Accident; ಕ್ಯಾಂಟರ್‌ಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಸವಾರ ಸಾವು, ಹಿಂಬದಿ ಸವಾರನಿಗೆ ಗಂಭೀರ ಗಾಯ

| Updated By: ಆಯೇಷಾ ಬಾನು

Updated on: Jul 14, 2021 | 11:01 AM

ಖಾಸಗಿ ಕಾರು ಶೋ ರೂಮ್‌ನಲ್ಲಿ ಕೆಲಸ ಮಾಡುತ್ತಿದ್ದ ಜಗನ್ ತಡರಾತ್ರಿ ಸುಮಾರು 1.30ಕ್ಕೆ ಕನಕಪುರ ರಸ್ತೆಯ ಗಿರಿಯಾಸ್ ಶೋ ರೂಂ ಮುಂಭಾಗ ತೆರಳುವಾಗ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಹಿಂಬದಿ ಸವಾರ ಹರ್ಷಿತ್‌ಗೆ ಗಾಯಗಳಾಗಿವೆ.

Accident; ಕ್ಯಾಂಟರ್‌ಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಸವಾರ ಸಾವು, ಹಿಂಬದಿ ಸವಾರನಿಗೆ ಗಂಭೀರ ಗಾಯ
ಕ್ಯಾಂಟರ್‌ಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಸವಾರ ಸಾವು
Follow us on

ಬೆಂಗಳೂರು: ಕ್ಯಾಂಟರ್‌ಗೆ ಹಿಂದಿನಿಂದ ಬೈಕ್‌ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ತಡರಾತ್ರಿ ನಡೆದಿದೆ. ಬೈಕ್ ಸವಾರ ಜಗನ್(35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಖಾಸಗಿ ಕಾರು ಶೋ ರೂಮ್‌ನಲ್ಲಿ ಕೆಲಸ ಮಾಡುತ್ತಿದ್ದ ಜಗನ್ ತಡರಾತ್ರಿ ಸುಮಾರು 1.30ಕ್ಕೆ ಕನಕಪುರ ರಸ್ತೆಯ ಗಿರಿಯಾಸ್ ಶೋ ರೂಂ ಮುಂಭಾಗ ತೆರಳುವಾಗ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಹಿಂಬದಿ ಸವಾರ ಹರ್ಷಿತ್‌ಗೆ ಗಾಯಗಳಾಗಿವೆ. ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಮಗ ಸಾವು
ತುಮಕೂರಿನಲ್ಲೂ ಇದೇ ರೀತಿಯ ಘಟನೆ ನಡೆದಿದೆ. ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಬೆಂಗಳೂರಿಗೆ ರವಾನಿಸಲಾಗಿದೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಅಯ್ಯನಗುಡಿ ಗೊಲ್ಲಹಳ್ಳಿ ಬಳಿ ತಂದೆ ಮಗ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಕೆಟ್ಟು ನಿಂತ ಲಾರಿಗೆ ಬೈಕ್ ಡಿಕ್ಕಿಯಾಗಿ ಮಗ ಮಾರುತಿ(25) ಮೃತಪಟ್ಟಿದ್ದಾರೆ. ತಂದೆ ಪುಟ್ಟರಾಜುವಿಗೆ ಗಂಭೀರ ಗಾಯಗಳಾಗಿವೆ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಮಗ ಸಾವು

ಇನ್ನು ವಿದ್ಯುತ್ ಹರಿದು ಸುಮಾ(29) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ಹಳೇ ಜೈಲ್ ರಸ್ತೆ ಹೊಸನಗರ ಬಡಾವಣೆಯಲ್ಲಿ ಘಟನೆ ನಡೆದಿದೆ. ಬೆಳಿಗ್ಗೆ ನೀರಿನ ಮೋಟರ್ ಹಾಕುವ ವೇಳೆ ವಿದ್ಯುತ್ ಸ್ಪರ್ಶಿಸಿದೆ. ಕುಟುಂಬಸ್ಥರು ಸಹಾಯ ಮಾಡುವ ಮೊದಲೇ ವಿದ್ಯುತ್ ಹರಿದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ದೊಡ್ಡ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಮಹಿಳೆಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಕಾರು ಡಿಕ್ಕಿಯಾಗಿ ಪಾದಚಾರಿ ಸಾವು
ವಾಕಿಂಗ್​ಗೆ ಎಂದು ಹೋಗುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದಿದ್ದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆಯ ಎಸ್.ಎಸ್.ಆಸ್ಪತ್ರೆ ಎದುರು ನಡೆದಿದೆ. ಸ್ಥಳಕ್ಕೆ ದಾವಣಗೆರೆ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಅಪಘಾತವೆಸಗಿದ ಕಾರು ಚಾಲಕ‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ. ಗಂಗಪ್ಪ(60) ಮೃತ ದುರ್ದೈವಿ. ಬೈಕ್‌ನಲ್ಲಿದ್ದ ಮತ್ತಿಬ್ಬರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತವೆಸಗಿದ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಶೀಘ್ರದಲ್ಲೇ ಚಂದ್ರನಿಂದ ಭೂಮಿಗೆ ಕಾದಿದೆ ಕಂಟಕ: ವಿಜ್ಞಾನಿಗಳಿಂದ ಎಚ್ಚರಿಕೆ

Published On - 9:35 am, Wed, 14 July 21