AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಲಕ್ಷ ಕೊಟ್ರೆ ಸಾಕು ಬಡವರಿಗೆ ಮನೆ: ಇದು ಕಾಂಗ್ರೆಸ್‌ನ 6ನೇ ಗ್ಯಾರಂಟಿ ಎಂದ ಜಮೀರ್

ಪ್ರಧಾನ‌ ಮಂತ್ರಿ ಆವಾಸ್‌ ಯೋಜನೆಯಡಿ ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಫಲಾನುಭವಿಗಳು ಕೇವಲ ಒಂದು ಲಕ್ಷ ರೂ.ಯನ್ನು ಪಾವತಿಸಿ ಮನೆಯನ್ನು ಪಡೆಯಬಹುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಒಂದೇ ಲಕ್ಷ ಕೊಟ್ರೆ ಸಾಕು ಬಡವರಿಗೆ ಮನೆ: ಇದು ಕಾಂಗ್ರೆಸ್‌ನ 6ನೇ ಗ್ಯಾರಂಟಿ ಎಂದ ಜಮೀರ್
ಜಮೀರ್ ಅಹಮ್ಮದ್ ಖಾನ್
TV9 Web
| Edited By: |

Updated on:Dec 21, 2023 | 9:35 PM

Share

ಬೆಂಗಳೂರು, (ಡಿಸೆಂಬರ್ 21): ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ (Pradhana Mantri Awas Yojana) ಟೆಂಡರ್ ಆಹ್ವಾನಿಸಿ ಅನುಷ್ಠಾನಗೊಳಿಸುತ್ತಿರುವ ಮನೆಗಳ‌ ಪೈಕಿ ಮುಕ್ತಾಯ ಹಂತದಲ್ಲಿರುವ 48,796 ಮನೆಗಳ ಪ್ರತಿ ಫಲಾನುಭವಿಗಳಿಂದ 1 ಲಕ್ಷ ರೂ. ಮಾತ್ರ ಸಂಗ್ರಹಿಸಿ ಉಳಿದ ಮೊತ್ತವನ್ನು ರಾಜ್ಯ ಸರ್ಕಾರದಿಂದ ಭರಿಸಲು ಸಂಪುಟ ತೀರ್ಮಾನಿಸಿದೆ.

ಇಂದು (ಡಿಸೆಂಬರ್ 21) ನಡೆದ ಮಹತ್ವದ ಸಂಪುಟ ಸಭೆ (Cabinet Meeting) ಬಳಿಕ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಎಚ್‌.ಕೆ. ಪಾಟೀಲ್‌ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಮೀರ್ ಅಹ್ಮದ್ ಖಾನ್ (Zameer Ahmad Khan), ಪ್ರಧಾನ‌ ಮಂತ್ರಿ ಆವಾಸ್‌ ಯೋಜನೆಯಡಿ ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಫಲಾನುಭವಿಗಳು ಕೇವಲ ಒಂದು ಲಕ್ಷ ರೂ. ಪಾವತಿಸಿ ಮನೆಯನ್ನು ಪಡೆಯಬಹುದು. ಇದು ಕಾಂಗ್ರೆಸ್‌ ಚುನಾವಣೆಗೆ ಮುನ್ನ ಘೋಷಿಸದೇ ಇರುವ ಆರನೇ ಗ್ಯಾರಂಟಿ ಎಂದು ಪರಿಗಣಿಸಬಹುದು ಎಂದು ಹೇಳಿದರು.

ಇದನ್ನೂ ಓದಿ: ಬುಡಕಟ್ಟು ಪಂಗಡಗಳ ಜನರಿಗೆ ಉಚಿತ ಪೌಷ್ಟಿಕ ಆಹಾರ, ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಲ್ಲಿವೆ

ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ 2015ರಲ್ಲಿ 1,80,253 ಮನೆಗಳು ಮಂಜೂರಾಗಿದ್ದವು. ಆದರೆ, 2015ರಿಂದ 2023ರ ವರೆಗೂ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಒಂದೇ ಒಂದು ಮನೆಯನ್ನು ಕೊಡಲು ಸಾಧ್ಯವಾಗಿಲ್ಲ. 2015ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಇದ್ದಾಗ ಪ್ರತಿ ವರ್ಷವೂ ಒಂದಷ್ಟು ಮನೆಗಳಿಗೆ ಮಂಜೂರಾತಿ ನೀಡಲಾಗಿತ್ತು. 2018ರಿಂದ ಒಂದೇ ಒಂದು ಮನೆಯನ್ನು ಮಂಜೂರಾತಿ ನೀಡಲಾಗಿಲ್ಲ.

ಆವಾಸ್‌ ಯೋಜನೆಯ ಪ್ರಕಾರ ಫಲಾನುಭವಿಗಳು 4.5 ಲಕ್ಷ ರೂ. ಪಾವತಿಸಬೇಕು. ಕೇಂದ್ರ ಸರಕಾರ 1.5 ಲಕ್ಷ ರೂ. ನೀಡುತ್ತದೆ, ರಾಜ್ಯ ಸರಕಾರ ಒಂದು ಲಕ್ಷ ರೂ. ನೀಡಬೇಕು. ಆದರೆ, ರಾಜ್ಯ ಸರ್ಕಾರ ಇದುವರೆಗೂ ತನ್ನ ಪಾಲಿನ ಹಣ ಬಿಡುಗಡೆ ಮಾಡಿಲ್ಲ. ಜತೆಗೆ ಹಲವಾರು ಫಲಾನುಭವಿಗಳು 4.5 ಲಕ್ಷ ರೂ. ಕಟ್ಟಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ.

ಈಗ ಸರ್ಕಾರ ಮಾಡುವುದೇನು?

ಹೊಸ ಯೋಜನೆಯ ಪ್ರಕಾರ ರಾಜ್ಯ ಸರ್ಕಾರ 500 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಹಣ ಬಿಡುಗಡೆಗೆ ಒಪ್ಪಿದ್ದಾರೆ. ಈಗ ಮನೆ ಪಡೆಯುವ ಫಲಾನುಭವಿಗಳು ಕೇವಲ ಒಂದು ಲಕ್ಷ ರೂ. ಕಟ್ಟಿದರೆ ಸಾಕು. ಕೇಂದ್ರ ಸರ್ಕಾರ ಒಂದುವರೆ ಲಕ್ಷವನ್ನು ಕೊಡುತ್ತದೆಯಾದರೂ ಈ ಮೊತ್ತವನ್ನು ಅದು ಜಿಎಸ್ಟಿ ಮೂಲಕ ಮರಳಿ ಪಡೆಯುತ್ತದೆ ಎಂದು ಜಮೀರ್‌ ಅಹಮ್ಮದ್ ಖಾನ್‌ ಹೇಳಿದರು.

ರಾಜ್ಯದಲ್ಲಿ 1.8 ಲಕ್ಷ ಮನೆಗಳು ನಿರ್ಮಾಣ ಹಂತದಲ್ಲಿವೆ. ಇದೀಗ ಇವುಗಳನ್ನು ಪೂರ್ಣಗೊಳಿಸಲು 6,170 ಕೋಟಿ ರೂ ಬೇಕಾಗಿದೆ. ಇದರ ಪೈಕಿ 5,403 ಕೋಟಿ ಫಲಾನುಭವಿಗಳ ಮೂಲಕ ಬರಬೇಕಿದೆ.

Published On - 9:33 pm, Thu, 21 December 23

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ