರಿ 30) ಬೆಳಿಗ್ಗೆ 9.15 ಗಂಟೆಗೆ ಭೂಕಂಪನ ಸಂಭವಿಸಿತ್ತು. ರಿಕ್ಟರ್ ಮಾಪನದಲ್ಲಿ(Richter scale) 2.9 ರಷ್ಟು ತೀವ್ರತೆ ದಾಖಲಾಗಿತ್ತು. ವಿಜಯಪುರ (Vijayapura) ನಗರ ಹಾಗೂ ವಿಜಯಪುರ ತಾಲೂಕಿನ ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ ಸೇರಿ ಹಲವು ಗ್ರಾಮಗಳಲ್ಲಿಯೂ ಭೂಕಂಪನದ ಅನುಭವವಾಗಿತ್ತು.

ಭೂಮಿಯ 5 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿತ್ತು. ಕಳೆದ ಮೂರು ತಿಂಗಳ ಹಿಂದೆ ಸರಣಿ ಭೂಕಂಪನವಾಗಿತ್ತು. ಹಾಗೂ ಭೂಮಿಯಿಂದ ಭಾರೀ ಶಬ್ಧ ಕೇಳಿ ಬರುತ್ತಿತ್ತು. ಈ ಸಂಬಂಧ ವಿಜಯಪುರ ಜಿಲ್ಲೆಗೆ ವಿಜ್ಞಾನಿಗಳ ತಂಡ ಭೇಟಿ ನೀಡಿತ್ತು, ಸ್ಥಳ ಪರಿಶೀಲನೆಗೆ ಮುಂದಾಗಿದ್ದರು. ಸ್ಥಳ ಪರಿಶೀಲನೆ ಬಳಿಕ ವಿಜ್ಞಾನಿಗಳ ತಂಡ ಸ್ಥಳೀಯರಲ್ಲಿ ಧೈರ್ಯ ತುಂಬಿದ್ದರು.

ವಿಜಯಪುರದಲ್ಲಿ ಪದೇಪದೆ ಭೂಮಿ ಕಂಪಿಸುತ್ತಿರುವುದರಿಂದ ಜನರಲ್ಲಿ ಆತಂಕವೂ ಹೆಚ್ಚಾಗಿದೆ. ಕೆಲ ಬಾರಿ ರಿಕ್ಟರ್ ಮಾಪನದಲ್ಲಿ ದಾಖಲಾದರೆ, ಕೆಲ ಬಾರಿ ಮಾಪನದಲ್ಲಿ ದಾಖಲಾಗಿಲ್ಲ. ಇಲ್ಲಿಯವರೆಗೂ ಹಲವಾರು ಬಾರಿ ವಿಜಯಪುರದಲ್ಲಿ ಭೂಮಿ ಕಂಪಿಸಿದೆ. ಆದರೆ, ಇದುವರೆಗೂ ಯಾರಿಗೂ ಅಪಾಯಗಳಾಗಿಲ್ಲ. ಮನೆಯ ಕಿಟಕಿ ಗಾಜುಗಳು ಒಡೆದು, ಪಾತ್ರೆಗಳು ನೆಲಕ್ಕುರುಳಿದ ಘಟನೆಗಳು ನಡೆದಿವೆ.

ಇದನ್ನೂ ಓದಿ:

ಪುನೀತ್​ಗೆ​ ಮೈಸೂರು ವಿವಿಯಿಂದ ಡಾಕ್ಟರೇಟ್​; ಕಾರ್ಯಕ್ರಮದಲ್ಲಿ ರಾಜ್​ ಕುಟುಂಬ ಭಾಗಿ

ACB Raid: ಬೆಂಗಳೂರಿನಲ್ಲಿಂದು ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ; ಪತ್ತೆಯಾಯಿತು ಕಂತೆ ಕಂತೆ ಹಣ, ಒಬ್ಬರಿಗಿಂತ ಒಬ್ಬರು ಭ್ರಷ್ಟರು

Published On - 1:05 pm, Tue, 22 March 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು