ಹಾಸನ: ಮಧ್ಯರಾತ್ರಿ 1.50ರ ವೇಳೆಯಲ್ಲಿ ವೇಗವಾಗಿ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಂಪ್ ಹಾರಿ ನೆಗೆದು ಬಿದ್ದು ಓರ್ವ ಮೃತಪಟ್ಟಿರುವ ಘಟನೆ ಹಿರಿಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳೂರನಿಂದ ಬೆಂಗಳೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಬಂಟ್ವಾಳ ಮೂಲದ ಅಭಿಷೇಕ್(28) ಮೃತಪಟ್ಟಿದ್ದಾರೆ. ಬಸ್ನಲ್ಲಿದ್ದ 25 ಜನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಲ್ಟಿಯಾದ ಬಸ್ ಸಮೀಪದಲ್ಲಿದ್ದ ಕಾರಿನ ಮೇಲೆ ಉರುಳಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Published On - 11:44 am, Mon, 25 November 19