AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ್ತೂರಿ ರಂಗನ್ ವರದಿ ವಿರುದ್ಧ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ, ಇದಕ್ಕಾಗಿಯೇ 1 ದಿನ ವಿಶೇಷ ಅಧಿವೇಶನ

ಪಶ್ಚಿಮ ಘಟ್ಟಗಳ ರಕ್ಷಣೆಗೆ ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿಯ ಏಳನೇ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕಳೆದ ವಾರ ನಡೆದ ವಿಧಾನಸಭೆ ಅಧಿವೇಶನದಲ್ಲೂ ಕೇಂದ್ರದ ಏಳನೇ ಕರಡು ಅಧಿಸೂಚನೆ ವಿರೋಧಿಸಲಾಗಿದೆ. ಈ ಕುರಿತು ಕಾನೂನು ಹೋರಾಲು‌ ರಾಜ್ಯ ಸರ್ಕಾರ ಮುಂದಾಗಿದೆ. ಇನ್ನು ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿ ನಡೆಸಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಅಲ್ಲದೇ ಬೇರೆ ವಿಷಯಗಳ ಬಗ್ಗೆಯೂ ಮಾತನಾಡಿದ್ದು, ಅದು ಈ ಕೆಳಗಿನಂತಿದೆ.

ಕಸ್ತೂರಿ ರಂಗನ್ ವರದಿ ವಿರುದ್ಧ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ, ಇದಕ್ಕಾಗಿಯೇ  1 ದಿನ ವಿಶೇಷ ಅಧಿವೇಶನ
Dk Shivakumar
Anil Kalkere
| Edited By: |

Updated on: Aug 26, 2026 | 10:25 PM

Share

ಬೆಂಗಳೂರು. (ಆಗಸ್ಟ್ 26): ಕಸ್ತೂರಿ ರಂಗನ್ ವರದಿಯ (Kasthuri rangan report) ಹಿನ್ನೆಲೆಯಲ್ಲಿ ಪಶ್ಚಿಮಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರಕಾರವು ಏಳನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನ ಕೈಗೊಂಡಿದ್ದು, ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ ವರದಿಯ ಜಾರಿ ಬಗ್ಗೆ ಆತಂಕ ಪಡಬೇಕಾಗಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಬಗ್ಗೆ ನಡೆದ ಚರ್ಚೆಗೆ ಉತ್ತರ ಕೊಡುವಾಗ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಕೇಂದ್ರದ ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶ ಇದೆ. ರಾಜ್ಯ ಸರ್ಕಾರ ತನ್ನ ಆಕ್ಷೇಪಣೆಗಳನ್ನು ಸಲ್ಲಿಸುವ ಮೂಲಕ ಕೇಂದ್ರದ ಅಧಿಸೂಚನೆಯನ್ನು ತಿರಸ್ಕರಿಸಲಾಗುತ್ತದೆ ಅಂದಿದ್ರು. ಕೇಂದ್ರ ಸರ್ಕಾರ ಮತ್ತೆ ಅಧಿಸೂಚನೆ ಹೊರಡಿಸಿರೋದು ಆ ಭಾಗದ ಶಾಸಕರ ತೀವ್ರ ವಿರೋಧಕ್ಕೆ ಕಾರಣವಾಗಿದೆ. ವಿಧಾನಸಭೆಯಲ್ಲಿ ನಿಯಮ 69 ರಡಿ ಕೇಂದ್ರ ಹೊರಡಿಸಿದ ಏಳನೇ ಕರಡು ಅಧಿಸೂಚನೆ ವಿರೋಧಿಸಿ ಶಾಸಕರಾದ ಎ.ಎಸ್ ಪೊನ್ನಣ್ಣ, ತಮ್ಮಯ್ಯ, ಟಿ ಡಿ ರಾಜೇಗೌಡ ಚರ್ಚೆ ಮಾಡಿದ್ರು. ಶಾಸಕರು ವರದಿ ಜಾರಿಯಾದರೆ ಏನೆಲ್ಲ ಪರಿಣಾಮ ಆಗಲಿದೆ ಎಂದು ಹಲವು ಆತಂಕಗಳನ್ನು ವ್ಯಕ್ತಪಡಿಸಿದರು. ಸರ್ಕಾರ ಅಧಿಸೂಚನೆ ತಿರಸ್ಕರಿಸಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ: ಸಚಿವರ ಕಾರ್ಯವೈಖರಿ ವಿರುದ್ಧವೂ MLCಗಳ ಅಸಮಾಧಾನ: ಡಿಕೆಶಿ ಸಭೆ ಕಂಪ್ಲೀಟ್ ಡಿಟೇಲ್ಸ್

ಇದರ ಮುಂದುವರಿದ ಭಾಗವಾಗಿ ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಶಾಸಕರು, ಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಲಾಯ್ತು. ಕಸ್ತೂರಿ‌ ರಂಗನ್ ವರದಿ ಬಗ್ಗೆ ರಾಜ್ಯದ ನಿಲುವು ಮುಖ್ಯವಾಗುತ್ತೆ. ಕೇಂದ್ರ ಸರ್ಕಾರ 6 ತಿಂಗಳು‌ ಸಮಯ ಕೊಟ್ಟಿದ್ದಾರೆ. 33 ತಾಲ್ಲೂಕು, ಸಾವಿರಕ್ಕೂ ಹೆಚ್ಚು ಗ್ರಾಮ ಬರುತ್ತೆ, 20608 ಚದರ ಮೀಟರ್ ಪ್ರದೇಶ ಇದೆ. ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಮಸ್ಯೆ ಆಗ್ತಿದೆ. ಸಿದ್ದರಾಮಯ್ಯ ಸರ್ಕಾರ ಇದ್ದಾಗ ಕ್ಯಾಬಿನೆಟ್ ನಲ್ಲಿ‌ ವಿರೋಧ ಮಾಡಿದ್ವಿ. ಈಗ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ. ಪಶ್ಚಿಮ ಘಟ್ಟದ ವಿಚಾರದಲ್ಲಿ ಜನರಿಗೆ ನಾವು ಜಾಗೃತಿ ಮೂಡಿಸುತ್ತೇವೆ. ಮುಂದಿನ‌ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಬೇಕು. ಸೆ.26ರ ಸಭೆಯ ವಿರುದ್ಧವಾಗಿ ನಮ್ಮ‌ ಅಭಿಪ್ರಾಯ ಕೇಂದ್ರ ತೆಗೆದುಕೊಂಡಿಲ್ಲ. ಮತ್ತೆ ಕೇಂದ್ರ‌ ಸರ್ಕಾರ ವಿರುದ್ಧ ಏನು ಮಾಡಬೇಕೋ ಮಾಡುತ್ತೇವೆಂದು ಸಿಎಂ ತಿಳಿಸಿದ್ದಾರೆ.

ಇದಷ್ಟೇ ಅಲ್ಲದೇ ಕಾನೂನು ಚೌಕಟ್ಟಿನಲ್ಲಿ ಚರ್ಚೆ ಮಾಡುತ್ತೇವೆ. ಕರಡುನಲ್ಲಿ ಮರಳು ಸಾಗಾಣಿಕೆ, ವಿದ್ಯುತ್, ನಿರ್ಮಾಣ ಅನೇಕ ವಿಚಾರ ಪ್ರಸ್ತಾಪ‌ ಮಾಡಿದ್ದಾರೆ. ನಮ್ಮ ವಿರೋಧ ಸಮರ್ಪಕವಾಗಿ ವ್ಯಕ್ತಪಡಿಸುತ್ತೇವೆ. ಇದು ಕರ್ನಾಟಕಕ್ಕೆ‌ ದೊಡ್ಡ ಆಘಾತ. ಹೀಗಾಗಿ ಮುಂದಿನ ತಿಂಗಳು ಒಂದು ದಿನದ ವಿಶೇಷ ಅಧಿವೇಶನ ನಡೆಸುವುದಾಗಿ ಸಿಎಂ ಮಾಹಿತಿ ನೀಡಿದ್ದಾರೆ.

ಇದರ ಜೊತೆಗೆ ಯುವಕರಿಗಾಗಿ ಭಾರತ್ ಜೋಡೋ ಸಂಘಟನೆ ಶುರುವಾಗಲಿದೆ. ಪ್ರತಿವರ್ಷ 10 ಲಕ್ಷ ರೂ. ಅನುದಾನ ನೀಡುತ್ತೇವೆ ಅಂದ್ರು, ಪ್ರಜಾಸೇವೆ ಎಂಬ ಹೊಸ ಇಲಾಖೆ ಆರಂಭವಾಗುತ್ತಿದ್ದು, ಶಾಸಕರು ಹಾಗೂ ಸಚಿವರು ಅಲ್ಲೇ ಜನರ ಸಮಸ್ಯೆ ಬಗೆಹರಿಸಲು ಮಾರ್ಗದರ್ಶನ ನೀಡಿದ್ದಾರೆ.

ಸದ್ಯ ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿಯ ಏಳನೇ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿಯೇ ವಿಶೇಷ ಅಧಿವೇಶನ ಕರೆಯಲಿದ್ದು, ಕೇಂದ್ರದ ವಿರುದ್ಧ ನಿರ್ಣಯ ಮಂಡಿಸಲು ಮುಂದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Anil Kalkere
Anil Kalkere
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಬೆರಗು
ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಬೆರಗು
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ
ಬೆಂಗಳೂರಿನಾದ್ಯಂತ ವರುಣಾರ್ಭಟ: ರಾತ್ರಿ ಮಳೆಗೆ ರಸ್ತೆಗಳು ಜಲಾವೃತ
ಬೆಂಗಳೂರಿನಾದ್ಯಂತ ವರುಣಾರ್ಭಟ: ರಾತ್ರಿ ಮಳೆಗೆ ರಸ್ತೆಗಳು ಜಲಾವೃತ
ಮುಂಬೈನ ಡಿಪೋದಲ್ಲಿ ಭಾರೀ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಬಸ್‌ಗಳು
ಮುಂಬೈನ ಡಿಪೋದಲ್ಲಿ ಭಾರೀ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಬಸ್‌ಗಳು
ಶಿವರಾಜ್‌ಕುಮಾರ್ ಆಗಮನ ವೇಳೆ ಪಟಾಕಿ ಸ್ಫೋಟ; ತಪ್ಪಿದ ದೊಡ್ಡ ಅಪಾಯ
ಶಿವರಾಜ್‌ಕುಮಾರ್ ಆಗಮನ ವೇಳೆ ಪಟಾಕಿ ಸ್ಫೋಟ; ತಪ್ಪಿದ ದೊಡ್ಡ ಅಪಾಯ
ಹೆಚ್ಚಿತು ಗಾನವಿ, ಯಶಸ್ ನಡುವಿನ ಆಪ್ತತೆ; ಸೌಂದರ್ಯಾ ಶೆಟ್ಟಿ ಕಥೆ ಏನು?
ಹೆಚ್ಚಿತು ಗಾನವಿ, ಯಶಸ್ ನಡುವಿನ ಆಪ್ತತೆ; ಸೌಂದರ್ಯಾ ಶೆಟ್ಟಿ ಕಥೆ ಏನು?