AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯರಾತ್ರಿ ಹಾಸನದಲ್ಲಿ ಹಂಪ್ ಹಾರಿ ನೆಗೆದು ಬಿದ್ದ KSRTC ಬಸ್, ಒಬ್ಬರ ಸಾವು

ಹಾಸನ: ಮಧ್ಯರಾತ್ರಿ 1.50ರ ವೇಳೆಯಲ್ಲಿ ವೇಗವಾಗಿ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಹಂಪ್ ಹಾರಿ ನೆಗೆದು ಬಿದ್ದು ಓರ್ವ ಮೃತಪಟ್ಟಿರುವ ಘಟನೆ ಹಿರಿಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರನಿಂದ ಬೆಂಗಳೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಬಂಟ್ವಾಳ ಮೂಲದ‌ ಅಭಿಷೇಕ್(28) ಮೃತಪಟ್ಟಿದ್ದಾರೆ. ಬಸ್​ನಲ್ಲಿದ್ದ 25 ಜನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಲ್ಟಿಯಾದ ಬಸ್ ಸಮೀಪದಲ್ಲಿದ್ದ ಕಾರಿನ​ ಮೇಲೆ ಉರುಳಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಧ್ಯರಾತ್ರಿ ಹಾಸನದಲ್ಲಿ ಹಂಪ್ ಹಾರಿ ನೆಗೆದು ಬಿದ್ದ KSRTC ಬಸ್, ಒಬ್ಬರ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 25, 2019 | 11:51 AM

Share

ಹಾಸನ: ಮಧ್ಯರಾತ್ರಿ 1.50ರ ವೇಳೆಯಲ್ಲಿ ವೇಗವಾಗಿ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಹಂಪ್ ಹಾರಿ ನೆಗೆದು ಬಿದ್ದು ಓರ್ವ ಮೃತಪಟ್ಟಿರುವ ಘಟನೆ ಹಿರಿಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳೂರನಿಂದ ಬೆಂಗಳೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಬಂಟ್ವಾಳ ಮೂಲದ‌ ಅಭಿಷೇಕ್(28) ಮೃತಪಟ್ಟಿದ್ದಾರೆ. ಬಸ್​ನಲ್ಲಿದ್ದ 25 ಜನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಲ್ಟಿಯಾದ ಬಸ್ ಸಮೀಪದಲ್ಲಿದ್ದ ಕಾರಿನ​ ಮೇಲೆ ಉರುಳಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Published On - 11:44 am, Mon, 25 November 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು